News Kannada
Saturday, January 28 2023

ಕರ್ನಾಟಕ

ಸರ್ಕಾರಿ ಆಸ್ಪತ್ರೆಯ ಚುಚ್ಚುಮದ್ದಿಗೆ ಕಂದಮ್ಮ ಬಲಿ..!

Photo Credit :

ಸರ್ಕಾರಿ ಆಸ್ಪತ್ರೆಯ ಚುಚ್ಚುಮದ್ದಿಗೆ ಕಂದಮ್ಮ ಬಲಿ..!

ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಹಸುಗೂಸಿಗೆ ನೀಡಿದ ಚುಚ್ಚುಮದ್ದಿನ ಪರಿಣಾಮ ಮುದ್ದು ಕಂದಮ್ಮ ವೈದ್ಯರು ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ತಡವಾಗಿ ವರದಿಯಾಗಿದೆ.

ತಾಲೂಕಿನ ಹೆಬ್ಬಸೂರು ಗ್ರಾಮದ ಮಹೇಶ್ ಮತ್ತು ಮಮತಾರವರಿಗೆ ಜನಿಸಿದ ಮಗುವಿಗೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಮಗುವಿನ ಜನನ ಬಳಿಕ ನೀಡುವ ಚುಚ್ಚುಮದ್ದಿನಿಂದ ರಕ್ತ ಸಾವ್ರ ಅಧಿಕವಾಗಿ ಕೊನೆಯುಸಿರೆಳೆದ ಘಟನೆ ನಡೆದಿದೆ. ನ.21 ರಂದು ಮಗುವಿನೊಂದಿಗೆ ಹೆಬ್ಬಸೂರಿನಿಂದ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಬಂದ ಮಮತಾ ಮತ್ತು ಮಹೇಶ್ ದಂಪತಿ ಮಗುವಿಗೆ ಚುಚ್ಚು ಮದ್ದು ಕೊಡಿಸಿದ್ದಾರೆ. ಆಗ ಮಗುವಿನ ಚುಚ್ಚು ಮದ್ದು ನೀಡಿದ ಸ್ಥಳದಲ್ಲಿ ರಕ್ತಸ್ರಾವವಾಯಿತು. ಇದನ್ನು ಕಂಡ ಪೋಷಕರು ವಿಚಾರಿಸಿದಾಗ ಮಗುವಿಗೆ ಚುಚ್ಚು ಮದ್ದು ನೀಡಿದ ವೇಳೆ ರಕ್ತಸ್ರಾವವಾಗುತ್ತೆ ತಣ್ಣೀರಿನ ಬಟ್ಟೆ ಕಟ್ಟುತ್ತೇವೆ ರಕ್ತ ನಿಲ್ಲುತ್ತದೆ ಎಂದು ಬಟ್ಟೆ ಕಟ್ಟಿ ಕಳುಹಿಸಿದ್ದಾರೆ.

ಆದರೂ ಕೂಡ ಮಗುವಿಗೆ ರಕ್ತಸ್ರಾವ ನಿಲ್ಲಲಿಲ್ಲ. ಇದರಿಂದ ಗಾಬರಿಯಾದ ಹೆತ್ತವರು, ಸಮೀಪದ ಆಲೂರು ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದ ಬಳಿಕ ನಂತರ ಜಿಲ್ಲಾಸ್ಪತ್ರೆಗೆ ದೌಡಾಯಿಸಿದರು. ಆಗ ಅಲ್ಲಿನ ವೈದ್ಯರು ಮಗುವಿನ ಪರಿಸ್ಥಿತಿ ಕಂಡು, ಕೂಡಲೇ ಮೈಸೂರಿನ ಕೆ.ಆರ್.ಆಸ್ಪತ್ರೆಯ ಚೆಲುವಾಂಬ ಆಸ್ಪತ್ರೆಗೆ ಕಳುಹಿಸಿ ಕೈ ತೊಳೆದುಕೊಂಡರು.

ಮೈಸೂರಿನ ಕೆ.ಆರ್. ಆಸ್ಪತ್ರೆಯ ಚೆಲುವಾಂಬ ಆಸ್ಪತ್ರೆಯಲ್ಲಿ ವೈದ್ಯರು ನೀಡಿದ ಚಿಕಿತ್ಸೆ ಫಲಕಾರಿಯಾಗದೆ ಒಂದೂವರೆ ತಿಂಗಳ ಹಸಗೂಸು ಸಾವನ್ನಪ್ಪಿದೆ. ಆದರೆ ಅಲ್ಲಿನ ವೈದ್ಯರು ಮಗುವಿಗೆ ಚಿಕಿತ್ಸೆ ನೀಡಿದ ವಿವರಗಳನ್ನು ಪೋಷಕರಿಗೆ ನೀಡದೆ ಇರುವುದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್.ಜೈನ್ ರವರಿಗೆ ದೂರು ನೀಡಿ, ಮಗುವಿನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ, ತಪ್ಪಿತಸ್ಥ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಮೇಲೆ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

ಈ ನಡುವೆ ಚಾಮರಾಜನಗರ ಜಿಲ್ಲಾಸ್ಪತ್ರೆಯ ಜಿಲ್ಲಾ ಸರ್ಜನ್ ರಘುರಾಮ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಮತಿಯೊಂದನ್ನು ರಚಿಸಿ ತಪ್ಪಿತಸ್ಥರನ್ನು ಕಾನೂನಿನ ಪ್ರಕಾರ ಕ್ರಮವಹಿಸುವುದಾಗಿ ಪೋಷಕರಿಗೆ ಭರವಸೆ ನೀಡಿದ್ದಾರೆ.

See also  ಆಯುರ್ವೇದ ವೈದ್ಯ ಪದ್ಧತಿ ಕುರಿತು ಜಾಗೃತಿ ಮೂಡಿಸಿ: ಎಡಿಸಿ ಡಾ.ಸ್ನೇಹಾ ಸಲಹೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು