ಉದ್ಯೋಗ ನೈಪುಣ್ಯ ತರಬೇತಿ ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಉದ್ಯೋಗ ನೈಪುಣ್ಯ ತರಬೇತಿ ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

GK   ¦    Jul 31, 2020 06:50:50 PM (IST)
ಉದ್ಯೋಗ ನೈಪುಣ್ಯ ತರಬೇತಿ ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಸುಳ್ಯ: ಗ್ರಾಮ ವಿಕಾಸ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು, ದ.ಕ.ಜಿಲ್ಲಾ ಸಹಕಾರ ಭಾರತಿ  ಮತ್ತು ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಇದರ ಆಶ್ರಯದಲ್ಲಿ ಆತ್ಮ ನಿರ್ಭರ ಭಾರತಕ್ಕಾಗಿ ಉದ್ಯೋಗ ನೈಪುಣ್ಯ ತರಬೇತಿ ಶಿಬಿರ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ಜರುಗುತ್ತಿದ್ದು, ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಶುಕ್ರವಾರ ಭೇಟಿ ನೀಡಿ ತರಬೇತಿ ಕಾರ್ಯಕ್ರಮವನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ  ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸುಳ್ಯ ಎಪಿಎಂಸಿ ಅಧ್ಯಕ್ ದೀಪಕ್ ಕುತ್ತಮೊಟ್ಟೆ, ಉಪಾಧ್ಯಕ್ಷ ಸಂತೋಷ್ ಜಾಕೆ, ಸಿ.ಎ. ಬ್ಯಾಂಕ್ ಅಧ್ಯಕ್ಷ ಹರೀಶ್ ಬೂಡುಪನ್ನೆ, ನ.ಪಂ. ಸದಸ್ಯರಾದ ವಿನಯಕುಮಾರ್ ಕಂದಡ್ಕ, ಶಶಿಕಲಾ ನೀರಬಿದಿರೆ, ವಾಣಿಶ್ರೀ ಜಟ್ಟಿಪಳ್ಳ, ಪ್ರವಿತಾ ಪ್ರಶಾಂತ್ ಕಾಯರ್ತೋಡಿ, ಶಿಲ್ಪಾ ಸುದೇವ್, ಕಿಶೋರಿ ಶೇಟ್, ಶೀಲಾ ಕುರುಂಜಿ ಉಪಸ್ಥಿತರಿದ್ದರು.

ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು

ರಾಜ್ಯ ಸಚಿವ ಸಂಪುಟದ ವಿಸ್ತರಣೆ ಮತ್ತು ಸುಳ್ಯ ಶಾಸಕ ಎಸ್. ಅಂಗಾರರಿಗೆ ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

 ಸುಳ್ಯಕ್ಕೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದರು. ಅಂಗಾರರಿಗೆ ಸಚಿವ ಸ್ಥಾನ ದೊರೆಯುವ ನಿಟ್ಟೊನಲ್ಲಿ ನಮ್ಮ ಪ್ರಯತ್ನ ಯಾವಾಗಲು ಇದೆ ಎಂದು ಹೇಳಿದರು. ಈ ಬಾರಿ ಸಂಪುಟ ಪುನರಚನೆ ಸಾಧ್ಯತೆ ಕಡಿಮೆ ಇದೆ ಎಂದು ಅವರು ಹೇಳಿದರು.