ಮಡಿಕೇರಿ: ದೇಶದ ಅತ್ಯುನ್ನತ ಮೂಲಭೂತ ಶಾಸನದ ನಿರೂಪಣೆ ಹಾಗೂ ಸಕರ್ಾರದ ಕಾರ್ಯವೈಖರಿಯ ಮೂಲ ಸೆಲೆಯಾಗಿದೆ. ಒಂದು ರಾಜ್ಯ ಕ್ರಮಬದ್ದವಾಗಿ ಜನರಿಗೆ ಹಿತವೆನಿಸುವ ರೀತಿಯಲ್ಲಿ ನಿರಾಂತಕವಾಗಿ ಆಡಳಿತ ನಡೆಸುವಂತಾಗಲು ಸಂವಿಧಾನ ಅತ್ಯವಶ್ಯಕವಾಗಿದೆ ಎಂಬುದಾಗಿ ಜಿಲ್ಲಾ ಉಸ್ತುವಾರಿ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ರಾಜ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಜಿಲ್ಲಾ ಮ್ಯಾನ್ಸ್ ಕಾಂಪೌಂಡಿನಲ್ಲಿಂದು ಜರುಗಿದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿದ ಬಳಿಕ ನಾಡಿಗೆ ಸಂದೇಶ ನೀಡುತ್ತ ಅವರು, ಒಟ್ಟಿನಲ್ಲಿ ಸಂವಿಧಾನಕ್ಕೆ ಬದ್ಧವಾಗಿ ಬದುಕುವ ಮನೋಭೂಮಿಕೆ ಇಂದಿನ ತುರ್ತು ಅನಿವಾರ್ಯತೆಯಾದಾಗ ಮಾತ್ರವೇ ಸಂವಿಧಾನದ ಅತೀ ಶ್ರೇಷ್ಠ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವಗಳಿಗೆ ನಿಜವಾದ ಅರ್ಥ ಬರುವಂತಾಗುತ್ತದೆ,. ಸಂವಿಧಾನ ಒಂದು ಆಳುವ ಪ್ರಮುಖ ನಿಯಮಗಳ ಸಂಯೋಜನೆಯಾಗಿದೆ ಎಂದರು.
ನಾವೀಗ ಮತ್ತೆ ಈ ದೇಶಕ್ಕಾಗಿ ಅನೇಕ ರೀತಿಯ ತ್ಯಾಗಗಳಿಗೆ ಸಿದ್ದರಾಗಿ ದೇಶವನ್ನು ಶಾಂತಿಯುತ ಹಾಗೂ ಪ್ರಗತಿಪರ ರಾಷ್ಟ್ರವನ್ನಾಗಿಸುವ ಹಿರಿಯರ ಕನಸನ್ನು ನನಸು ಮಾಡಲು ಪ್ರತಿಯೊಬ್ಬರೂ ಪಣತೊಡುವ ಮೂಲಕ ವರ್ಗರಹಿತ ಸಮಾಜವನ್ನು ನಿರ್ಮಿಸಿ ಪರಸ್ಪರ ಸಹಕಾರ ಭಯಮುಕ್ತ ವಾತಾವರಣದಲ್ಲಿ ಎಲ್ಲರೂ ಜೀವಿಸುವಂತಾಗಬೇಕೆಂಬ ರಾಷ್ರದ ಪ್ರಥಮ ಅಧ್ಯಕ್ಷರಾದ ಡಾ. ರಾಜೇಂದ್ರ ಪ್ರಸಾದ್ ಅವರ ಮಾತನ್ನು ಸಚಿವರು ಮೆಲುಕು ಹಾಕಿದರು.
ನಮ್ಮ ದೇಶದ ರೈತಾಪಿವರ್ಗ, ಸೈನಿಕರು ಹಾಗೂ ಉಳಿದ ಶ್ರಮಿಕರ ಭಾವನೆಗಳನ್ನು ನಾವು ಅಪಾರವಾಗಿ ಗೌರವಿಸುವ ಮೂಲಕ ಒಂದು ಶ್ರೀಮಂತ ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಧೀಕ್ಷೆ ತೊಡಬೇಕಾದ ಈ ಸುದಿನ ಇದಾಗಿದೆ ಎಂದರು.
ಕಳೆದ 67 ವರ್ಷಗಳಲ್ಲಿ ದೇಶಕ್ಕೆ ಎದುರಾದ ಸಮಸ್ಯೆ ಹಾಗೂ ಸವಾಲುಗಳನ್ನು ಒಮ್ಮನಸ್ಸಿನಿಂದ ಎದುರಿಸಿ ಗಣತಂತ್ರವನ್ನು ಸಂರಕ್ಷಿಸಿದ್ದೇವೆ, ವ್ಯಕ್ತಿಯ ಹಿತಕ್ಕಿಂತ ಸಮಾಜದ ಹಿತವೇ ಮುಖ್ಯ ಎಂಬ ನಮ್ಮ ಪೂರ್ವಿಕರ ಜೀವನ ತತ್ವವನ್ನು ನಾವೆಲ್ಲರೂ ಅರ್ಥಮಾಡಿಕೊಂಡು ಅನುಸರಿಸಬೇಕಿದೆ ಎಂಬುದಾಗಿ ಕಿವಿ ಮಾತು ಹೇಳಿದರು.
