ಕೊರೊನಾ: ದಕ್ಷಿಣ ಕನ್ನಡದಲ್ಲಿ ಇಂದು ಐವರು ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

ಕೊರೊನಾ: ದಕ್ಷಿಣ ಕನ್ನಡದಲ್ಲಿ ಇಂದು ಐವರು ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

YK   ¦    May 23, 2020 02:46:34 PM (IST)
ಕೊರೊನಾ: ದಕ್ಷಿಣ ಕನ್ನಡದಲ್ಲಿ  ಇಂದು ಐವರು ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಇಲ್ಲಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 5 ಜನ ಗುಣಮುಖರಾಗಿ ಇಂದು ಬಿಡುಗಡೆಯಾಗಿದ್ದಾರೆ.

ಇವರಲ್ಲಿ 4 ಮಂದಿ ಬಂಟ್ವಾಳ,1 ಬೊಳೂರು ನಿವಾಸಿಗಳಾಗಿದ್ದಾರೆ.

ಜಿಲ್ಲಾಡಳಿತದ ವತಿಯಿಂದ ವೆನ್ಲಾಕ್ ಆಯುಷ್ ಬ್ಲಾಕ್ ಮುಂಭಾಗದಲ್ಲಿ ಆಸ್ಪತ್ರೆಯ ವೈದ್ಯರು ಸಿಬ್ಬಂದಿ ಬೀಳ್ಕೊಟ್ಟರು. 

ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ 31 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಮೂವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.