ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ನಿಧನ

ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ನಿಧನ

May 04, 2021 12:09:26 PM (IST)
ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ನಿಧನ

ಮಂಗಳೂರು: ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಬ್ರಹ್ಮಾವರದ ಆವರ್ಸೆ ಪಡುಮನೆಯಲ್ಲಿ ಜನಿಸಿದ ಸುರೇಂದ್ರ ಶೆಟ್ಟಿ ಅಚ್ಲಾಡಿಯಲ್ಲಿ ಬೆಳೆದರು.
ಮಂಗಳೂರು ವಿ.ವಿ. ಯ ಸಮೂಹ‌ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದರು.
ಅವರು ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯಕರ್ನಾಟಕ, ವಾರ್ತಾ ಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಕೆಲ ಕಾಲ ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿ ಮುಖ್ಯಸ್ಥರಾಗಿದ್ದರು. ಮಂಗಳೂರು ವಿ.ವಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಳೆ ವಿದ್ಯಾರ್ಥಿಗಳ ಸಂಘ MAAMನ ಸ್ಥಾಪಕ ಗೌರವಾಧ್ಯಕ್ಷರಾಗಿದ್ದರು. ವಿಭಾಗದ ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾಗಿದ್ದರು.
MAAM ಸಂಘಟನೆ ಮಂಗಳೂರಿನ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರಿಗೆ ಏರ್ಪಡಿಸಿದ ಮನೋಭಿನಂದನ ಸಮಾರಂಭದಲ್ಲಿ ಹೊರ ತಂದ ಮನೋಭಿನಂದನ ಅಭಿನಂದನಾ ಗ್ರಂಥದ ಸಂಪಾದಕರಾಗಿದ್ದರು.
ಕಳೆದ ಎರಡು ವರ್ಷಗಳಿಂದ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ದುಡಿಯುತ್ತಿದ್ದರು.
ಅವರು ಪತ್ನಿ, ಪುತ್ರಿ, ಕುಟುಂಬಸ್ಥರನ್ನು ಅಗಲಿದ್ದಾರೆ.
ಸಂತಾಪ: ಸುರೇಂದ್ರ ಶೆಟ್ಟಿ ನಿಧನಕ್ಕೆ ಮೀಡಿಯಾ ಅಲ್ಯುಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ (MAAM) ಇದರ ಗೌರವಾಧ್ಯಕ್ಷ ವೇಣು ಶರ್ಮ ಸಹಿತ ಎಲ್ಲ ಪದಾಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಸಂಘಟನೆಯ ಆರಂಭದ ದಿನಗಳಿಂದಲೂ ಅವರ ಸಹಭಾಗಿತ್ವ ಮತ್ತು ಮಾರ್ಗದರ್ಶನವನ್ನು ವೇಣು ಶರ್ಮ ಸ್ಮರಿಸಿದ್ದಾರೆ.