ಭಾರತದ ಜನ ಈ ದೇಶದ ಪ್ರಜೆಗಳಾಗಿ ತಮ್ಮನ್ನು ತಾವು ಕಂಡುಕೊಂಡ ದಿನವಾಗಿದೆ, ಅಧಿಕಾರಸ್ಥರನ್ನು ಪ್ರಶ್ನಿಸುವ ಸ್ವಾತಂತ್ರ್ಯ ದೇಶದ ಸಾಮಾನ್ಯ ಪ್ರಜೆಗಳಿಗೆ ವಿಧಿವತ್ತಾಗಿ ಲಭ್ಯವಾದ ದಿನ. ಇಲ್ಲಿ ಯಾರ ಅಧಿಕಾರವೂ ಅಂತಿಮವಲ್ಲ, ಯಾರೊಬ್ಬರು ಸಂವಿಧಾನ ಹಾಕಿಕೊಟ್ಟ ಗೆರೆ ಮೀರುವ ಹಾಗಿಲ್ಲ ಎಂಬ ವ್ಯವಸ್ಥೆ ಅಂದಿನಿಂದ ಜಾರಿಗೆ ಬಂದಿದೆ, ಇದೊಂದು ಚಾರಿತ್ರಿಕ ತಿರುವು ಹಾಗೂ ಪ್ರಪಂಚದ ಎಷ್ಟೋ ಸ್ವಾತಂತ್ರ್ಯ ದೇಶಗಳಿಗೆ ಮೇಲ್ಪಂಕ್ತಿ ಹಾಕಿದ ವಿದ್ಯಮಾನವಿದಾಗಿದೆ ಎಂದು ನುಡಿದರು.
ವೇದಿಕೆಯಲ್ಲಿ ವಿಧಾನಪರಿಷತ್ತು ಸದಸ್ಯ ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ಮೀರ್ ಅನೀಸ್ ಅಹಮದ್, ಜಿಲ್ಲಾ ಪೊಲೀಸ್ ಉನ್ನತಾಧಿಕಾರಿ ವರ್ತಿಕ ಕಟುಯಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕು. ಚಾರುಲತಾ ಸೋಮಲ್, ನಗರಸಭಾ ಆಯುಕ್ತೆ ಪುಷ್ಪಾವತಿ, ಉಪವಿಭಾಗಾಧಿಕಾರಿ ನಂಜುಂಡೇಗೌಡ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ನಗರಸಭಾಧ್ಯಕ್ಷೆ ಶ್ರೀಮತಿ ಬಂಗೇರ, ಉಪಾಧ್ಯಕ್ಷೆ ಲೀಲಾ ಶೇಷಮ್ಮ, ಸದಸ್ಯ ಚುಮ್ಮಿ ದೇವಯ್ಯ, ಮುಡಾ ಅಧ್ಯಕ್ಷೆ ಸುರಯಾ ಅಬ್ರಾರ್, ಜಿಲ್ಲಾ ಕಾಂಗ್ರೆಸ್ ಪ್ರಬಾರ ಅಧ್ಯಕ್ಷ ಟಿ.ಪಿ.ರಮೇಶ್, ನಿಕಟಪೂರ್ವ ಅಧ್ಯಕ್ಷ ಬಿ.ಟಿ.ಪ್ರದೀಪ್, ಪಕ್ಷದ ಹಿರಿಯ ಮುಖಂಡ ಮಿಟ್ಟು ಚಂಗಪ್ಪ, ಹೆಚ್.ಎಸ್. ಚಂದ್ರಮೌಳಿ, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ, ಮತ್ತಿತರ ಇಲಾಖಾಧಿಕಾರಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಇಲಾಖೆಯ ಅಧಿಕಾರಿ ಕೆ.ವಿ.ಸುರೇಶ್ ನಿರೂಪಿಸಿ ಸ್ವಾಗತಿಸಿದರು. ಕೊನೆಗೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು ಜನರ ಮೆಚ್ಚುಗೆಗೆ ಪಾತ್ರರಾದರು.
ರಾಷ್ಟ್ರಗೀತೆ, ನಾಡಗೀತೆ, ರೈತಗೀತೆ, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಧ್ವಜಾರೋಹಣ ಕಾರ್ಯಕ್ರಮಕ್ಕೂ ಮೊದಲು ನಗರದ ಕೋಟೆಯಿಂದ ಮೆರವಣಿಗೆ ನಡೆಯಿತು. ಮೆರವಣಿಗೆಗೆ ಉಪ ವಿಭಾಗಧಿಕಾರಿ ಡಾ.ನಂಜುಂಡೇ ಗೌಡ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಚಾಮರಾಜನಗರ ಜಿಲ್ಲೆಯ ರಾಮಸಮುದ್ರದ ಗೊರವರ ಕುಣಿತ ಹಾಗೂ ಡೊಳ್ಳು ಕುಣಿತ ಗಮನ ಸೆಳೆಯಿತು ಹಾಗೆಯೇ ಶಾಲಾ ಕಾಲೇಜು ವಿದ್ಯಾರ್ಥಿಗಳು, ಎನ್.ಸಿ.ಸಿ.ತಂಡ ಮೆರವಣಿಗೆಯಲ್ಲಿ ಭಾಗವಹಿಸಿ ಮೆರಗು ನೀಡಿದರು.