ಕಾಂಗ್ರೆಸ್ ಸೋಲಿನ ಬಗ್ಗೆ ಈ ಹಿಂದೆಯೇ ಹೇಳಿದ್ದೆ: ಪೂಜಾರಿ

ಕಾಂಗ್ರೆಸ್ ಸೋಲಿನ ಬಗ್ಗೆ ಈ ಹಿಂದೆಯೇ ಹೇಳಿದ್ದೆ: ಪೂಜಾರಿ

HSA   ¦    Dec 09, 2019 02:52:03 PM (IST)
ಕಾಂಗ್ರೆಸ್ ಸೋಲಿನ ಬಗ್ಗೆ ಈ ಹಿಂದೆಯೇ ಹೇಳಿದ್ದೆ: ಪೂಜಾರಿ

ಮಂಗಳೂರು: ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡಿರುವುದನ್ನು ನೋಡಿರುವ ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ಕಣ್ಣೀರಿಟ್ಟರು.

ಜೆಪ್ಪುವಿನಲ್ಲಿರುವ ಪ್ರಶಾಂತ ಆಶ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ಕಾಂಗ್ರೆಸ್ ಉಪಚುನಾವಣೆಯಲ್ಲಿ ಸಾಯುತ್ತದೆ ಎಂದು ನಾನು ಮೊದಲೇ ಹೇಳಿದ್ದೆ. ಕಾಂಗ್ರೆಸ್ ದುರಹಂಕಾರದಿಂದ ಹೀಗೆ ಆಗಿದೆ. ನನ್ನ ಪಕ್ಷದವರಿಗೆ ಕೈಮುಗಿದು ಕೇಳಿಕೊಂಡರೂ ಅವರಿಗೆ ಇದು ಅರ್ಥವಾಗಲಿಲ್ಲ. ದುರಂಹಕಾರ ಮಾಡಬೇಡಿ ಎಂದು ಅವರು ತಿಳಿಸಿದರು.