ಬೈಕ್ ಗೆ ಟ್ಯಾಂಕರ್ ಡಿಕ್ಕಿ: ಸವಾರ ಸಾವು

ಬೈಕ್ ಗೆ ಟ್ಯಾಂಕರ್ ಡಿಕ್ಕಿ: ಸವಾರ ಸಾವು

HSA   ¦    Feb 13, 2020 06:56:26 PM (IST)

ಮಂಗಳೂರು: ಬೈಕ್ ಗೆ ಟ್ಯಾಂಕರ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆಯು ಗುರುವಾರ ಸಂಜೆ ವೇಳೆ ನಂತೂರ್ ಸರ್ಕಲ್ ನಲ್ಲಿ ನಡೆದಿದೆ.

ಮೃತ ಸವಾರನನ್ನು ಮಣ್ಣಗುಡ್ಡೆ ನಿವಾಸಿ ಕಾರ್ತಿಕ್ ಮಲ್ಯ ಎಂದು ಗುರುತಿಸಲಾಗಿದೆ. ಬೈಕ್ ಗೆ ಹಿಂಬದಿಯಿಂದ ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಂತೂರ್ ಸರ್ಕಲ್ ಹಿಂದಿನಿಂದಲೂ ಹಲವಾರು ಅಪಘಾತಗಳಿಗೆ ಕಾರಣವಾಗಿದೆ. ಹಲವಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಆಡಳಿತ ವರ್ಗ ಮಾತ್ರ ಇದರ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.