News Kannada
Saturday, October 08 2022

ಕರ್ನಾಟಕ

ಕೊಡಗು ಬಂದ್: ಜಿಲ್ಲಾಡಳಿತದಿಂದ ಅಗತ್ಯ ಕ್ರಮ - 1 min read

Photo Credit :

ಕೊಡಗು ಬಂದ್: ಜಿಲ್ಲಾಡಳಿತದಿಂದ ಅಗತ್ಯ ಕ್ರಮ

ಮಡಿಕೇರಿ: ಡಿವೈಎಸ್ಪಿ ಎಂ.ಕೆ.ಗಣಪತಿ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳು ಜುಲೈ, 14ರಂದು ಕೊಡಗು ಜಿಲ್ಲಾ ಬಂದ್ ಕರೆ ನೀಡಿರುವ ಹಿನ್ನೆಲೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಈ ಸಂಬಂಧ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಸೂಚನೆ ನೀಡಿದ್ದಾರೆ.

ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿಗಳು. ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು, ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆ ಮಾಡುವುದು, ಸಾರಿಗೆ-ಸಂಪರ್ಕದಲ್ಲಿ ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ನೋಡಿಕೊಳ್ಳುವುದು. ಹಾಗೆಯೇ ಜು.14 ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯು ಜಿಲ್ಲೆಯ ಮೂರು ತಾಲೂಕು ಕೇಂದ್ರಗಳಲ್ಲಿ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷಾ ಸಂದರ್ಭದಲ್ಲಿ  ಯಾವುದೇ ರೀತಿಯ ಅಡಚಣೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು  ಹೇಳಿದರು.

ಸೋಮವಾರಪೇಟೆ ಹಾಗೂ ವಿರಾಜಪೇಟೆಯ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ಥವಾಗದಂತೆ ಗಮನಹರಿಸಬೇಕು. ಆ ನಿಟ್ಟಿನಲ್ಲಿ ಲೋಕೋಪಯೋಗಿ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಾಗೃತರಾಗಿರಬೇಕು.  ಕೆಎಸ್ಆರ್ಟಿಸಿ. ಬಸ್ ಸಂಚಾರ ಕಲ್ಪಿಸುವುದು, ಜಿಲ್ಲಾ ಆಸ್ಪತ್ರೆ ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಶ್ರುಶ್ರೂಷಕರು ಕಡ್ಡಾಯವಾಗಿ ಹಾಜರಿದ್ದು, ಆರೋಗ್ಯ ಸೇವೆ ಒದಗಿಸುವಂತೆ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ಸರ್ಜನ್ ಅವರಿಗೆ ತಿಳಿಸಿದರು.

ಅಂಗಡಿ ಮುಂಗಟ್ಟುಗಳು ಸಂಬಂಧಿಸಿದಂತೆ ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿದರೆ ಜಿಲ್ಲಾಡಳಿತದ ಆಕ್ಷೇಪವಿಲ್ಲ. ಆದರೆ ಸಾರ್ವಜನಿಕರ ಆಸ್ತಿಪಾಸ್ತಿ ರಕ್ಷಣೆ ಮುಖ್ಯವಾಗಿದೆ. ಎಲ್ಲಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಪರಿಸ್ಥಿತಿ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಮಾಡಿಕೊಂಡಿದೆ.  ರಾಜ್ಯ ಹೆದ್ದಾರಿಗಳಲ್ಲಿ ಸುಗಮ ಸಾರಿಗೆ ಸಂಪರ್ಕ, ದ್ವಿತೀಯ ಪಿ.ಯು. ಪೂರಕ ಪರೀಕ್ಷೆ ಮತ್ತಿತರ ಸಂಬಂಧ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ ಎಂದು ಅವರು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಬಂದ್ ಹಿನ್ನೆಲೆ ಸಾರಿಗೆ ಪ್ರಾಧಿಕಾರದಿಂದ 20 ವಾಹನಗಳನ್ನು ಪೊಲೀಸ್ ಇಲಾಖೆಗೆ ಒದಗಿಸುವಂತೆ ಅವರು ತಿಳಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿದರ್ೇಶಕರಾದ ಟಿ.ಸ್ವಾಮಿ ಅವರು ಜುಲೈ, 14 ರಂದು ಪದವಿ ಪೂರ್ವ ಪೂರಕ ಪರೀಕ್ಷೆ ನಿಗಧಿಯಂತೆ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 128 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.  

ಕೆಎಸ್ಆರ್ ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಗೀತಾ ಅವರು ಬಂದ್ ಪರಿಸ್ಥಿತಿ ನೋಡಿಕೊಂಡು ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದರು.  

See also  ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆ

ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್.ಶ್ರೀರಂಗಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಜಿ.ಆರ್.ಬಸವರಾಜು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಜೆ.ಜಿ.ಜಾದವ್ ಅವರು ಹಲವು ಮಾಹಿತಿ ನೀಡಿದರು. ಜಿ.ಪಂ.ಸಿಇಓ ಚಾರುಲತಾ ಸೋಮಲ್, ತಹಸೀಲ್ದಾರ್ ಕುಂಜಮ್ಮ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮತ್ತಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು