ಮಂಡ್ಯ: ಜಿಲ್ಲಾ ಕಾವೇರಿ ಹೋರಾಟಗಾರರ ಮೇಲೆ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿದ್ದು, ಇದಕ್ಕೆ ಕಾರಣವಾದ ರಾಜ್ಯದ ಮುಖ್ಯಮಂತ್ರಿ ಸಿದ್ದಾಮಯ್ಯ ಅವರ ವಿರುದ್ಧ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮುಖಂಡ ಸಿದ್ದರಾಜು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಅವರು ಮುಖ್ಯಮಂತ್ರಿಗಳ ವಿರುದ್ಧ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಇಷ್ಟಕ್ಕೆಲ್ಲ ಕಾರಣರಾಗಿರುವ ಮುಖ್ಯಮಂತ್ರಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಬಿತ್ತನೆ ಭತ್ತ ನೀಡಿ, ನಾಟಿ ಮಾಡಿ, ಕಾವೇರಿ ನೀರು ಕೊಡುತ್ತೇವೆ, ವ್ಯವಸಾಯ ಮಾಡಿ ಎಂದು ಹೇಳಿದ ಮುಖ್ಯಮಂತ್ರಿಗಳು, ಜಿಲ್ಲೆಯ ರೈತರು ಭತ್ತ ನಾಟಿ ಮಾಡಿ ನೀರಿಗಾಗಿ ಕಾಯುತ್ತಿದ್ದರೆ, ರಾಜ್ಯ ಸರ್ಕಾರ ಏಕಾಏಕಿ ತಮಿಳುನಾಡಿಗೆ ಕಾವೇರಿ ನೀರನ್ನು ಬಿಟ್ಟು ಜಿಲ್ಲೆಯ ರೈತರಿಗೆ ಅನ್ಯಾಯ ಮಾಡಿದೆ ಎಂದು ದೂರಿದ್ದಾರೆ.
ರೈತರು ವ್ಯವಸಾಯಕ್ಕೆ ಸುಮಾರು 50 ಸಾವಿರದಿಂದ ಒಂದು ಲಕ್ಷದವರೆಗೆಗೂ ಖರ್ಚು ಮಾಡಿರುವ ಹಣಕ್ಕೆ 10 ಪಟ್ಟು ಹೆಚ್ಚು ಪರಿಹಾರ ನೀಡಬೇಕು. ಕಾವೇರಿ ಹೋರಾಟಗಾರರ ಮೇಲೆ ದಾಖಲಾಗಿರುವ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು. ಅನ್ಯಾಯವಾದಾಗ ಪ್ರತಿಯೊಬ್ಬರೂ ರಸ್ತೆಗೆ ಇಳಿದು ಪ್ರತಿಭಟನೆ ಮಾಡುವುದು ಸಹಜ. ಪ್ರತಿಭಟನೆಯಿಂದ ರಾಜ್ಯ ಸರ್ಕಾರಕ್ಕೆ ನಷ್ಟವಾಗಿದ್ದರೆ, ಕೇಸು ದಾಖಲಿಸುತ್ತಾರೆ. ರೈತರಿಗೆ ನಷ್ಟವಾಗಿರುವುದರಿಂದ ಹೋರಾಟಗಾರರಾದ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ದೂರನ್ನು ದಾಖಲಿಸಿದ್ದೇವೆ ಎಂದು ಸಿದ್ದರಾಜು ತಿಳಿಸಿದ್ದಾರೆ.