News Kannada
Sunday, September 25 2022

ಕರ್ನಾಟಕ

ಕಾವೇರಿಗಾಗಿ ಸಂಘಟಿತ ಹೋರಾಟ ಅಗತ್ಯ: ಶಿವಣ್ಣ - 1 min read

Photo Credit :

ಕಾವೇರಿಗಾಗಿ ಸಂಘಟಿತ ಹೋರಾಟ ಅಗತ್ಯ: ಶಿವಣ್ಣ

ಮಡಿಕೇರಿ: ಜೀವನದಿ ಕಾವೇರಿ ಸಂರಕ್ಷಣೆ ವಿಚಾರದಲ್ಲಿ ರಾಜ್ಯದ ಜನತೆ ಜಾತಿ, ಧರ್ಮ, ಭಾಷೆಯ ಹಂಗು ತೊರೆದು ಸಂಘಟಿತರಾಗಿ ಹೋರಾಡುವುದು ಅಗತ್ಯವಾಗಿದೆ ಎಂದು  ಸ್ಯಾಂಡಲ್ ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದರು.

ಕುಶಾಲನಗರದ ಬಾರವಿ ಕಾವೇರಿ ಕನ್ನಡ ಸಂಘದ ಆಶ್ರಯದಲ್ಲಿ ಕೊಪ್ಪ ಕಾವೇರಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬೆಳ್ಳಿ ಕಿರೀಟ ತೊಡಿಸಿ ಕಾವೇರಿಮಾತೆ ವಿಗ್ರಹ ನೀಡುವ ಮೂಲಕ ಬಿರುದು ಪ್ರದಾನ ಮಾಡಲಾಯಿತು. ಬಿರುದು ಮತ್ತು ಸನ್ಮಾನ ಸ್ವೀಕರಿಸಿ ಮಾತನಾಡಿದ ನಟ ಶಿವರಾಜ್ ಕುಮಾರ್ ಮಹಾದಾಯಿ ಮತ್ತು ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಈ ವಿಚಾರವಾಗಿ ನೆರೆ ರಾಜ್ಯ ಹಾಗೂ ಅಲ್ಲಿನ ಜನತೆ ಬಗ್ಗೆ ದ್ವೇಷ ಸಾಧನೆ ಸಲ್ಲದು. ಸಾರ್ವಜನಿಕ ಸ್ವತ್ತಿಗೆ ಹಾನಿಯುಂಟು ಮಾಡದೆ ಶಾಂತಿಯುತವಾಗಿ ಹೋರಾಟದಲ್ಲಿ ಪಾಲ್ಗೊಂಡು ನಮ್ಮ ಹಕ್ಕನ್ನು ಪಡೆದುಕೊಳ್ಳಬೇಕಾಗಿದೆ. ಕರ್ನಾಟದಲ್ಲಿ ನೆಲೆಸಿರುವ ಪ್ರತಿಯೊಬ್ಬರೂ  ಜೀವನದಿಗಳ ಸ್ವಚ್ಛತೆ ಹಾಗೂ ಸಂರಕ್ಷಣೆಗೆ ಆದ್ಯತೆ ನೀಡುವ ಮೂಲಕ ನೀರಿನ ಋಣವನ್ನು ತೀರಿಸಬೇಕಿದೆ. ಮಳೆಯ ಕೊರತೆ ಕಾರಣ ರಾಜ್ಯದಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ಉತ್ತಮ ಮಳೆಯಾಗಿ ರೈತರು ಹಾಗೂ ಜನತೆಯ ಸಂಕಷ್ಟ ಪರಿವಾರವಾಗಲಿ ಎಂದು ಹೇಳಿದರು.

ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್ ಮಾತನಾಡಿ, ಕೇಂದ್ರ ಸರಕಾರ ಗಂಗಾ ನದಿ ಶುದ್ಧೀಕರಣಕ್ಕೆ ಯೋಜನೆ ರೂಪಿಸಿರುವಂತೆ ಕಾವೇರಿ ನದಿ ಸಂರಕ್ಷಣೆಗೆ ಕೂಡ ಯೋಜನೆ ರೂಪಿಸುವುದು ಅನಿವಾರ್ಯವಾಗಿದೆ ಎಂದು ಅಭಿಪ್ರಾಯಪಟ್ಟರು. ಟಿಬೇಟಿಯನ್ ನಿರಾಶ್ರಿತರ ಶಿಬಿರದ ಬೌದ್ಧ ಧರ್ಮಗುರು ಕರ್ಮ ರಿಂಪೋಚೆ, ಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾವಿತ್ರ ರಾಮಣ್ಣ, ಕುಶಾಲನಗರ ಗಣಪತಿ ದೇವಾಲಯದ ಪ್ರಧಾನ ಅರ್ಚಕರಾದ ಆರ್.ಎಸ್.ಕಾಶೀಪತಿ, ಉದ್ಯಮಿ ಸಾತಪ್ಪನ್, ಬಾರವಿ ಕಾವೇರಿ ಕನ್ನಡ ಸಂಘದ ಪ್ರಮುಖರಾದ ಬಬೀಂದ್ರ ಪ್ರಸಾದ್, ರವೀಂದ್ರ ಪ್ರಸಾದ್, ವಿಜೇಂದ್ರ ಪ್ರಸಾದ್ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೂ ಮುನ್ನ ಡಾ.ಶಿವರಾಜ್ ಕುಮಾರ್ ಕಾವೇರಿ ಮಾತೆಯ ಪ್ರತಿಮೆಗೆ ವಿಶೇಷ ಪೂಜೆ ನೆರವೇರಿಸಿದರು.  ಅಲ್ಲದೆ ಚಲನಚಿತ್ರ ಗೀತೆಗಳನ್ನು ಹಾಡಿ ನೆರೆದಿದ್ದ ಅಭಿಮಾನಿಗಳನ್ನು ರಂಜಿಸಿದರು.

See also  ಅಡಿಕೆ ಹಾನಿಕಾರಕ: ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು