News Kannada
Saturday, October 01 2022

ಕರ್ನಾಟಕ

ರಸ್ತೆ ಅಪಘಾತ: ಕಲಬುರಗಿ ಲೋಕಾಯುಕ್ತ ಎಸ್ಪಿ ಎಂ.ಬಿ.ಪಾಟೀಲ್ ಸಾವು - 1 min read

Photo Credit :

ರಸ್ತೆ ಅಪಘಾತ: ಕಲಬುರಗಿ ಲೋಕಾಯುಕ್ತ ಎಸ್ಪಿ ಎಂ.ಬಿ.ಪಾಟೀಲ್ ಸಾವು

ಹಾವೇರಿ: ಬಸ್ ಮತ್ತು ಟೆಂಪೋ ಟ್ರಾವೆಲರ್‌ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಕಲಬುರಗಿ ಜಿಲ್ಲೆಯ ಲೋಕಾಯುಕ್ತ ಎಸ್ಪಿ ಎಂ.ಬಿ.ಪಾಟೀಲ್ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ಬೈಪಾಸ್ ಬಳಿ ಶುಕ್ರವಾರ ಮುಂಜಾನೆ ಈ ಅಪಘಾತ ನಡೆದಿದೆ.

ಸಕ್ಕರೆ ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಬೇಕಿತ್ತು. ಅದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ ಬಸ್ಸಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ರಭಸಕ್ಕೆ ಎಂ.ಬಿ.ಪಾಟೀಲ್ ಅವರು ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬೆಂಗಳೂರಿನ ಡಾ. ಅಂಕಿತ, ಚನ್ನಬಸವಯ್ಯ, ಬೆಳಗಾವಿಯ ಗಂಗಾಧರ ನಗರದ ಶ್ರೀಕಾಂತ ಹಾವನೂರು ಎಂದು ಗುರುತಿಸಲಾಗಿದೆ. ವಿವಿಧ ಆಸ್ಪತ್ರೆಗಳಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
 
ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ಸ್ಪೀಪರ್‌ ಕೋಚ್ ಬಸ್ಸಿನಲ್ಲಿ ಲೋಕಾಯುಕ್ತ ಎಸ್ಪಿ ಎಂ.ಬಿ.ಪಾಟೀಲ್ ಪ್ರಯಾಣಿಸುತ್ತಿದ್ದರು. ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಕಾಡಾನೆ ಹಾವಳಿ ತಡೆಗೆ ಒತ್ತಾಯಿಸಿ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು