News Kannada
Friday, July 01 2022

ಕರ್ನಾಟಕ

ಮಾಜಿ ಸಚಿವ ಎಂ.ಎಂ. ನಾಣಯ್ಯ ಇನ್ನಿಲ್ಲ - 1 min read

Photo Credit :

ಮಾಜಿ ಸಚಿವ ಎಂ.ಎಂ. ನಾಣಯ್ಯ ಇನ್ನಿಲ್ಲ

ಮಡಿಕೇರಿ: ಕೊಡಗಿನ ಕಾಂಗ್ರೆಸ್ ನ ಹಿರಿಯ ಮುಖಂಡ, ಸಜ್ಜನ ರಾಜಕಾರಣಿ ಹಾಗೂ ಮಾಜಿ ಸಚಿವರಾಗಿದ್ದ ಮುಂಡಂಡ ಎಂ. ನಾಣಯ್ಯ ಮಡಿಕೇರಿಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾಗಿದ್ದಾರೆ.

ಅವರಿಗೆ 76ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆ ನಂತರ ಮನೆಗೆ ಹಿಂತಿರುಗಿದ ಅವರು ಚೇತರಿಸಿಕೊಂಡಿದ್ದರಾದರೂ ಮತ್ತೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನಲೆಯಲ್ಲಿ ಮಡಿಕೇರಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆರೋಗ್ಯದಲ್ಲಿ ಹದಗೆಟ್ಟ ಹಿನ್ನಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮಧ್ಯಾಹ್ನ 2 ಗಂಟೆಗೆ ನಿಧನರಾಗಿದ್ದಾರೆ.

ನಾಪೋಕ್ಲು ಪಂಚಾಯಿತಿ ಸದಸ್ಯರಾಗಿ 1969ರಲ್ಲಿ ಪ್ರಥಮ ಬಾರಿಗೆ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿದ ಅವರು 1978ರಲ್ಲಿ ಮಡಿಕೇರಿ ತಾಲೂಕು ಬೋರ್ಡ್ ಗೆ ನಾಪೋಕ್ಲು ಕ್ಷೇತ್ರದಿಂದ ಆಯ್ಕೆಯಾಗುವುದರೊಂದಿಗೆ ಉಪಾಧ್ಯಕ್ಷ ಸ್ಥಾನ ಪಡೆದರು. ಈ ಸಂದರ್ಭ ತಾಲೂಕು ಬೋರ್ಡ್ ನ ಅಧ್ಯಕ್ಷರಾಗಿದ್ದ ಹೆಚ್.ಎಸ್. ವೆಂಕಪ್ಪನವರ ಅಕಾಲಿಕ ಸಾವಿನ ಹಿನ್ನೆಲೆಯಲ್ಲಿ ನಾಣಯ್ಯನವರು ತಾಲೂಕು ಬೋರ್ಡ್ ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು.

ಜನಪರ ಕಾಳಜಿಯೊಂದಿಗೆ ಉತ್ತಮ ಚಲನಶೀಲತೆಯನ್ನು ಮೈಗೂಡಿಸಿಕೊಂಡಿದ್ದ ನಾಣಯ್ಯನವರ ನಾಯಕತ್ವಗುಣವನ್ನು ಮೆಚ್ಚಿದ ಅಂದಿನ ಮುಖ್ಯಮಂತ್ರಿಗಳಾಗಿದ್ದ ಗುಂಡೂರಾವ್ ಅವರು 1983ರಲ್ಲಿ ಎಂಎಲ್ಎ ಟಿಕೆಟ್ ನೀಡಿದರು. 2 ವರ್ಷಗಳ ಕಾಲ ಕರ್ನಾಟಕ ವಿಧಾನ ಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ ನಾಣಯ್ಯ ಕೆಲವು ರಾಜಕೀಯ ಏರುಪೇರುಗಳಿಂದಾಗಿ ಸುಮಾರು 14 ವರ್ಷಗಳ ಕಾಲ ಸಕ್ರಿಯ ರಾಜಕಾರಣದಿಂದ ಬಹುತೇಕ ದೂರ ಉಳಿಯುವಂತಾಯಿತು. ಈ ಸಂದರ್ಭದಲ್ಲಿಯೇ ಎಲ್ಎಲ್ಬಿ ಪದವಿ ಪಡೆದು ವಕೀಲಿ ವೃತ್ತಿ ಆರಂಭಿಸಿದ ಅವರು ಮತ್ತೊಮ್ಮೆ ರಾಜಕೀಯ ಪ್ರವೇಶ ಮಾಡಿದರು.

ಜನ ಸಮುದಾಯದ ಮುಂದೆ ಅಪಾರ ಛಾಪನ್ನು ಮೂಡಿಸುವುದರೊಂದಿಗೆ ಸಜ್ಜನ ರಾಜಕಾರಣಿ ಎನಿಸಿಕೊಂಡಿದ್ದ ನಾಣಯ್ಯ 1998ರ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಮತ್ತೆ ಗೆಲುವು ಸಾಧಿಸುವುದರೊಂದಿಗೆ ಎಸ್.ಎಂ. ಕೃಷ್ಣ ಸರ್ಕಾರದಲ್ಲಿ 1 ವರ್ಷಗಳ ಕಾಲ ಮಾಹಿತಿ ತಂತ್ರಜ್ಞಾನ ಸಚಿವರಾದರು. ಬಳಿಕ ನಾಲ್ಕು ವರ್ಷಗಳ ಕಾಲ ಅಬಕಾರಿ ಸಚಿವರಾಗಿ ಸೇವೆ ಸಲ್ಲಿಸುವುದರೊಂದಿಗೆ ಕೊಡಗು ಜಿಲ್ಲೆಯ ಉಸ್ತುವಾರಿಯನ್ನು ಹೆಗಲಿಗೇರಿಸಿಕೊಂಡರು.

ಎಸ್.ಎಂ. ಕೃಷ್ಣ ಸರ್ಕಾರದ ಬಳಿಕ ರಾಜ್ಯ ರಾಜಕಾರಣದಲ್ಲಿ ಹಲವಾರು ಕ್ಷಿಪ್ರ ಬದಲಾವಣೆಗಳಾಗಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರ ಪಡೆಯಿತು. ಈ ನಡುವೆ ನಾಣಯ್ಯ ಸಕ್ರಿಯ ರಾಜಕಾರಣದಿಂದ ಕೊಂಚ ದೂರ ಉಳಿದಿದ್ದರೂ ಆ ಸಂದರ್ಭದಲ್ಲಿ ನಡೆದ ವಿವಿಧ ಚುನಾವಣೆಗಳಲ್ಲಿ ನಾಣಯ್ಯ ಪಕ್ಷ ಸಂಘಟನೆಯೊಂದಿಗೆ ಪಕ್ಷದ ಅಭ್ಯರ್ಥಿಗಳ ಗೆಲುವಿಗೂ ಶ್ರಮಿಸಿದ್ದರು.

ಕೊಡಗಿನ ರಾಜಕೀಯ ಇತಿಹಾಸದಲ್ಲಿ ತಮ್ಮದೇ ಛಾಪನ್ನು ಮೂಡಿಸಿದ್ದ ನಾಣಯ್ಯ ಅವರ ಅಗಲುವಿಕೆಯಿಂದ ಕಾಂಗ್ರೆಸ್ ಪಕ್ಷ ಹಾಗೂ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವುಂಟಾಗಿದೆ.ಹುಟ್ಟೂರು ಕೊಡಗಿನ ನಾಪೋಕ್ಲುವಿನ ಬೇತು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ 1.30ಕ್ಕೆ ನಾಣಯ್ಯನವರ ಅಂತ್ಯಕ್ರಿಯೆ ನಡೆಯಲಿದೆ.

See also  ಕುಡಿದ ಅಮಲಿನಲ್ಲಿ ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಬೆಂಗಳೂರಿನ ಟೆಕ್ಕಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು