News Kannada
Friday, September 30 2022

ಕರ್ನಾಟಕ

ದೇಶ ದ್ರೋಹಿಗಳಿಗೆ ರಕ್ಷಣೆ, ದೇಶ ಪ್ರೇಮಿಗಳಿಗೆ ಲಾಠಿ ರುಚಿ : ಸಂಸದ ಪ್ರತಾಪ್ ಸಿಂಹ ಆರೋಪ - 1 min read

Photo Credit :

 ದೇಶ ದ್ರೋಹಿಗಳಿಗೆ ರಕ್ಷಣೆ, ದೇಶ ಪ್ರೇಮಿಗಳಿಗೆ ಲಾಠಿ ರುಚಿ : ಸಂಸದ ಪ್ರತಾಪ್ ಸಿಂಹ ಆರೋಪ

ಮಡಿಕೇರಿ: ರಾಜ್ಯದಲ್ಲಿ ದೇಶಪ್ರೇಮಿಗಳ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ ನಡೆಯುತ್ತಿದ್ದು, ದೇಶ ದ್ರೋಹಿಗಳಿಗೆ ರಕ್ಷಣೆ ಸಿಗುತ್ತಿದೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಹಾಗೂ ಸಂಸದ ಪ್ರತಾಪ ಸಿಂಹ ಆರೋಪಿಸಿದ್ದಾರೆ.

ಜಿಲ್ಲಾ ಬಿಜೆಪಿ ಯುವ ಮೋರ್ಚಾ ಆಯೋಜಿಸಿದ್ದ ತಿರಂಗ್ ಯಾತ್ರೆಯ ಸಭಾ ಕಾರ್ಯಕ್ರಮ ನಗರದ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಪ್ರತಾಪ್ ಸಿಂಹ, ಬೆಂಗಳೂರಿನ ಕಾಲೇಜ್ ವೊಂದರಲ್ಲಿ ಭಾರತೀಯ ಸೇನೆ ಹಾಗೂ ದೇಶದ ವಿರುದ್ಧ ಘೋಷಣೆ ಕೂಗುವ ಮೂಲಕ ದೇಶ ದ್ರೋಹದ ಕೆಲಸ ಮಾಡಲಾಗಿದೆ. ಇದನ್ನು ವಿರೋಧಿಸಿ ಪ್ರತಿಭಟನೆಯಲ್ಲಿ ತೊಡಗಿದ್ದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರಮುಖರು ಹಾಗೂ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಇದು ಅತ್ಯಂತ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು.

ದೇಶದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆ ದೇಶ ಪ್ರೇಮಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡುವ ಮೂಲಕ ಅಮಾನವೀಯವಾಗಿ ನಡೆದುಕೊಂಡಿದೆ ಎಂದು ಪ್ರತಾಪ ಸಿಂಹ ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಭವಿಷ್ಯದ ಬಗ್ಗೆ ಅನೇಕ ಕನಸುಗಳನ್ನು ಹೊತ್ತು ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಇದನ್ನು ಸಹಿಸದ ಕೆಲವರು, ಅಭಿವೃದ್ಧಿ ಕಾರ್ಯವನ್ನು ಮರೆ ಮಾಚಲು ಇಲ್ಲಸಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ಐದು ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಜನರ ವಿಶ್ವಾಸ ಮತ್ತು ನಿರೀಕ್ಷೆಗಳನ್ನು ಹುಸಿ ಮಾಡದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಕಾರ್ಯಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ ಎಂದು ಪ್ರತಾಪ ಸಿಂಹ ತಿಳಿಸಿದರು.

ಬಿಜೆಪಿ ಕಾರ್ಯಕರ್ತರು ವಕ್ತಾರರಂತೆ ಕಾರ್ಯ ನಿರ್ವಹಿಸುವ ಮೂಲಕ ಕೇಂದ್ರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಮಾಡಬೇಕಾಗಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಆಂತರಿಕವಾಗಿ ಶಮನ ಮಾಡಿಕೊಳ್ಳಬೇಕೆಂದು ಪ್ರತಾಪ ಸಿಂಹ ಸಲಹೆ ನೀಡಿದರು.

ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಕುಶಾಲನಗರದಲ್ಲಿ ನಡೆದ ಆಟೋ ಚಾಲಕ ಪ್ರವೀಣ್ ಪೂಜಾರಿ ಹತ್ಯಾ ಪ್ರಕರಣವನ್ನು ಖಂಡಿಸಿದರು. ಪ್ರವೀಣ್ ಪೂಜಾರಿ ಹಿಂದೂ ಸಂಘಟನೆಯ ಪರ ಕಾರ್ಯ ನಿರ್ವಹಿಸುತ್ತಿದ್ದ ಕಾರಣದಿಂದಲೇ ಉದ್ದೇಶ ಪೂರ್ವಕವಾಗಿ ಈತನನ್ನು ಹತ್ಯೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದು, ಇದನ್ನು ಹತ್ತಿಕ್ಕುವ ಅಗತ್ಯವಿದೆ. ಸಮಾಜದಲ್ಲಿ ಒಡಕು ಮೂಡಿಸುವ ಮೂಲಕ ದೇಶದ ಆಂತರಿಕ ಭದ್ರತೆಗೆ ಧಕ್ಕೆ ತಂದು ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಗಳು ನಡೆಯುತ್ತಿದೆಯೆಂದು ಅವರು ಆರೋಪಿಸಿದರು. ದುಷ್ಟ ಶಕ್ತಿಗಳ ವಿರುದ್ಧ ಜನ ಜಾಗೃತಿಯಾಗಬೇಕಾಗಿದೆ ಎಂದು ಅಭಿಪ್ರಾಯಪಟ್ಟರು. ಪ್ರತಿಯೊಬ್ಬರಲ್ಲೂ ರಾಷ್ಟ್ರಾಭಿಮಾನವನ್ನು ಮೂಡಿಸುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ಮಾಡಬೇಕೆಂದು ಕರೆ ನೀಡಿದರು.

ವಿಶ್ವ ಹಿಂದೂ ಪರಿಷದ್ ಪ್ರಮುಖ ಚಿ.ನಾ. ಸೋಮೇಶ್, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಬಿಜೆಪಿ ಯುವ ಮೋಚರ್ಾದ ಜಿಲ್ಲಾಧ್ಯಕ್ಷ ಕಾಳನ ರವಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಮನು ಮುತ್ತಪ್ಪ, ಪ್ರಮುಖರಾದ ಶ್ರೀಕಾಂತ್ ಮತ್ತಿತರರು ಉಪಸ್ಥಿತರಿದ್ದರು. ಯುವ ಮೋರ್ಚಾದ ನೇತೃತ್ವದಲ್ಲಿ ಜಿಲ್ಲೆಯ ಗಡಿಭಾಗಗಳಾದ ಕುಟ್ಟ ಹಾಗೂ ಕೊಡ್ಲಿಪೇಟೆಯಿಂದ ನಗರದ ಕೊಡವ ಸಮಾಜಕ್ಕೆ ವಾಹನ ಜಾಥ ಆಗಮಿಸಿತು.
 

See also  ಪ್ರವಾಹದಲ್ಲಿ ಕೊಚ್ಚಿ ಹೋದ ಮರಗಳ ಹಣ ಸಂಸತ್ರಸ್ತರಿಗೆ ನೀಡುವಂತೆ ಅಗ್ರಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು