News Kannada
Friday, September 30 2022

ಕರ್ನಾಟಕ

ಕಾವೇರಿ ವಿವಾದ: ಪ್ರಧಾನಿ ಮಧ್ಯಸ್ಥಿಕೆಗೆ ರಮ್ಯ ಒತ್ತಾಯ - 1 min read

Photo Credit :

ಕಾವೇರಿ ವಿವಾದ: ಪ್ರಧಾನಿ ಮಧ್ಯಸ್ಥಿಕೆಗೆ ರಮ್ಯ ಒತ್ತಾಯ

ಮಡಿಕೇರಿ: ಮುಂಗಾರಿನ ಕೊರತೆಯಿಂದ ಎದುರಾಗುವ ಸಂಕಷ್ಟ ಕಾಲದಲ್ಲಿ ಕಾವೇರಿ ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ಟ್ರಿಬ್ಯೂನಲ್ ನ ಮೂಲ ಒಪ್ಪಂದಗಳಲ್ಲಿ ಬದಲಾವಣೆಯಾಗಬೇಕು ಮತ್ತು ಪ್ರಧಾನ ಮಂತ್ರಿಗಳು ಮಧ್ಯಸ್ಥಿಕೆ ವಹಿಸಬೇಕೆಂದು ಮಂಡ್ಯದ ಮಾಜಿ ಸಂಸದೆ ರಮ್ಯ ಒತ್ತಾಯಿಸಿದ್ದಾರೆ.

ಮಾತೆ ಕಾವೇರಿಯ ತೀರ್ಥೋದ್ಭವವನ್ನು ವೀಕ್ಷಿಸಲು ಸೋಮವಾರ ಮುಂಜಾನೆ ತಲಕಾವೇರಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಾವೇರಿ ನದಿ ಪಾತ್ರಗಳಲ್ಲಿನ ಮರಳು ದಂಧೆ, ಪರಿಸರ ನಾಶ ಮೊದಲಾದ ಕೃತ್ಯಗಳಿಂದ ಮಳೆಯ ಕೊರತೆ ಸೇರಿದಂತೆ ಪ್ರಕೃತಿ ವಿಕೋಪಗಳನ್ನು ನಾವಿಂದು ಕಾಣುವಂತಾಗಿದೆ ಎಂದರು. ಪರಿಸರ ಸಂರಕ್ಷಣೆಗೆ ಪ್ರಥಮವಾಗಿ ನಾವಿಂದು ಅಗತ್ಯ ಕ್ರಮ ಕೈಗೊಳ್ಳಬೇಕಿದೆಯೆಂದು ಕಳಕಳಿ ವ್ಯಕ್ತಪಡಿಸಿದ ರಮ್ಯ, ಈ ನಿಟ್ಟಿನಲ್ಲಿ ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಮಳೆ ನೀರಿನ ಕೊಯ್ಲುವಿಗೆ ಒತ್ತು ನೀಡಿ ಕಾರ್ಯನಿರ್ವಹಿಸಲಿದ್ದೇನೆಂದು ಸ್ಪಷ್ಟಪಡಿಸಿದರು.

ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡಿ, ಕಾವೇರಿಯ ನೀರನ್ನು ಬಳಸುವ ಕರ್ನಾಟಕ, ತಮಿಳುನಾಡು, ಕೇರಳ, ಪಾಂಡಿಚೇರಿ ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎನ್ನುವ ಹಾರೈಕೆ ತನ್ನದು. ನದಿ ನೀರಿನ ಹಂಚಿಕೆ ವಿವಾದದಿಂದ ಉಂಟಾದ ಗಲಭೆಗಳಿಂದಾಗಿ 2500 ಕೊಟಿಗೂ ಹೆಚ್ಚಿನ ನಷ್ಟ ಸಂಭವಿಸಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾದ ಸಂದರ್ಭ ಹೊರ ಜಿಲ್ಲೆ ಮತ್ತು ರಾಜ್ಯಗಳು ಅದರ ಲಾಭವನ್ನು ಪಡೆದುಕೊಳ್ಳುತ್ತವೆ. ಅದೇ ಅವಧಿಯಲ್ಲಿ ಅತಿವೃಷ್ಟಿಯಿಂದ ಕೊಡಗು ಸಂಕಷ್ಟಕ್ಕೆ ಸಿಲುಕುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ರಾಜ್ಯದಲ್ಲಿರುವ ಯಾವುದೇ ಸರ್ಕಾರಗಳು ವಿಶೇಷ ಅನುದಾನವನ್ನು ಒದಗಿಸಬೇಕೆಂದು ಆಗ್ರಹಿಸಿದರು.

ಮಂಡ್ಯದ ಎಂಎಲ್ಸಿಗಳಾದ ಶ್ರೀಕಂಠೇಗೌಡ ಮತ್ತು ಅಪ್ಪಾಜಿ ಗೌಡ ಅವರು ಈ ಸಂದರ್ಭ ಮಾತನಾಡಿ, ಕೊಡಗಿನ ಸಮಗ್ರ ಅಭಿವೃದ್ಧಿಗೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ನಾವು ಕೂಡ ಕೈಜೋಡಿಸುತ್ತೇವೆ ಮತ್ತು ಆ ನಿಟ್ಟಿನಲ್ಲಿ ಕಟಿಬದ್ಧರಾಗಿರುವುದಾಗಿ ಸ್ಪಷ್ಟಪಡಿಸಿದರು.

ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಬೆಳಗ್ಗಿನ ಅವಧಿಯಲ್ಲಿ ತೀರ್ಥೋದ್ಭವ ಘಟಿಸಿದರೆ ಒಳ್ಳೆಯದಾಗುತ್ತದೆ ಎನ್ನುವ ಭಾವನೆ ಇದ್ದು, ಅದರಂತೆ ನಾಡಿನ ಸುಭಿಕ್ಷೆಗೆ ಮಾತೆ ಕಾವೇರಿ ಹರಸುವಂತಾಗಲಿ ಎಂದರು.

See also  ಕುಟ್ಟದಲ್ಲಿ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು