News Kannada
Friday, September 30 2022

ಕರ್ನಾಟಕ

ಆಗಸ್ಟ್ 5ರಂದು ಕೇಂದ್ರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ - 1 min read

Photo Credit :

ಆಗಸ್ಟ್ 5ರಂದು ಕೇಂದ್ರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ

ಮಡಿಕೇರಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣದಲ್ಲಿ ವಿಫಲ, ಬಿಜೆಪಿ ಸರ್ಕಾರವಿರುವ ರಾಜ್ಯಗಳಲ್ಲಿ ನಡೆಯುತ್ತಿರುವ ದೌರ್ಜನ್ಯ ಸೇರಿದಂತೆ ಕೇಂದ್ರ ಸರ್ಕಾರದ ವೈಫಲ್ಯಗಳ ವಿರುದ್ಧ ಆಗಸ್ಟ್ 5 ರಂದು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿರುವುದಾಗಿ ಪಕ್ಷದ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆಯೆಂದು ಆರೋಪಿಸಿದರು. ಬಿಜೆಪಿ ಸರ್ಕಾರವಿರುವ ರಾಜ್ಯಗಳಲ್ಲಿ ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ. ದಲಿತರ ವಿರುದ್ಧ ಸಂಘ ಪರಿವಾರ ಅಮಾನವೀಯವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಅಗತ್ಯ ವಸ್ತುಗಳ ಬೆಲೆಯನ್ನು ಇಳಿಸಬೇಕು ಮತ್ತು ದಲಿತರು ಹಾಗೂ ಅಲ್ಪಸಂಖ್ಯಾತರಿಗೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಆ.5 ರಂದು ರಾಜ್ಯ ವ್ಯಾಪಿ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಯುತ್ತಿದೆಯೆಂದು ತಿಳಿಸಿದರು.

ನಗರದಲ್ಲಿ ಅಂದು ಜಿಲ್ಲಾ ಕಾಂಗ್ರೆಸ್ ಕಛೇರಿಯಿಂದ ಮುಖ್ಯ ರಸ್ತೆಗಳ ಮೂಲಕ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಕೇಂದ್ರ ಸರ್ಕಾರದಲ್ಲಿ ಕಳಂಕಿತ ಸಚಿವರುಗಳಿದ್ದು, ಇವರುಗಳನ್ನು ಸಂಪುಟದಿಂದ ಕೈಬಿಡಬೇಕೆಂದು ಪ್ರತಿಭಟನೆಯ ಸಂದರ್ಭ ಒತ್ತಾಯಿಸಲಾಗುವುದೆಂದು ರಮೇಶ್ ತಿಳಿಸಿದರು.

ರಾಜ್ಯದಲ್ಲಿ ವಿರೋಧ ಪಕ್ಷಗಳು ಆಧಾರ ರಹಿತ ಆರೋಪಗಳನ್ನು ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರವನ್ನು ತೇಜೋವಧೆ ಮಾಡುತ್ತಿವೆ. ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಹಿಂದೆ ಭಜರಂಗದಳದವರ ಕೈವಾಡ ಇದೆಯೆಂದು ಸಿಐಡಿ ಪೊಲೀಸರು ಬಹಿರಂಗ ಪಡಿಸಿದ್ದರೂ ಬಿಜೆಪಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಟಿ.ಪಿ. ರಮೇಶ್ ಟೀಕಿಸಿದರು.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ಅಪಪ್ರಚಾರ ಮಾಡಲಾಗುತ್ತಿದೆಯೆಂದು ಅವರು ಆರೋಪಿಸಿದರು. ಆತ್ಮಹತ್ಯೆಗೆ ಶರಣಾದ ಡಿವೈಎಸ್ಪಿ ಗಣಪತಿ ಅವರ ಪ್ರಕರಣದ ಬಗ್ಗೆ ನ್ಯಾಯ ಸಮ್ಮತ ತನಿಖೆಯಾಗಬೇಕೆಂದು ಕಾಂಗ್ರೆಸ್ ಬಯಸುತ್ತದೆ. ತನಿಖಾ ವರದಿಯಲ್ಲಿ ಯಾರೇ ತಪ್ಪಿತಸ್ಥರೆಂದು ಕಂಡುಬಂದರು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಒತ್ತಾಯಿಸುತ್ತದೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಪಕ್ಷದಲ್ಲಿರುವ ನಾಯಕರುಗಳ ವಿರುದ್ಧ ಅನೇಕ ಕ್ರಿಮಿನಲ್ ಆರೋಪಗಳಿವೆ. ಆದರೆ, ಇದನ್ನೆಲ್ಲ ಮುಚ್ಚಿಟ್ಟಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ವಿನಾ ಕಾರಣ ಅಪಪ್ರಚಾರದಲ್ಲಿ ತೊಡಗಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಗ್ರಾಮ ಗ್ರಾಮಗಳಲ್ಲಿ ಜನಜಾಗೃತಿ ಮೂಡಿಸಲಾಗುವುದೆಂದು ಟಿ.ಪಿ. ರಮೇಶ್ ತಿಳಿಸಿದರು. ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಸಾಕಷ್ಟು ದುರಾಡಳಿತ ನಡೆದಿದೆಯೆಂದು ಆರೋಪಿಸಿದ ಅವರು ರಾಜಕೀಯ ಲಾಭಕ್ಕಾಗಿ ಅಪಪ್ರಚಾರದಲ್ಲಿ ತೊಡಗಿರುವ ಬಿಜೆಪಿ ವಿರುದ್ಧ ರಾಜಕೀಯ ಹೋರಾಟಕ್ಕೆ ಕಾಂಗ್ರೆಸ್ ಸಿದ್ಧವಿದೆ ಎಂದರು.

ಮಹದಾಯಿ ಕುಡಿಯುವ ನೀರಿನ ಯೋಜನೆ ಬಗ್ಗೆ ರೈತರ ಹೋರಾಟಕ್ಕೆ ಬೆಂಬಲ ಸೂಚಿಸದ ರಾಜ್ಯ ಬಿಜೆಪಿ ಮೌನಕ್ಕೆ ಶರಣಾಗಿದೆ ಎಂದು ಟೀಕಿಸಿದ ಟಿ.ಪಿ. ರಮೇಶ್, ಪ್ರಧಾನಿಗಳ ಮೇಲೆ ಒತ್ತಡ ಹೇರಿ ಗೋವಾ ರಾಜ್ಯದೊಂದಿಗೆ ಸಂಧಾನ ನಡೆಸಲು ಯಾಕೆ ಮುಂದಾಗುತ್ತಿಲ್ಲವೆಂದು ಪ್ರಶ್ನಿಸಿದರು. ರಾಜ್ಯದ ಹಿತಾಸಕ್ತಿಗೆ ಧಕ್ಕೆ ಬಂದಾಗ ಪಕ್ಷ ರಾಜಕಾರಣವನ್ನು ಮರೆತು, ಒಂದಾಗಿ ಹೋರಾಡಿದರೆ ಮಾತ್ರ ಅಭಿವೃದ್ಧಿ ಸಾಧ್ಯವೆಂದು ಅವರು ಅಭಿಪ್ರಾಯಪಟ್ಟರು.

See also  ಉಗ್ರಗಾಮಿಗಳ ಗ್ರೆನೇಡ್ ದಾಳಿಗೆ ಗೋಕಾಕ್ ಯೋಧ ಬಲಿ

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ, ತನ್ನ ದುರಾಡಳಿತವನ್ನು ಮರೆತು ಕಾಂಗ್ರೆಸ್ ಮತಗಳನ್ನು ಸೆಳೆಯುವುದಕ್ಕಾಗಿ ಅಪಪ್ರಚಾರದಲ್ಲಿ ತೊಡಗಿದೆಯೆಂದು ಆರೋಪಿಸಿದರು. ಬಿಜೆಪಿ ದುರಾಡಳಿತವನ್ನು ಮನೆ ಮನೆ ತೆರಳಿ ಮತದಾರರಿಗೆ ಮನವರಿಕೆ ಮಾಡಿಕೊಡಲಾಗುವುದೆಂದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾ ವಕ್ತಾರ ಕೆ.ಕೆ.ಮಂಜುನಾಥ್ ಕುಮಾರ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ.ಎಂ. ಗಣೇಶ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಕೆ.ಎಂ. ಲೋಕೇಶ್, ಜಿಲ್ಲಾ ಪರಿಶಿಷ್ಟ ಜಾತಿ ಪಂಗಡ ಘಟಕದ ಅಧ್ಯಕ್ಷ ಕೆ.ಆರ್.ಚಂದ್ರು, ಜಿಲ್ಲಾ ಕಾರ್ಯದರ್ಶಿ ಬಿ.ಎನ್.ಪ್ರಕಾಶ್, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲಾಂ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಅಧ್ಯಕ್ಷ ರಮಾನಾಥ್, ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ನಗರಾಧ್ಯಕ್ಷ ಅಬ್ದುಲ್ ರಜಾಕ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು