News Kannada
Wednesday, February 01 2023

ಕರ್ನಾಟಕ

ಅತ್ಯಾಚಾರಿಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯ: ಡಿ.5 ರಂದು ಪ್ರತಿಭಟನೆ

Photo Credit :

ಅತ್ಯಾಚಾರಿಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯ: ಡಿ.5 ರಂದು ಪ್ರತಿಭಟನೆ

ಮಡಿಕೇರಿ: ಇತ್ತೀಚೆಗೆ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದ ಶಿಕ್ಷಕಿ ಪ್ರಮೀಳಾ ಅವರ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಹರೀಶ್ ಗಲ್ಲು ಶಿಕ್ಷೆಯಾಗಬೇಕೆಂದು ಒತ್ತಾಯಿಸಿ ಡಿ.5 ರಂದು ಟಿ.ಶೆಟ್ಟಿಗೇರಿ ಹಾಗೂ ಶ್ರೀಮಂಗಲ ಗ್ರಾಮದಲ್ಲಿ ಪ್ರತಿಭಟನೆ ನಡೆಸಲು ಮಾನವ ಹಕ್ಕುಗಳ ಜಾಗೃತಿ ಸಮಿತಿ ನಿರ್ಧರಿಸಿದೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಪಡಿಕಲ್ ಕುಸುಮಾವತಿ ಚಂದ್ರಶೇಖರ್ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳು ಮರುಕಳಿಸದಂತೆ ಜಾಗೃತಿ ವಹಿಸಲು ಶಿಕ್ಷಕಿ ಪ್ರಮೀಳಾ ಅವರ ಪ್ರಕರಣದ ಆರೋಪಿಗೆ ಗಲ್ಲುಶಿಕ್ಷೆಗೆ ನೀಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು. ಹರೀಶ್ ಎಂಬಾತ ಪ್ರಮೀಳಾ ಅವರನ್ನು ಅಮಾನುಷವಾಗಿ ಅತ್ಯಾಚಾರ ಮಾಡಿ ಹತ್ಯೆಗೈದಿದ್ದಾನೆ. ಈತನ ಬಂಧನವಾಗಿದ್ದರೂ ಶಿಕ್ಷಕಿಗೆ ನ್ಯಾಯ ಸಿಗಬೇಕಾದರೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು ಮತ್ತು ಮೃತ ಶಿಕ್ಷಕಿಯ ಇಬ್ಬರು ಮಕ್ಕಳ ವಿದ್ಯಾಭ್ಯಾಸದ ವೆಚ್ಚವನ್ನು ಸರಕಾರವೇ ಭರಿಸಬೇಕು ಎಂದು ಕುಸುಮಾವತಿ ಚಂದ್ರಶೇಖರ್ ಒತ್ತಾಯಿಸಿದರು.

ಡಿ.5 ರಂದು ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರ ಬೆಂಬಲದೊಂದಿಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದೆಂದು ಅವರು ತಿಳಿಸಿದರು. ಸಮಿತಿಯ ಜಿಲ್ಲಾಧ್ಯಕ್ಷ ಸಂದೇಶ್ ಜೋಸೆಫ್ ಡಿಸೋಜ ಮಾತನಾಡಿ ಪ್ರಮೀಳಾ ಅವರ ಹತ್ಯೆ ಪ್ರಕರಣದ ಹಿಂದೆ ಇನ್ನೂ ಕೆಲವರ ಕೈವಾಡವಿದೆ ಎಂದು ಆರೋಪಿಸಿದರು. ಮೃತ ಶಿಕ್ಷಕಿಯ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಸರಕಾರ ನೀಡಬೇಕೆಂದು ಒತ್ತಾಯಿಸಿದ ಅವರು ಈ ಪ್ರಕರಣದಿಂದ ಜಿಲ್ಲೆಯ ಮಹಿಳೆಯರಲ್ಲಿ ಆತಂಕ ಸೃಷ್ಟಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಅಸ್ಸಾಂ ರಾಜ್ಯದಿಂದ ಕಾರ್ಮಿಕರಾಗಿ ವಲಸೆ ಬಂದಿರುವ ಯುವ ಜನತೆ ದುಶ್ಚಟಗಳ ದಾಸರಾಗಿದ್ದು, ಇವರುಗಳಿಂದ ಅಪರಾಧ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿದೆ. ಆದ್ದರಿಂದ ಅಸ್ಸಾಂ ರಾಜ್ಯದ ಕಾರ್ಮಿಕರನ್ನು ಜಿಲ್ಲೆಯಿಂದ ಹೊರ ಕಳುಹಿಸಬೇಕೆಂದು ಸಂದೇಶ್ ಜೋಸೆಫ್ ಡಿಸೋಜ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನಾ ಕಾರ್ಯದರ್ಶಿ ಜೆ.ಸುಬ್ರಮಣಿ ಹಾಗೂ ಸದಸ್ಯರಾದ ಪರ್ಮಲೆ ಗಣೇಶ್ ಉಪಸ್ಥಿತರಿದ್ದರು

See also  ಕಾಸರಗೋಡು: ಅಕ್ರಮವಾಗಿ ದಾಸ್ತಾನಿರಿಸಲಾಗಿದ್ದ ೩೦ ಲೋಡ್ ಮರಳು ವಶ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು