News Kannada
Thursday, October 06 2022

ಕರ್ನಾಟಕ

ಕೊಡಗಿನಲ್ಲಿ ಆತಂಕ ಸೃಷ್ಟಿಸಿದ ಕಿಡಿಗೇಡಿಗಳು - 1 min read

Photo Credit :

ಕೊಡಗಿನಲ್ಲಿ ಆತಂಕ ಸೃಷ್ಟಿಸಿದ ಕಿಡಿಗೇಡಿಗಳು

ಮಡಿಕೇರಿ: ಐಗೂರು ನಿವಾಸಿ ವಕೀಲ ಹಾಗೂ ಆರ್ ಎಸ್ಎಸ್ ಮುಖಂಡ ಪದ್ಮನಾಭ ಎಂಬುವರ  ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದ್ದು, ಪೆಟ್ರೋಲ್ ಬಾಂಬ್ ದಾಳಿ ಮೂಲಕ ಕೃತ್ಯ ಎಸಗಿರಬಹುದೆಂದು ಸಂಶಯ ವ್ಯಕ್ತವಾಗಿದೆ.

ಘಟನೆಯಿಂದಾಗಿ ಕೊಡಗಿನಲ್ಲಿ ಆತಂಕ ಶುರುವಾಗಿದ್ದು, ಪ್ರತಿಭಟನೆಗಳು ಆರಂಭವಾಗಿವೆ.

ವಕೀಲ ಪದ್ಮನಾಭ ಎಂಬುವರು ತಮ್ಮ ಮನೆ ಕಾರು ನಿಲ್ಲಿಸಿದ್ದರು ಇದಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಹೊಗೆ ಬರುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಬೆಂಕಿಯನ್ನು ನಂದಿಸಿದ್ದರಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆಯೇ ಜಿಲ್ಲೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಬಿಜೆಪಿ ಸೇರಿದಂತೆ ಹಿಂದೂಪರ ಸಂಘಟನೆಗಳು ಬೀದಿಗೆ ಇಳಿದಿವೆ.

ಕಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಂತಹ ಕೃತ್ಯಗಳು ಮುಂದೆ ನಡೆಯದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಬೇಕು. ಒಂದು ವಾರದ ಒಳಗೆ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಸೋಮವಾರಪೇಟೆ ವಕೀಲರು ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾರೆ.

ಮಡಿಕೇರಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸೋಮವಾರಪೇಟೆ ತಾಲೂಕು ಕಾರ್ಯನಿವಾಹಕ ಹಾಗೂ ವಕೀಲರೂ ಆಗಿರುವ ಐಗೂರಿನ ಪದ್ಮನಾಭ ಅವರ ಕಾರಿಗೆ ಪೆಟ್ರೋಲ್ ಬಾಂಬ್ ಧಾಳಿ ನಡೆಸಿ ಹಾನಿಪಡಿಸಿರುವ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು
ನಗರದ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ.

ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಸೇರಿದಂತೆ ಬಿಜೆಪಿ ಹಾಗೂ ವಿವಿಧ ಹಿಂದೂಪರ ಸಂಘಟನೆಯ ನೂರಾರು ಕಾರ್ಯಕರ್ತರು ಸೋಮವಾರಪೇಟೆಯ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ ತಾಲೂಕು ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲೂಕು ತಹಶೀಲ್ದಾರ್ ಕೃಷ್ಣ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಒಟ್ಟಾರೆ ಶಾಂತಿಯುತವಾಗಿದ್ದ ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆ ಬಳಿಕ ಕೋಮುಭಾವನೆ ಕೆರಳಿಸುವ ಕೃತ್ಯ ನಡೆಯುತ್ತಿದ್ದು, ಬಿಗುವಿನ ವಾತಾವರಣ ನಿರ್ಮಾಣಕ್ಕೆ ಕಾರಣವಾಗುತ್ತಿದೆ. ಪೊಲೀಸರು ಸೂಕ್ತ ತನಿಖೆ ನಡೆಸಿ ಕುರಾನ್ ಗೆ ಬೆಂಕಿ ಹಚ್ಚಿರುವ ಮತ್ತು ಕಾರಿನ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವ ದುಷ್ಕರ್ಮಿಗಳನ್ನು ಬಂಧಿಸಿ ಕ್ರಮಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

See also  ಡಾ.ಬಿ.ಆರ್. ಅಂಬೇಡ್ಕರ್ ನಿವಾಸ ಧ್ವಂಸ ಪ್ರಕರಣ: ಕಿಡಿಗೇಡಿಗಳ ಬಂಧಿಸಲು ಆಗ್ರಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು