News Kannada
Thursday, November 30 2023
ಮನರಂಜನೆ

ಬಹುಕಾಲದ ಗೆಳತಿ ಜತೆ ಹಸೆಮಣೆ ಏರುತ್ತಿದ್ದಾರೆ ವಾಸುಕಿ ವೈಭವ್

vasuki
Photo Credit : News Kannada

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಗಾಯಕ, ಸಂಗೀತ ನಿರ್ದೇಶಕ, ನಟ ವಾಸುಕಿ ವೈಭವ್​ ಅವರು ಇಂದು (ನ.16) ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಬಹುಕಾಲದ ಗೆಳತಿ ಬೃಂದಾ ವಿಕ್ರಮ್ ಜೊತೆ ಅವರು ಹಸೆಮಣೆ ಏರುತ್ತಿದ್ದಾರೆ.

ಕೇವಲ ಕುಟುಂಬದವರು, ಆಪ್ತರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಮದುವೆ ಕಾರ್ಯಗಳು ನಡೆಯುತ್ತಿವೆ. ಹೆಚ್ಚು ಆಡಂಬರ ಇಲ್ಲದೇ, ಸಂಪ್ರದಾಯ ಬದ್ಧವಾಗಿ ವಾಸುಕಿ ವೈಭವ್​ ಮತ್ತು ಬೃಂದಾ ವಿಕ್ರಮ್​ ಅವರು ಮದುವೆ ಆಗುತ್ತಿದ್ದಾರೆ. ಹೊಸ ಜೀವನ ಆರಂಭಿಸುತ್ತಿರುವ ಈ ಜೋಡಿಗೆ ಎಲ್ಲರೂ ಶುಭ ಹಾರೈಸುತ್ತಿದ್ದಾರೆ.

ವಾಸುಕಿ ವೈಭವ್​ ಮತ್ತು ಬೃಂದಾ ವಿಕ್ರಮ್​ ಅವರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಬೃಂದಾ ವಿಕ್ರಮ್​ ಅವರು ರಂಗಭೂಮಿ ಹಿನ್ನೆಲೆ ಹೊಂದಿದ್ದಾರೆ. ಶಿಕ್ಷಕಿ ಆಗಿಯೂ ಅವರು ಕೆಲಸ ಮಾಡುತ್ತಿದ್ದಾರೆ. ‘ಹೊಸ ಪಯಣ ಆರಂಭ ಆಗಿದೆ. ನಿಮ್ಮೆಲ್ಲರ ಆಶೀರ್ವಾದ ಮತ್ತು ಹಾರೈಕೆ ಬೇಕು’ ಎಂದು ವಾಸುಕಿ ವೈಭವ್​ ಅವರು ಇನ್​ಸ್ಟಾಗ್ರಾಮ್​ ಸ್ಟೇಟಸ್​ನಲ್ಲಿ ಬರೆದುಕೊಂಡಿದ್ದಾರೆ.

 

See also  ಪವರ್‌ ಸ್ಟಾರ್‌ ನಟನೆಯ ಜೇಮ್ಸ್‌ ಚಿತ್ರದ ಲಿರಿಕಲ್‌ ವಿಡಿಯೊ ಸಾಂಗ್‌ ರಿಲೀಸ್‌!
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು