ಮಂಗಳೂರು ವಿಮಾನ ನಿಲ್ದಾಣಕ್ಕೆ ಜಗತ್ತಿನ ಅತ್ಯುತ್ತಮ ನಿಲ್ದಾಣ ಪ್ರಶಸ್ತಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಜಗತ್ತಿನ ಅತ್ಯುತ್ತಮ ನಿಲ್ದಾಣ ಪ್ರಶಸ್ತಿ

YK   ¦    Mar 10, 2020 11:06:27 AM (IST)
ಮಂಗಳೂರು ವಿಮಾನ ನಿಲ್ದಾಣಕ್ಕೆ ಜಗತ್ತಿನ ಅತ್ಯುತ್ತಮ ನಿಲ್ದಾಣ ಪ್ರಶಸ್ತಿ

ಮಂಗಳೂರು:  ಏರ್ ಪೋರ್ಟ್ಸ್ ಕೌನ್ಸಿಲ್ ಇಂಟರ್ ನ್ಯಾಷನಲ್ ನಡೆಸಿದ ಸಮೀಕ್ಷೆಯಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಜಗತ್ತಿನ ಅತ್ಯುತ್ತಮ ವಿಮಾನ ನಿಲ್ದಾಣ ಎಂಬ ಸ್ಥಾನವನ್ನು ಪಡೆದುಕೊಂಡಿದೆ.

ವಿಮಾನ ನಿಲ್ದಾಣಕ್ಕೆ ಸಂಪರ್ಕ ಲಭ್ಯತೆ, ಚೆಕ್ ಇನ್, ಭದ್ರತಾ ತಪಾಸಣೆ, ಪ್ರಯಾಣಿಕ ಸ್ನೇಹಿ ಸೌಲಭ್ಯಗಳು, ಆಹಾರದ ಲಭ್ಯತೆ, ಪರಿಸರ ಸ್ನೇಹಿ ವಾತಾವರಣ, ಪ್ರಯಾಣಿಕರ ಗಮನ ವಿಭಾಗದಲ್ಲಿ ಸೌಕರ್ಯಗಳು ಸೇರಿದಂತೆ 34 ಅಂಶಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಎಸಿಐ ನಡೆಸಿದ ಏರ್ ಪೋರ್ಟ್ ಸರ್ವಿಸ್ ಕ್ವಾಲಿಟಿ ಸಮೀಕ್ಷೆಯಲ್ಲಿ  ಭಾರತದ ನಾಲ್ಕು ವಿಮಾನ ನಿಲ್ದಾಣಗಳು ಜಗತ್ತಿನ ಅತ್ಯುತ್ತಮ ವಿಮಾನ ನಿಲ್ದಾಣಗಳೆಂಬ ರೇಟಿಂಗ್ ಪಡೆದುಕೊಂಡಿದೆ. ಮಂಗಳೂರು, ಚಂಡೀಗಡ, ತಿರುವನಂತಪುರ ಮತ್ತು ಲಕ್ನೋ ವಿಮಾನ ನಿಲ್ದಾಣಗಳು ಹತ್ತು ಪ್ರಶಸ್ತಿಗಳೊಂದಿಗೆ ಮಾನ್ಯತೆ ಪಡೆದುಕೊಂಡಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.