ಬಿಜೆಪಿ ಸರ್ಕಾರ ಸುಭದ್ರವಾಗಿದೆ: ಶಾಸಕ ರಾಜೇಶ್ ನಾಯ್ಕ್

ಬಿಜೆಪಿ ಸರ್ಕಾರ ಸುಭದ್ರವಾಗಿದೆ: ಶಾಸಕ ರಾಜೇಶ್ ನಾಯ್ಕ್

MV   ¦    Dec 10, 2019 09:40:42 AM (IST)
ಬಿಜೆಪಿ ಸರ್ಕಾರ ಸುಭದ್ರವಾಗಿದೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಒಟ್ಟು ೧೫ರಲ್ಲಿ ೧೨ ಸ್ಥಾನಗಳಲ್ಲಿ ವಿಜಯಿಯಾಗಿದ್ದು, ಬಿಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಜನಪರ ಆಡಳಿತ ನೀಡಲು ಬದ್ಧ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.

ಬಿ.ಸಿ.ರೋಡಿನ ಫ್ಲೈಓವರ್ ಪಕ್ಕದಲ್ಲಿ ಕಾರ್ಯಕರ್ತರು ಸೋಮವಾರ ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವವನ್ನು ಆಚರಿಸಿದ ಸಂದರ್ಭ ಅವರು ಮಾತನಾಡಿದರು. ಈ ಸಂದರ್ಭ ಪಕ್ಷ ಪ್ರಮುಖರಾದ ಕೆ.ಹರಿಕೃಷ್ಣ ಬಂಟ್ವಾಳ್, ದೇವದಾಸ ಶೆಟ್ಟಿ, ರಾಮದಾಸ ಬಂಟ್ವಾಳ, ದಿನೇಶ್ ಅಮ್ಟೂರು, ಪ್ರಕಾಶ್ ಅಂಚನ್, ಗಣೇಶ ರೈ ಮಾಣಿ, ಯಶೋಧರ ಕರ್ಬೆಟ್ಟು, ಪ್ರದೀಪ್ ಅಜ್ಜಿಬೆಟ್ಟು, ರಮಾನಾಥ ರಾಯಿ, ಸಂತೋಷ್ ಕೋಟ್ಯಾನ್, ಯಶೋಧರ ಕರ್ಬೆಟ್ಟು, ಪುರುಷೋತ್ತಮ ಶೆಟ್ಟಿ, ಆನಂದ ಶಂಭೂರು, ಪ್ರಮೋದ್ ಕುಮಾರ್ ಅಜ್ಜಿಬೆಟ್ಟು ಮೊದಲಾದವರು ಉಪಸ್ಥಿತರಿದ್ದು ಜಯಘೋಷ ಮೊಳಗಿಸಿದರು.