ಚಿಕ್ಕಮಗಳೂರು: ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಕಮ್ಮರಡಿ ಗ್ರಾಮದಲ್ಲಿ 6 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತೆ ಬಾಲಕಿಯ ಮೇಲೆ ಕಳೆದ 6 ತಿಂಗಳಿನಿಂದ ಅತ್ಯಾಚಾರ ಎಸಗುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಚೆನ್ನಾಗಿ ಥಳಿಸಿ ಪೋಲಿಸರಿಗೆ ಒಪ್ಪಿಸಿದ್ದಾರೆ.
ಹೌದು ಕಮ್ಮರಡಿ ಗ್ರಾಮದ ಅಹಮ್ಮದ್ ಬೇಗ್ (63) ವಯಸ್ಸಿನ ವ್ಯಕ್ತಿ ಅಪ್ರಾಪ್ತೆ ಬಾಲಕಿಗೆ ಕಳೆದ 6 ತಿಂಗಳಿನಿಂದ ಲೈಂಗಿಕ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ವ್ಯಕ್ತಿಯಾಗಿದ್ದು ಇಂದು ಅದು ಬೆಳಕಿಗೆ ಬಂದಿದ್ದು ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದನ್ನು ಕಡಂತಹ ಸಾರ್ವಜನಿಕರು ಆತನನ್ನ ಹಿಡಿದು ಥಳಿಸಿದ್ದಾಗ ಕಳೆದ 6 ತಿಂಗಳಿನಿಂದ ಅತ್ಯಾಚಾರ ದೌರ್ಜನ್ಯ ನಡೆಸಿರುವುದು ಬೆಳಕಿಗೆ ಬಂದಿದೆ. ಹರಿಹರಪುರ ಪೋಲಿಸ್ ಠಾಣೆಯ ಪೋಲಿಸರು ಆರೋಪಿಯನ್ನು ವಶಕ್ಕೆ ಪಡೆದು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.