News Kannada
Monday, October 03 2022

ಕರ್ನಾಟಕ

ಕೇಂದ್ರ ಸರಕಾರದ ವಿರುದ್ಧ ಕಾರ್ಮಿಕ ವರ್ಗದಿಂದ ಬೃಹತ್ ಪ್ರತಿಭಟನೆ : ರಸ್ತೆಗಿಳಿದ ಸಾವಿರ ಸಾವಿರ ಶ್ರಮಿಕ ವರ್ಗ - 1 min read

Photo Credit :

ಕೇಂದ್ರ ಸರಕಾರದ ವಿರುದ್ಧ ಕಾರ್ಮಿಕ ವರ್ಗದಿಂದ ಬೃಹತ್ ಪ್ರತಿಭಟನೆ : ರಸ್ತೆಗಿಳಿದ ಸಾವಿರ ಸಾವಿರ ಶ್ರಮಿಕ ವರ್ಗ

ಮಡಿಕೇರಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ದೇಶವ್ಯಾಪಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿ ಶುಕ್ರವಾರದ ಮುಷ್ಕರಕ್ಕೆ ಕೊಡಗಿನ ಬಹುತೇಕ ಎಲ್ಲಾ ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದವು.

ಸಿಪಿಐಎಂ ಪಕ್ಷ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಮಿಕ ಘಟಕಗಳು, ಗ್ರಾ.ಪಂ ನೌಕರರ ಸಂಘ, ಹಮಾಲಿ ಕಾರ್ಮಿಕರ ಸಂಘ, ಬಿಸಿಯೂಟ ನೌಕರರ ಸಂಘ, ವಿಮಾ ನೌಕರರ ಸಂಘ, ಕೆಎಸ್ಆರ್ ಟಿಸಿ ಸಿಬ್ಬಂದಿಗಳು, ತೋಟ ಕಾರ್ಮಿಕರ ಸಂಘ, ಸರಕಾರಿ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ, ಸಿಐಟಿಯು, ಎಐಟಿಯುಸಿ ಸೇರಿದಂತೆ ಅನೇಕ ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸುವ ಮೂಲಕ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದವು.
    
ಕೇಂದ್ರ ಸರ್ಕಾರದ ಉದಾರೀಕರಣ ಹಾಗೂ ಖಾಸಗೀಕರಣ ನೀತಿಗಳಿಂದಾಗಿ ಕಾರ್ಮಿಕ ವರ್ಗ ಸಂಕಷ್ಟವನ್ನು ಎದುರಿಸುತ್ತಿದೆಯೆಂದು ಆರೋಪಿಸಿದ ಪ್ರತಿಭಟನಾಕಾರರು ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತರಬಾರದೆಂದು ಒತ್ತಾಯಿಸಿದರು.

ಕಾರ್ಮಿಕ ಸಂಘಟನೆಗಳ ಜಂಟಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದಿಂದ ನಗರದ ಮುಖ್ಯ ಬೀದಿಗಳಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಕಾರ್ಮಿಕ ಸಂಘಟನೆಗಳ ಜಂಟಿ ಜಿಲ್ಲಾ ಸಮಿತಿಯ ಪ್ರಮುಖರಾದ ಪಿ.ಆರ್. ಭರತ್, ಡಾ.ದುರ್ಗಾಪ್ರಸಾದ್, ಅಂಗನವಾಡಿ ನೌಕರರರ ಸಂಘದ ಪ್ರಮುಖರಾದ ಟಿ.ಪಿ.ರಮೇಶ್, ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ನ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಸೇರಿದಂತೆ ಹಲವು ಪ್ರಮುಖರ ನೇತೃತ್ವದಲ್ಲಿ ಕೆಂಪು ಧ್ವಜಗಳನ್ನು ಹಿಡಿದ ಕಾರ್ಮಿಕ ಸಮೂಹ ಜಿಲ್ಲಾಡಳಿತ ಭವನಕ್ಕೆ ಆಗಮಿಸಿ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರಿಗೆ ಮನವಿಯನ್ನು ಸಲ್ಲಿಸಿದರು.

ಜಿಲ್ಲಾಧಿಕಾರಿಗಳಿಗೆ ನೀಡಿದ ಮನವಿಯಲ್ಲಿ ಪ್ರಮುಖವಾಗಿ ಬೆಲೆ ಏರಿಕೆ ನಿಯಂತ್ರಣಕ್ಕಾಗಿ ಸಾರ್ವತ್ರಿಕ ಸಾರ್ವಜನಿಕ ವಿತರಣಾ ವ್ಯವಸ್ಥೆ ಜಾರಿ ಮಾಡಬೇಕು, ಕಾಡಾನೆ ಹಾವಳಿಯಿಂದ ಕಾರ್ಮಿಕರ ಪ್ರಾಣ ಮತ್ತು ಬೆಳೆಯನ್ನು ಸಂರಕ್ಷಿಸಬೇಕು, ನಿವೇಶನ ರಹಿತರಿಗೆ ನಿವೇಶನ ಒದಗಿಸಬೇಕು, ಕೊಡಗಿನಲ್ಲಿ ಕಾರ್ಮಿಕ ನ್ಯಾಯಾಲಯವನ್ನು ಆರಂಭಿಸಬೇಕು, 3 ಸಾವಿರ ರೂ. ಕನಿಷ್ಠ ಪಿಂಚಣಿಗಾಗಿ ಬೋನಸ್ ಭವಿಷ್ಯನಿಧಿ, ಉಪಧನ ಕಾಯ್ದೆಗಳಲ್ಲಿನ ಮಿತಿಗಳನ್ನು ಹೆಚ್ಚಳ ಮಾಡಬೇಕೆಂದು ಒತ್ತಾಯಿಸಲಾಗಿದೆ.

See also  ಎತ್ತಿನಹೊಳೆ ಕಾಮಗಾರಿ ಚುರುಕುಗೊಳಿಸಲು ಡಿಕೆಶಿ ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು