NewsKarnataka
Saturday, July 31 2021

ಕರ್ನಾಟಕ

ಬೆಂಗಳೂರಿನಲ್ಲಿ ಮತ್ತೆ ರೌಡಿಗಳ ಮನೆಗಳಿಗೆ ಸಿಸಿಬಿ ಪೊಲೀಸರ ದಾಳಿ

31-Jul-2021

ಬೆಂಗಳೂರು: ಕೆಲ ದಿನಗಳ ಹಿಂದೆ ನಗರದಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿ ಮನೆಗಳ ಮೇಲೆ ದಾಳಿ ಮಾಡಿದ್ದ ಪೊಲೀಸರು ಶನಿವಾರ ಮತ್ತೆ ದಾಳಿ ಮುಂದುವರಿಸಿದ್ದಾರೆ. ಅಪರಾಧ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಈ ಹಿಂದಿನ ದಾಳಿಯಲ್ಲಿ ತಲೆ ಮರೆಸಿಕೊಂಡಿದ್ದ ರೌಡಿಶೀಟರ್​ಗಳಿಗೆ ಬೆಳ್ಳಂಬೆಳಗ್ಗೆ ಶಾಕ್​ ನೀಡಿದ್ದಾರೆ. ಆಡುಗೋಡಿ ಪೊಲೀಸ್​...

Know More

ಲಾಕ್‌ಡೌನ್ ಸಹಾಯಧನ: ಬಿಪಿಎಲ್ ಕಾರ್ಡ್ ಕಡ್ಡಾಯ ಸರಿಯಲ್ಲ

31-Jul-2021

ಬೆಂಗಳೂರು: ಕೋವಿಡ್‌ ಲಾಕ್‌ಡೌನ್ ಸಹಾಯಧನ ₹2 ಸಾವಿರ ಪಡೆಯಲು ಬಿಪಿಎಲ್ ಕಾರ್ಡ್ ಕಡ್ಡಾಯಗೊಳಿಸಿರುವ ಸರ್ಕಾರದ ಷರತ್ತು ಮಾರ್ಪಡಿಸುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಮನೆಗೆಲಸದ ಕಾರ್ಮಿಕರಿಗೆ ಸಹಾಯಧನ ನೀಡುವ ವಿಷಯದಲ್ಲಿ ಸಲ್ಲಿಕೆಯಾಗಿರುವ ಮಧ್ಯಂತರ ಅರ್ಜಿ...

Know More

ಸೈನಿಕ ಕುಟುಂಬದ ಮೇಲೆ ಹಲ್ಲೆ ಖಂಡಿಸಿ ಬೃಹತ್‌ ಪ್ರತಿಭಟನೆ

30-Jul-2021

ಮಡಿಕೇರಿ ಜು.30 : ಬೋಯಿಕೇರಿ ಸಮೀಪ ಸೈನಿಕ ಕುಟುಂಬದ ಮೇಲೆ ನಡೆದ ಗುಂಪು ಹಲ್ಲೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ದೇಶ ಕಾಯುವ...

Know More

ಬೇವಿನ ಸೊಪ್ಪು ಕೀಳಲು ಹೋದ ಬಾಲಕನ ಕಟ್ಟಿಹಾಕಿ ಎಸ್‌ಐ ದೌರ್ಜನ್ಯ

30-Jul-2021

ಮೈಸೂರು: ಪೊಲೀಸ್ ಇಲಾಖೆಯಲ್ಲಿ ಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎನ್ನಲಾದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಿ ದರ್ಪ ತೋರಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಬಾಲಕನನ್ನು ಗೇಟ್‌ಗೆ ಕಟ್ಟಿ ಹಾಕಿರುವ...

Know More

ರೋಹಿಣಿ ಸಿಂಧೂರಿ ಜನರನ್ನು ಮಂಗಂ ಮಾಡಲು ಹೊರಟಿದ್ದರು ; ಸಾರಾ ಮಹೇಶ್‌

30-Jul-2021

ಮೈಸೂರು, : “ರೋಹಿಣಿ ಸಿಂಧೂರಿ ಅವರು ಸಿಂಗಂ ಅಲ್ಲ, ಮೈಸೂರು ಜನರನ್ನು ಮಂಗಂ ಮಾಡಲು ಹೊರಟಿದ್ದ ಪ್ರಚಾರ ಪ್ರಿಯೆ,” ಎಂದು ಜೆಡಿಎಸ್ ಶಾಸಕ ಸಾ.ರಾ. ಮಹೇಶ್‌ ಕಿಡಿಕಾರಿದರು. ಮೈಸೂರು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

Know More

ಮೂರನೇ ಅಲೆ ಎದುರಿಸಲು ಕಂಟೈನ್‌ ಮೆಂಟ್‌ ಝೊನ್‌ ಹೆಚ್ಚಳಕ್ಕೆ ಮುಂದಾದ ಬಿಬಿಎಂಪಿ

30-Jul-2021

ಬೆಂಗಳೂರು, – ಕೊರೊನಾ ಎರಡನೆ ಅಲೆಗೆ ಹೋಲಿಸಿದರೆ ಸದ್ಯ ಪ್ರಕರಣ ಸಂಖ್ಯೆ ಕಡಿಮೆಯಾಗುತ್ತಿದೆ. ಮೂರನೆ ಅಲೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮೈಕ್ರೋ ಕಂಟೈನ್ಮೆಂಟ್‍ಗಳ ಹೆಚ್ಚಳ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ...

Know More

ಕೋವಿಡ್‌ ನಿಯಂತ್ರಣಕ್ಕೆ ನಿರ್ಬಂಧ ವಿಧಿಸುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ನೀಡಿದ ಸರ್ಕಾರ

30-Jul-2021

ಬೆಂಗಳೂರು: ಸ್ಥಳೀಯ ಪರಿಸ್ಥಿತಿಯನ್ನು ಆಧರಿಸಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ರಾಜ್ಯ ವಿಪತ್ತು ನಿರ್ವಹಣಾ ಕಾರ್ಯಕಾರಿ ಸಮಿತಿ ಶುಕ್ರವಾರ ಆದೇಶ ಹೊರಡಿಸಿದೆ. ಕೋವಿಡ್ ಪ್ರಕರಣಗಳ ದೃಢ ಪ್ರಮಾಣ ದರ...

Know More

ರಾಜ್ಯದ ನೀರಾವರಿ ಯೋಜನೆ ; ಪ್ರಧಾನಿ ಭೇಟಿಗೆ ಕುಮಾರ ಸ್ವಾಮಿ ಸಜ್ಜು

30-Jul-2021

ಬೆಂಗಳೂರು, – ಮೇಕೆದಾಟು, ಕೃಷ್ಣಾ, ಮಹದಾಯಿ ಯೋಜನೆಗಳಿಗೆ ಅನುಮತಿಗೆ ಆಗ್ರಹಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ನಿರ್ಧರಿಸಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಮೇಕೆದಾಟು,...

Know More

ಕೆರೆಗೆ ಉರುಳಿದ ಬಸ್‌ ; ಓರ್ವ ಪ್ರಯಾಣಿಕ ಸಾವು

30-Jul-2021

ಶಿವಮೊಗ್ಗ, ; ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದೆ. ಈ ಅಪಘಾತದಲ್ಲಿ ಒಬ್ಬ ಪ್ರಯಾಣಿಕರು ಮೃತಪಟ್ಟಿದ್ದಾರೆ, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಶುಕ್ರವಾರ ಬೆಳಗ್ಗೆ ಸಾಗರ ತಾಲೂಕಿನ ಕಾಸ್ಪಾಡಿ...

Know More

ಯಡಿಯೂರಪ್ಪ ಸರ್ಕಾರ ಕೆಡಹುವ ಬೆದರಿಕೆ ಒಡ್ಡಿದ್ದರು ಎಂದ ಯತ್ನಾಳ್‌

30-Jul-2021

  ವಿಜಯಪುರ: ಮಾಜಿ ಮುಖ್ಯ ಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ದ ಬಿಜೆಪಿ ಹೈಕಮಾಂಡ್‌ ಗೆ ದೂರು ನೀಡಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರವೂ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...

Know More

ದೆಹಲಿಯಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವ ಆಕಾಂಕ್ಷಿಗಳು

30-Jul-2021

  ನವದೆಹಲಿ, : ಸಂಪುಟ ರಚನೆ  ಇನ್ನೆರಡು  ದಿನಗಳಲ್ಲಿ  ನಡೆಯಲಿದೆ  ಎಂಬ ಸುಳಿವು ಸಿಗುತ್ತಿದ್ದಂತೆ ಆಕಾಂಕ್ಷಿಗಳ ದಂಡು ನವದೆಹಲಿಯಲ್ಲಿ ಬೀಡುಬಿಟ್ಟಿದೆ. ಇಂದು ಕೂಡ ಹಲವು ಸಚಿವ ಆಕಾಂಕ್ಷಿಗಳು ನವದೆಹಲಿಗೆ ತೆರಳಿದ್ದು, ತಮ್ಮ ತಮ್ಮ ಗಾಡ್‍ಫಾದರ್‍ಗಳ...

Know More

ಅಭಿಮಾನಿಯ ಮನೆಗೆ ಭೇಟಿ ನೀಡಿ 5 ಲಕ್ಷ ನೀಡಿದ ಯಡಿಯೂರಪ್ಪ; ಇನ್ನೂ ಐದು ಲಕ್ಷ ನೀಡುವ ಭರವಸೆ

30-Jul-2021

ಚಾಮರಾಜನಗರದ ; . ಇಂದು ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರಕ್ಕೆ ಬಿ.ಎಸ್.ಯಡಿಯೂರಪ್ಪ ತೆರಳಿದ್ದು ಆತ್ಮಹತ್ಯೆಗೆ ಶರಣಾದ ಅಭಿಮಾನಿ ರವಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಬರೀ ಸಾಂತ್ವನ ಹೇಳಿದ್ದಲ್ಲದೆ ಆತ್ಮಹತ್ಯೆ ಮಾಡಿಕೊಂಡ ರವಿ ಕುಟುಂಬಕ್ಕೆ ಭಾರೀ ಆರ್ಥಿಕ...

Know More

ಕೊಡಗಿನ ಗಡಿಯಲ್ಲಿ ಕೋವಿಡ್ ಸಂಬಂಧಿತ ಕಟ್ಟೆಚ್ಚರಕ್ಕೆ ಸೂಚನೆ ; ಬೊಮ್ಮಾಯಿ

30-Jul-2021

ನವ ದೆಹಲಿ : ಕೊಡಗು ಸೇರಿದಂತೆ ರಾಜ್ಯದ 5 ಜಿಲ್ಲೆಗಳಲ್ಲಿ ಕೋರೋನಾ ಸೋಂಕು ನಿಯಂತ್ರಣಕ್ಕೆ ಬಾರದಿರುವ ಹಿನ್ನಲೆಯಲ್ಲಿ ನಾಳೆ ಶನಿವಾರ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಂವಾದ ನಡೆಸುವುದಾಗಿ ನೂತನ...

Know More

ಕಾಂಗ್ರೆಸ್‌ ಕೈ ಹಿಡಿದ ಮಾಜಿ ಶಾಸಕ ಮಧು ಬಂಗಾರಪ್ಪ

30-Jul-2021

ಹುಬ್ಬಳ್ಳಿ: ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಜೆಡಿಎಸ್‌ ತೊರೆದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರ ನೇತೃತ್ವದಲ್ಲಿ ಶುಕ್ರವಾರ ಕಾಂಗ್ರೆಸ್...

Know More

ಬಂಟ್ವಾಳ: ನಾಪತ್ತೆಯಾದ ಯುವಕನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆ

30-Jul-2021

ಬಂಟ್ವಾಳ: ತಾಲೂಕಿನ ದೇವಂದಬೆಟ್ಟು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಯುವಕನೊರ್ವನ ಮೃತದೇಹ ಪತ್ತೆಯಾಗಿದ್ದು, ಸಂಶಯಕ್ಕೆ ಕಾರಣವಾಗಿದೆ. ಕಳ್ಳಿಗೆ ಗ್ರಾಮದ ಲಕ್ಷಣ ಎಂಬವರ ಮಗ ಕಾರ್ತಿಕ್ (25) ಎಂಬವರ ಮೃತದೇಹ ದೇವಂದಬೆಟ್ಟು ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಸಂಜೆ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.