News Kannada
Monday, September 26 2022

ಕರ್ನಾಟಕ

ಗೌರಿ ಗಣೇಶ-ಬಕ್ರೀದ್ ಹಬ್ಬದ ಅಗತ್ಯ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಪೂರ್ವಭಾವಿ ಸಭೆ - 1 min read

Photo Credit :

ಗೌರಿ ಗಣೇಶ-ಬಕ್ರೀದ್ ಹಬ್ಬದ ಅಗತ್ಯ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಪೂರ್ವಭಾವಿ ಸಭೆ

ಮಡಿಕೇರಿ: ಸೆಪ್ಟೆಂಬರ್ ಮೊದಲ ವಾರದಲ್ಲಿ ಗೌರಿ-ಗಣೇಶ ಹಬ್ಬ ಹಾಗೂ ಎರಡನೇ ವಾರದಲ್ಲಿ ಬಕ್ರೀದ್ ಹಬ್ಬ ಬರಲಿದ್ದು, ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಕೂರಿಸುವುದು, ಬ್ಯಾನರ್, ಬಂಟಿಂಗ್ಸ್ ಅಳವಡಿಸುದಕ್ಕೆ ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ಪತ್ರ ಪಡೆಯಬೇಕು. ಅದಕ್ಕೂ ಮುಂಚಿತವಾಗಿ ಪೊಲೀಸ್ ಇಲಾಖೆಯಿಂದ ಎನ್ಒಸಿ ಪತ್ರ ಪಡೆಯುವಂತೆ ಸಂಬಂಧಿಸಿದ ಸಂಘಟಕರಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಗೌರಿ ಗಣೇಶ ಹಾಗೂ ಬಕ್ರೀದ್ ಹಬ್ಬ ಸಂದರ್ಭದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವ ಸಂಬಂಧ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಕೋರಿದ್ದಾರೆ.

ಮಡಿಕೇರಿ ನಗರ ಸೇರಿದಂತೆ ಜಿಲ್ಲೆಯ ನಾನಾ ಕಡೆಗಳಲ್ಲಿ ಈಗಾಗಲೇ ಬಂಟಿಂಗ್ಸ್ ಬ್ಯಾನರ್ ಗಳನ್ನು ಅಳವಡಿಸಲಾಗಿದೆ. ಇವುಗಳಿಗೆ ಅನುಮತಿ ಪಡೆಯಲಾಗಿದೆಯೇ ಎಂದು ಜಿಲ್ಲಾಧಿಕಾರಿ ಅವರು ಸ್ಥಳೀಯ ಸಂಸ್ಥೆಗಳ
ಅಧಿಕಾರಿಗಳಿಂದ ಮಾಹಿತಿ ಪಡೆದರು. ಬ್ಯಾನರ್, ಬಂಟಿಂಗ್ಸ್ ಅಳವಡಿಸುವುದಕ್ಕೆ ಅಭ್ಯಂತರವಿಲ್ಲ, ಆದರೆ ಯಾವ ಪ್ರದೇಶದಲ್ಲಿ ಅಳವಡಿಸುತ್ತಾರೆ ಎಂಬುದು ಮುಖ್ಯವಾಗಿದೆ. ಆದ್ದರಿಂದ ಈಗಾಗಲೇ ಅಳವಡಿಸಲಾಗಿರುವ ಬಂಟಿಂಗ್ಸ್, ಬ್ಯಾನರ್ ಗಳಿಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಜಿಲ್ಲೆಯ ನಗರ, ಪಟ್ಟಣ ಹಾಗೂ ಗ್ರಾ.ಪಂ.ವ್ಯಾಪ್ತಿಯಲ್ಲಿನ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು. ಜೊತೆಗೆ ಗಡಿ ಪ್ರದೇಶಗಳಲ್ಲಿಯೂ ನಿಗಾ ವಹಿಸುವಂತೆ ನಗರಸಭೆ, ಪ.ಪಂ. ಹಾಗೂ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

ನಾಗರಿಕರು ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಜಿಲ್ಲಾಡಳಿತದ ಆಶಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಮಾತನಾಡಿ, ಬ್ಯಾನರ್ ಬಂಟಿಂಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೆ ನಗರದ ಕೆಲವು ಕಡೆ ಗಲಭೆಗಳು ಉಂಟಾಗಿವೆ. ಇಂತಹ ಪ್ರಕರಣಗಳು ಮರುಕಳುಹಿಸಬಾರದು ಎಂಬುದು ಪೊಲೀಸ್ ಇಲಾಖೆಯ ಉದ್ದೇಶವಾಗಿದೆ ಎಂದರು.

ಸ್ಥಳೀಯ ಸಂಸ್ಥೆಗಳು ಅನುಮತಿ ನೀಡುವಾಗ ಸ್ಥಳ ಪರಿಶೀಲನೆ ಮಾಡಬೇಕು. ಈಗಾಗಲೇ ಉಪ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಪೊಲೀಸ್ ಠಾಣಾ ಅಧಿಕಾರಿಗಳ ಹಂತದಲ್ಲಿ ಶಾಂತಿ ಸಭೆಗಳು ನಡೆದಿವೆ ಎಂದು ಅವರು ತಿಳಿಸಿದರು.

ಮತ್ತೊಬ್ಬರಿಗೆ ನೋವು ಉಂಟಾಗದಂತೆ ನಡೆದುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಹಬ್ಬವನ್ನು ಶಾಂತಿ ಮತ್ತು ನೆಮ್ಮದಿಯಿಂದ ಆಚರಿಸುವಂತಾಗಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಅವರು ಮನವಿ ಮಾಡಿದರು.

ಸಮಾಜದ ರಕ್ಷಣೆ ಬರೀ ಪೊಲೀಸ್ ಇಲಾಖೆಗೆ ಮಾತ್ರವಲ್ಲ, ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕರದ್ದಾಗಿದೆ ಎಂಬುದನ್ನು ಮನಗಾನಬೇಕಿದೆ ಎಂದು ಪಿ.ರಾಜೇಂದ್ರ ಪ್ರಸಾದ್ ಅವರು ಹೇಳಿದರು. ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ ಅವರು ಜಿಲ್ಲೆಯ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಜಾಗೃತಿ ವಹಿಸುವುದು ಅತ್ಯಗತ್ಯವಾಗಿದೆ ಎಂದು ಅವರು ಸಲಹೆ ಮಾಡಿದರು.

See also  ಕೃಷಿ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿನಿಯರೇ ಅಧಿಕವಾದರೂ,  ಉದ್ಯೋಗಿತರಾಗುವ ಪ್ರಮಾಣ ಶೇ.25ರಷ್ಟು: ಸಚಿವ ಬಿ ಸಿ ಪಾಟೀಲ್

ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳಾದ ಪಡ್ನೇಕರ್, ಚಂದ್ರಶೇಖರ್, ಜೀವನ್ ಕುಮಾರ್, ಪೌರಾಯುಕ್ತರಾದ ಬಿ.ಬಿ.ಪುಷ್ಪಾವತಿ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳಾದ ಕೃಷ್ಣ ಪ್ರಸಾದ್, ಶ್ರೀಧರ ಅವರು ಬ್ಯಾನರ್, ಬಂಟಿಂಗ್ಸ್ ಮತ್ತಿತರ ಅನುಮತಿ ನೀಡುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಡಿವೈಎಸ್ಪಿಗಳಾದ ಛಬ್ಬಿ, ಕುಮಾರ, ರಾಜು ಅವರು ತಮ್ಮ ವ್ಯಾಪ್ತಿಯಲ್ಲಿ ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಸಂಬಂಧ ಹಲವು ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು