News Kannada
Sunday, September 25 2022

ಕರ್ನಾಟಕ

ಸಚಿವ ಜಾರ್ಜ್, ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಸೂಚನೆ - 1 min read

Photo Credit :

ಸಚಿವ ಜಾರ್ಜ್, ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಸೂಚನೆ

ಮಡಿಕೇರಿ: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರೊಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸೋಮವಾರ ಕೋರ್ಟ್ ಸೂಚಿಸಿದೆ.
ಗಣಪತಿ ಆರೋಪಿಸಿರುವ ವ್ಯಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ನೇಹಾಲ್ ಪರ ವಕೀಲ ಎಂ.ಟಿ.ನಾಣಯ್ಯ ಅವರು ತಿಳಿಸಿದ್ದಾರೆ.

ತಮ್ಮ ತಂದೆ ಆತ್ಮಹತ್ಯೆಗೂ ಮುನ್ನ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿ, ತನ್ನ ಸಾವಿಗೆ ಹಿಂದಿನ ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರೊಣವ್ ಮೊಹಂತಿ ಮತ್ತು ಎ.ಎಂ.ಪ್ರಸಾದ್ ಕಾರಣ ಎಂದು ದೂರಿದ್ದರು. ಈ ಮೂವರ ವಿರುದ್ದ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಬೇಕು ಎಂದು ಕೋರಿ ಗಣಪತಿ ಅವರ ಪುತ್ರ ನೇಹಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮಡಿಕೇರಿ ಹೆಚ್ಚುವರಿ ಜೆಎಂಎಫ್ ಸಿ ಕೋರ್ಟ್ ನ್ಯಾಯಾಧೀಶೆ ಅನ್ನಪೂರ್ಣೇಶ್ವರಿ ಅವರು, ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮಡಿಕೇರಿ ನಗರ ಠಾಣೆ ಪೊಲೀಸರಿಗೆ ಸೂಚಿಸಿದ್ದಾರೆ.

See also  ಅನಂತಕುಮಾರ್ ಆಪ್ತರ ಮನೆ ಮೇಲೆ‌ ಐಟಿ‌ ದಾಳಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು