News Kannada
Monday, September 26 2022

ಕರ್ನಾಟಕ

ಟಿಪ್ಪು ಜಯಂತಿ: ಇಂದಿನಿಂದ ಮದ್ಯ ಮಾರಾಟ ನಿಷೇಧ - 1 min read

Photo Credit :

ಟಿಪ್ಪು ಜಯಂತಿ: ಇಂದಿನಿಂದ ಮದ್ಯ ಮಾರಾಟ ನಿಷೇಧ

ಮಡಿಕೇರಿ: ಇದೇ ನ.10ರಂದು ನಡೆಯುವ ಟಿಪ್ಪು ಜಯಂತಿ ಹಿನ್ನೆಲೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಾಕಷ್ಟು ಮುಂಜಾಗೃತೆ ಹಾಗೂ ಬಂದೋಬಸ್ತ್ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ತಿಳಿಸಿದ್ದಾರೆ.    
 ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರುಗಳು ಶಾಂತಿ ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ತಹಶೀಲ್ದಾರರಿಗೆ ಇರುವ ದಂಡಾಧಿಕಾರಿಯ ಅಧಿಕಾರವನ್ನು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳಿಗೆ ನೀಡಲಾಗಿದೆ. ಕೊಡಗು ಶಾಂತಿ ಪ್ರಿಯ ಜಿಲ್ಲೆಯಾಗಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಕೋರಿದ ಜಿಲ್ಲಾಧಿಕಾರಿ ಅವರು ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.  

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಅವರು ಮಾತನಾಡಿ ನ.10ರಂದು ಟಿಪ್ಪು ಜಯಂತಿಯನ್ನು ಆಚರಣೆ ಮಾಡಲಾಗುತ್ತಿದ್ದು, ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ವಿಶೇಷ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಾದ ಸುನಿಲ್ ಅಗರ್ವಾಲ್, ಐಜಿಪಿ ಬಿ.ಕೆ.ಸಿಂಗ್ ಅವರು ಈಗಾಗಲೇ ಜಿಲ್ಲೆಗೆ ಆಗಮಿಸಿದ್ದಾರೆ ಎಂದರು.

ಜಯಂತಿ ಹಿನ್ನೆಲೆ ಇಬ್ಬರು ಎಸ್.ಪಿಗಳು, 8 ಡಿವೈಎಸ್ಪಿಗಳು, 20 ಇನ್ಸ್ ಪೆಕ್ಟರ್ ಗಳು, 1450 ಮುಖ್ಯ ಪೇದೆ ಹಾಗೂ ಪೇದೆ, 500 ಹೋಂ ಗಾರ್ಡ್, 12 ಕೆ.ಎಸ್.ಆರ್.ಪಿ, ಡಿ.ಆರ್.ಪಿ, ಸೆಕ್ಟರ್ ಮೊಬೈಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಪಿ.ರಾಜೇಂದ್ರ ಪ್ರಸಾದ್ ಮಾಹಿತಿ ನೀಡಿದರು.  ರಾತ್ರಿ ವೇಳೆಯಲ್ಲಿ ಗಸ್ತು ವಾಹನ ತಿರುಗಲು ವ್ಯವಸ್ಥೆ ಮಾಡಲಾಗಿದೆ. 20 ದಿನಗಳಿಂದ ಚೆಕ್ ಪೋಸ್ಟ್ ಗಳಲ್ಲಿ ವಾಹನ ತಪಾಸಣೆ ಮಾಡಲಾಗುತ್ತದೆ. ಸೂಕ್ಷ್ಮ ಪ್ರದೇಶಗಳಲ್ಲಿ ಸಿ.ಸಿ.ಟಿವಿ ಕ್ಯಾಮರಾ ಅಳವಡಿಸಲಾಗಿದೆ. ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 144 ಸೆಕ್ಷನ್ ಜಾರಿಯಲ್ಲಿದ್ದರೂ ಗಲಭೆ ಮಾಡಲು ಮುಂದಾದರೆ ಅಂತವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಇಲಾಖೆ ವತಿಯಿಂದ ರೂಟ್ ಮಾರ್ಚ್ ಮಾಡಲಾಗುವುದು. ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಎಲ್ಲಾ ರೀತಿಯ ರಕ್ಷಣೆ ನೀಡಲಿದೆ ಎಂದು ಅವರು ತಿಳಿಸಿದರು.  ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಸಮಾಜದವರೊಂದಿಗೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಹಾಜರಿದ್ದರು.

ಮದ್ಯ ಮಾರಾಟ ನಿಷೇಧ
ಟಿಪ್ಪು ಜಯಂತಿ ಹಿನ್ನೆಲೆ ಜಿಲ್ಲೆಯಾದ್ಯಂತ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾಗಿರುವ ಅಧಿಕಾರದಂತೆ ನ.9 ರ ರಾತ್ರಿ 10 ಗಂಟೆಯಿಂದ ನ.11 ಬೆಳಗ್ಗೆ 11 ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟ ಮಳಿಗೆಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ರಿಚಡರ್್ ವಿನ್ಸೆಂಟ್ ಡಿಸೋಜ ಅವರು ಆದೇಶ ಹೊರಡಿಸಿದ್ದಾರೆ.  

See also  ನಾರ್ವೆ ಜನರ ಮನಸೆಳೆದ ಕರಾವಳಿಯ ಶಿರವಾಡ ರೈಲ್ವೇ ನಿಲ್ದಾಣದ ಸೊಬಗು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು