News Kannada
Wednesday, February 01 2023

ಇತರೆ

ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗಿ

Photo Credit :

ದಾವೋಸ್ : ಸ್ವಿಟ್ಸರ್ಲೆಂಡ್ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯ ಕುರಿತ ಗೋಷ್ಠಿಯಲ್ಲಿ ಭಾಗಿಯಾಗಿ ಕರ್ನಾಟಕದಲ್ಲಿ ನೆಲ, ಜಲ ಸಂರಕ್ಷಣೆಯ ಕುರಿತು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ತಿಳಿಸಿದರು.

ಭೂಮಿ ಮತ್ತು ಮಣ್ಣಿನ ರಕ್ಷಣೆ ಕುರಿತಾಗಿ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ ಬೊಮ್ಮಾಯಿ ”ನಮಗೆಲ್ಲ ಸದ್ಗುರುಗಳು ಸ್ಫೂರ್ತಿ , ನೆಲ ಮತ್ತು ಜಲ ಸಂರಕ್ಷಣೆಯಲ್ಲಿ ತನ್ನದೇ ಆದ ಮಹತ್ವದ ಕೊಡುಗೆಯನ್ನು ಜಗತ್ತಿಗೆ ನೀಡಿದವರು ಅವರು” ಎಂದರು.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಅವರು ಜತೆಗಿದ್ದರು. ಇಶಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

See also  ಬಾಕಿ ಇರುವ ಅರಣ್ಯ ಸಂಬಂಧಿ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿದೆ: ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು