News Kannada
Thursday, September 29 2022

ಕರ್ನಾಟಕ

ಕೊಡಗಿನಲ್ಲಿ ಯುದ್ಧ ಸ್ಮಾರಕ ಲೋಕಾರ್ಪಣೆ - 1 min read

Photo Credit :

ಕೊಡಗಿನಲ್ಲಿ ಯುದ್ಧ ಸ್ಮಾರಕ ಲೋಕಾರ್ಪಣೆ

ಮಡಿಕೇರಿ: ಬಾಳುಗೋಡು ಗ್ರಾಮದ ಕೊಡವ ಸಮಾಜಗಳ ಒಕ್ಕೂಟದ ವತಿಯಿಂದ ನೂತನವಾಗಿ ನಿರ್ಮಿಸಿರುವ ಯುದ್ಧ ಸ್ಮಾರಕವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಹಾಗೂ ಲೆಪ್ಟಿನೆಂಟ್ ಜನರಲ್ (ನಿವೃತ್ತ) ಕೋದಂಡ ಎನ್.ಸೋಮಣ್ಣ ಅವರು ಶನಿವಾರ ಲೋಕಾರ್ಪಣೆ ಮಾಡಿದರು.    

ಬಾಳುಗೋಡು ಗ್ರಾಮದ ಕೊಡವ ಸಮಾಜಗಳ ಒಕ್ಕೂಟದ ಸಾಂಸ್ಕೃತಿಕ ಭವನದ ಬಳಿ ನಿರ್ಮಿಸಿರುವ ಹುತಾತ್ಮ ಯೋಧರ ಯುದ್ಧ ಸ್ಮಾರಕಕ್ಕೆ ಪುಷ್ಪಗುಚ್ಛವಿರಿಸಿ ಗೌರವ ನಮನ ಸಲ್ಲಿಸಿದರು.

ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಅವರು ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಸರ್ಕಾರ ಕಟಿ ಬದ್ಧವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದು, ವಿಶೇಷ ಪ್ಯಾಕೇಜ್ ನಡಿ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ ಎಂದು ಸಚಿವರು ತಿಳಿಸಿದರು.  

ವಿರಾಜಪೇಟೆ-ಮಾಕುಟ್ಟ ಮುಖ್ಯ ರಸ್ತೆಯಿಂದ ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟದ ಸಾಂಸ್ಕೃತಿಕ ಕೇಂದ್ರದ ವರೆಗೆ ರಸ್ತೆ ಅಭಿವೃದ್ಧಿ ಸೇರಿದಂತೆ ಜಿಲ್ಲೆಯ ನಾನಾ ರಸ್ತೆಗಳ ಅಭಿವೃದ್ದಿಗೆ ಚಾಲನೆ ನೀಡಲಾಗುವುದು. ಜಿಲ್ಲೆಯ ರಸ್ತೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು. ಕೊಡವ ಸಮಾಜಗಳ ಒಕ್ಕೂಟ ವತಿಯಿಂದ ಬಾಳುಗೋಡುವಿನಲ್ಲಿ ಐದನೇ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.

ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಕೊಡಗಿನ ಆಚಾರ-ವಿಚಾರ, ಸಂಸ್ಕೃತಿ ಶಾಶ್ವತವಾಗಿ ಉಳಿಯುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.   

ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ಎಲ್ಲಾ ಜನಾಂಗದವರ ಹೆಸರಿನಲ್ಲಿ ಹುತಾತ್ಮ ಯೋಧರ ಸ್ಮಾರಕ ನಿರ್ಮಿಸಿರುವುದು ಒಳ್ಳೆಯ ಬೆಳವಣಿಗೆ. ಕೊಡಗಿನ ಜನ್ಮ ಭೂಮಿಯನ್ನು ಮಾರಿಕೊಳ್ಳಬೇಡಿ. ಕೊಡವ ಸಮಾಜಗಳ ಒಕ್ಕೂಟಕ್ಕೆ ಶಾಸಕರ ಅನುದಾನದಡಿ ಸಹಕಾರ ನೀಡಲಿದ್ದಾರೆ ಎಂದು ಅವರು ತಿಳಿಸಿದರು.    

ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ ಹಾಗೂ ವೀಣಾ ಅಚ್ಚಯ್ಯ, ಲೆಪ್ಟಿನೆಂಟ್ ಜನರಲ್(ನಿವೃತ್ತ) ಕೋದಂಡ ಎನ್.ಸೋಮಣ್ಣ ಮಾತನಾಡಿದರು.

ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರು ಮಾತನಾಡಿ ಬಾಳುಗೋಡು ಕೊಡವ ಸಮಾಜಗಳ ಒಕ್ಕೂಟಕ್ಕೆ 15 ಎಕರೆ ಭೂಮಿಯನ್ನು ಕಂದಾಯ ಸಚಿವರಾಗಿದ್ದ ಎಚ್.ಸಿ.ಶ್ರೀಕಂಠಯ್ಯ ಅವರು ಮಂಜೂರು ಮಾಡಿದ್ದರು, ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು 2 ಕೋಟಿ ರೂ ಹಾಗೂ ಹಾಲಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ ಅವರು 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಕೊಡವ ಸಮಾಜಗಳ ಒಕ್ಕೂಟ ಅಭಿವೃದ್ಧಿಗೆ ಸಹಕರಿಸಿದ್ದಾರೆ ಎಂದರು.

ಕೊಡವ ಸಮಾಜಗಳ ಒಕ್ಕೂಟದ ಮಾಜಿ ಅಧ್ಯಕ್ಷರಾದ ದಾದಾ ಬೆಳ್ಯಪ್ಪ, ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಬಿ.ಎಸ್.ತಮ್ಮಯ್ಯ, ತಹಸೀಲ್ದಾರ್ ಮಹದೇವ ಸ್ವಾಮಿ, ತಾ.ಪಂ.ಇಒ ಪಡ್ನೇಕರ್, ಕೊಡವ ಸಮಾಜಗಳ ಅಧ್ಯಕ್ಷರು, ಕೊಡವ ಸಮಾಜದ ಒಕ್ಕೂಟದ ಪದಾಧಿಕಾರಿಗಳು ಇದ್ದರು.
 

See also  ದಂಪತಿಗಳ ಮೇಲೆ ಬಿದ್ದ ಗೋಡೆಯ ಕಲ್ಲು: ಮಹಿಳೆ ಸಾವು, ಇನ್ನೊಬ್ಬ ಚಿಂತಾಜನಕ ಸ್ಥಿತಿಯಲ್ಲಿ

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು