ದುಬೈ: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಯುಎಇ ಘಟಕ ದುಬೈನ ‘ದುಬೈ ಗಡಿನಾಡ ಉತ್ಸವ’ ಕಾರ್ಯಕ್ರಮವು ನವಂಬರ್ ೨೦ ಆದಿತ್ಯವಾರ ದುಬೈನ ಜೆಎಸ್‌ಎಸ್ ಶಾಲೆಯ ಆಲ್ ಸಾಫಾ ಅಡಿಟೋರಿಯಂನಲ್ಲಿ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಅಬುಧಾಬಿಯ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಪ್ರೇಮ್ ಹೆಲ್ತ್ ಕೇರ್ ಗ್ರೂಪ್ ಪ್ರಸ್ತುತ ಪಡಿಸಲಿದೆ.
ಎಡನೀರು ಮಠಕ್ಕೆ ಭೇಟಿ ನೀಡಿದ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಪದಾಧಿಕಾರಿಗಳು ಸ್ವಾಮೀಜಿಯವರ ಆಶೀರ್ವಾದ ಪಡೆದರು. ದುಬೈಯಲ್ಲಿ ಆಯೋಜಿಸಿದ ಕನ್ನಡದ ಕಾರ್ಯಕ್ರಮಕ್ಕೆ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಮಹಾಸ್ವಾಮಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.