ಹುಬ್ಬಳ್ಳಿ: ನಗರದ ಹೊರವಲಯದ ರಾಯನಾಳ ಬೈಪಾಸ್ ಬಳಿ ಲಾರಿ ಮತ್ತು ಟೆಂಪೋ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಓರ್ವ ಬಾಲಕಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಟೆಂಪೋದಲ್ಲಿದ್ದ ಭರಮಗೌಡ (55), ಸಾವಿತ್ರಿ (35), ಟೆಂಪೋ ಚಾಲಕ ಪುಟ್ಟಪ್ಪ ಬರೂಗುರು (28), ದರ್ಶನ್ (10) ಸಾವನ್ನಪ್ಪಿದ್ರೆ, ಕಿಮ್ಸ್ ಆಸ್ಪತ್ರೆಯಲ್ಲಿ ಚೇತನಾ (12) ಎಂಬ ಬಾಲಕಿ ಸಾವನ್ನಪ್ಪಿದ್ದಾಳೆ. ಮೃತರು ಕುಂದಗೋಳ ತಾಲೂಕಿನ ಮಂಡಿಗನಾಳ ಗ್ರಾಮದವರು. ಸುಮಾರು 40 ಕ್ಕೂ ಹೆಚ್ಚು ಜನ ಬೆಳಗಾವಿ ಜಿಲ್ಲೆಯ ಹುಕ್ಕೇರಿಗೆ ಮದುವೆ ಮಾತುಕತೆಗೆ ತೆರಳಿದ್ದರು. ಅಲ್ಲಿಂದ ವಾಪಸ್ ಮಂಡಿಗನಾಳ ಗ್ರಾಮಕ್ಕೆ ಹಿಂತಿರುಗುವಾಗ ಬೆಳಗಾವಿ ಕಡೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ನ ಬೆಳಗಾವಿ ಜಿಲ್ಲೆಯ ಹುಕ್ಕೇರಿಗೆ ಮದುವೆ ಮಾತುಕತೆಗೆ ತೆರಳಿದ್ದರು. ಅಲ್ಲಿಂದ ವಾಪಸ್ ಮಂಡಿಗನಾಳ ಗ್ರಾಮಕ್ಕೆ ಹಿಂತಿರುಗುವಾಗ ಬೆಳಗಾವಿ ಕಡೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
ಈ ಘಟನೆಗೆ ಅತಿಯಾದ ವೇಗ ಹಾಗೂ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣವೆಂದು ಹೇಳಲಾಗಿದೆ. ಈ ಕುರಿತಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.