ಮಂಗಳೂರಿಗೆ ಡಿ.ಕೆ.ಶಿವಕುಮಾರ್ ಭೇಟಿ

ಮಂಗಳೂರಿಗೆ ಡಿ.ಕೆ.ಶಿವಕುಮಾರ್ ಭೇಟಿ

HSA   ¦    Jul 31, 2020 02:20:56 PM (IST)
ಮಂಗಳೂರಿಗೆ ಡಿ.ಕೆ.ಶಿವಕುಮಾರ್ ಭೇಟಿ

ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿಕೊಂಡ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದರು.

ಶಿವಕುಮಾರ್ ಅವರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಕೂಡ ಇದ್ದರು. ಕಾಂಗ್ರೆಸ್ ನ ಹಿರಿಯ ನಾಯಕ ಅಭಯಚಂದ್ರ ಜೈನ್, ಮಾಜಿ ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಹರೀಶಕುಮಾರ್, ಐವನ್ ಡಿಸೋಜಾ, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮಿಥುನ್ ರೈ ಮೊದಲಾದವರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಶಿವಕುಮಾರ್ ಅವರು ಮಾಜಿ ಸಚಿವ ಆಸ್ಕರ್ ಫರ್ನಾಂಡೀಸ್ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು ಮತ್ತು ಬಿಷಪ್ ಹೌಸ್ ಗೂ ಭೇಟಿ ನೀಡಿದರು.