ತುಮಕೂರು: ತಿಪಟೂರು ನಗರದಲ್ಲಿ ಪ್ರೀತ್ಸೇ ಪ್ರೀತ್ಸೇ ಎಂದು ಯುವಕ ಕಿರುಕುಳ ನೀಡುತ್ತಿದ್ದು, ಇದರಿಂದ ವಿದ್ಯಾರ್ಥಿನಿ ಬೇಸತ್ತು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದ ಲಿಖಿತಾ (16) ಆತ್ಮಹತ್ಯೆಗೆ ಶರಣಾಗಿದ್ದು, ಚೇತನ್ ಎಂಬ ಹೆಸರಿನ ಯುವಕ ತನ್ನನ್ನು ಪ್ರೀತಿ ಮಾಡುವಂತೆ ಒತ್ತಾಯಿಸುತ್ತಿದ್ದು, ಈತನ ಕಿರುಕುಳ ತಡೆಯಲಾರದೆ ನಗರದ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗೆ ತಲೆಕೊಟ್ಟು ವಿದ್ಯಾರ್ಥಿನಿ ತನ್ನ ಬದುಕನ್ನು ಕೊನೆಗೊಳಿಸಿದ್ದಾಳೆ.