ಬಳ್ಳಾರಿ: ಗಣಿ ಧಣಿ ಜನಾರ್ದನ ರೆಡ್ಡಿ ಮನೆಗೆ ಇಂದು ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಬಳ್ಳಾರಿಯ ಅವರ ಮನೆ ಮೇಲೆ ದಾಳಿ ನಡೆಸಿದೆ.
ರಿಪಬ್ಲಿಕ್ ಆಫ್ ಬಳ್ಳಾರಿಯ ಗಣಿ ಧಣಿ ಜನಾರ್ದನ ರೆಡ್ಡಿಗೆ ಹಿಡಿದಿರೋ ಸಾಡೇ ಸಾಥ್ ಇನ್ನೂ ಬಿಟ್ಟಂತೆ ಕಾಣುತ್ತಿಲ್ಲ. ಯಾಕಂದ್ರೆ ಬೇಲ್ ಮೇಲೆ ಜೈಲ್ನಿಂದ ಹೊರಗಡೆ ಬಂದ್ರೂ ನೆಮ್ಮದಿ ಸಿಗುತ್ತಿಲ್ಲ. ಇವತ್ತು ಬೆಳ್ಳಂಬೆಳಗ್ಗೆ 50ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳ ತಂಡ ಬಳ್ಳಾರಿಯ ಅವರ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.