NewsKarnataka
Saturday, July 31 2021

ಮುಂಬೈ

ಮುಂಬೈನಲ್ಲಿ ಗೋಡೆ ಕುಸಿತ– ಮೃತರ ಸಂಖ್ಯೆ 25ಕ್ಕೆ ಏರಿಕೆ, ಪರಿಹಾರ ಘೋಷಣೆ

ಮುಂಬೈ: ಮುಂಬೈನ ಚೆಂಬೂರ್ ಹಾಗೂ ವಿಕ್ರೋಲಿಯದಲ್ಲಿ ಗೋಡೆ ಕುಸಿತದಿಂದ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಮೃತರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಲಾ ₹5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಭಾರಿ ಮಳೆಯಿಂದಾಗಿ ಮುಂಬೈ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಭೂಕುಸಿತ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಲೋಕಲ್‌ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಮುಂಬೈ ನಗರದಲ್ಲಿ ಶನಿವಾರ ರಾತ್ರಿಯಿಂದಲೂ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಭಾನುವಾರದಂದು ಸಹ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ ಅಧಿಕಾರಿಗಳು ಎಚ್ಚರವಾಗಿರಲು ಮತ್ತು ಪರಿಸ್ಥಿತಿಯ ಮೇಲೆ ಕಣ್ಣಿಡಲು ಠಾಕ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೀಠಿ ನದಿ ದಡ ಮತ್ತು ತೀರಕ್ಕೆ ಹತ್ತಿರವಿರುವ ಇತರ ಸ್ಥಳಗಳಲ್ಲಿ ವಾಸಿಸುವವರನ್ನು ಕೂಡಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು. ಭಾರಿ ಮಳೆಯಿಂದಾಗಿ ಜಂಬೊ ಕೋವಿಡ್-19 ಕೇಂದ್ರಗಳಲ್ಲಿ ವೈದ್ಯಕೀಯ ಸೌಲಭ್ಯಗಳ ಪೂರೈಕೆಗೆ ಪರಿಣಾಮ ಬೀರದಂತೆ ನೋಡಿಕೊಳ್ಳಬೇಕೆಂದು ಠಾಕ್ರೆ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

Leave a Reply

Your email address will not be published. Required fields are marked *

Subscribe to our Brand New YouTube Channel

Subscribe Newsletter

Get latest news karnataka updates on your email.