News Kannada
Wednesday, February 01 2023

ಕರ್ನಾಟಕ

ಮಹಿಳಾ ಕಾಂಗ್ರೆಸ್ ನಿಂದ ತಮಟೆ ಪ್ರತಿಭಟನೆ : ಕೇಂದ್ರ ಸರಕಾರದ ವಿರುದ್ಧ ಬೀದಿಗಳಿದ ಮಹಿಳಾ ಬಣ

Photo Credit :

ಮಹಿಳಾ ಕಾಂಗ್ರೆಸ್ ನಿಂದ ತಮಟೆ ಪ್ರತಿಭಟನೆ : ಕೇಂದ್ರ ಸರಕಾರದ ವಿರುದ್ಧ ಬೀದಿಗಳಿದ ಮಹಿಳಾ ಬಣ

ಮಡಿಕೇರಿ: ನೋಟುಗಳನ್ನು ಅಮಾನ್ಯೀಕರಣ ಗೊಳಿಸಿದ ಕೇಂದ್ರ್ರ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದಿಂದ ನಗರದಲ್ಲಿ ‘ತಮಟೆ’ ಪ್ರತಿಭಟನೆ ನಡೆಯಿತು.

ನಗರದ ಜ| ತಿಮ್ಮಯ್ಯ ವೃತ್ತದ ಬಳಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಮಹಿಳಾ ಕಾಂಗ್ರೆಸ್ಸಿಗರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ದಿಢೀರ್ ನಿರ್ಧಾರದಿಂದಾಗಿ ದೇಶದಲ್ಲಿ ಆರ್ಥಿಕ ಸಂಕಷ್ಟ ಎದುರಾಗಿದ್ದು, ಇದು ಮಹಿಳೆಯರ ಮೇಲೆ ಹೆಚ್ಚಿನ ಪರಿಣಾಮ ಬೀರಿದೆಯೆಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

ಎಐಸಿಸಿ ಸಂಯೋಜಕಿ ಉಷಾ ನಾಯ್ಡು ಮಾತನಾಡಿ, ದೇಶದ ಜನರನ್ನು ಲೂಟಿ ಮಾಡುವುದಕ್ಕಾಗಿಯೆ ಕೇಂದ್ರ್ರದ ಬಿಜೆಪಿ ಸರ್ಕಾರ ಆರ್ಥಿಕ ಕ್ಷೇತ್ರದಲ್ಲಿ ಗೊಂದಲ ಸೃಷ್ಟಸಿದೆ ಎಂದು ಆರೋಪಿಸಿದರು. ಪರಿಸ್ಥಿತಿಯನ್ನು ಸರಿಪಡಿಸಲು 50 ದಿನಗಳ ಗಡುವು ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಈ ಪ್ರಯತ್ನದಲ್ಲಿ ವಿಫಲರಾಗಿದ್ದಾರೆ. ಇಷ್ಟು ದಿನ ಕಾದರು ಪರಿಸ್ಥತಿ ಬದಲಾಗದ ಕಾರಣ ಜನರು ಬೇಸತ್ತಿದ್ದು, ಕೇಂದ್ರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಕುಮುದಾ ಧರ್ಮಪ್ಪ ಮಾತನಾಡಿ, ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದರು. ಬ್ಯಾಂಕ್ ನಿಂದ ಹಣವನ್ನು ಪಡೆಯಲು ವಿಧಿಸಲಾಗಿರುವ ಎಲ್ಲಾ ನಿರ್ಬಂಧಗಳನ್ನು ತಕ್ಷಣ ತೆಗೆದು ಹಾಕಬೇಕು, ಠೇವಣಿ ಇಟ್ಟಿರುವ ಎಲ್ಲಾ ಠೇವಣಿದಾರರುಗಳಿಗೆ ನಿರ್ಬಂಧ ಹೇರಿದ ದಿನದಿಂದ ಶೇ.18 ರಷ್ಟು ವಿಶೇಷ ಬಡ್ಡಿಯನ್ನು ನೀಡಬೇಕು, ಡಿಜಿಟಲ್ ವ್ಯವಹಾರಗಳ ಮೇಲೆ ವಿಧಿಸಲಾಗಿರುವ ಎಲ್ಲಾ ರೀತಿಯ ಶುಲ್ಕಗಳನ್ನು ರದ್ದು ಪಡಿಸಬೇಕು, ಆಹಾರ ಭದ್ರತಾ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪಿಡಿಎಸ್ ವ್ಯವಸ್ಥೆಯ ಪ್ರಕಾರ ವಿತರಿಸಲಾದ ಪಡಿತರ ದರವನ್ನು ಅರ್ಧದಷ್ಟು ಕಡಿತಗೊಳಿಸಬೇಕು, ವಿಶೇಷ ಏಕ ಕಾಲಿಕ ಬೋನಸನ್ನು ಹಿಂಗಾರು ಬೆಳೆಗಳ ಮೇಲೆ ಶೇ.20 ರಷ್ಟು ಬೋನಸ್ ನೀಡಬೇಕು, ನೋಟುಗಳ ಅಮಾನ್ಯೀಕರಣದಿಂದ ಸಂಕಷ್ಟ ಎದುರಿಸಿದ ಬಿಪಿಎಲ್ ಪಡಿತರ ಚೀಟಿದಾರರ ಕುಟುಂಬದ ಒಬ್ಬ ಮಹಿಳೆಯ ಖಾತೆಗೆ ತಲಾ 20 ಸಾವಿರ ರೂ. ಪರಿಹಾರ ಠೇವಣಿ ನೀಡಬೇಕು, ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕೆಲಸದ ದಿನಗಳು ಮತ್ತು ವೇತನದ ದರವನ್ನು ದುಪ್ಪಟ್ಟು ಗೊಳಿಸಬೇಕು, ನ.8 ರಿಂದ ಯಾರೆಲ್ಲ ಕೆಲಸಗಳನ್ನು ಕಳೆದುಕೊಂಡಿದ್ದಾರೋ ಅವರನ್ನು ಗುರುತಿಸಲು ಮತ್ತು ನೋಂದಾಯಿಸಲು ಕೇಂದ್ರ ಸರ್ಕಾರ ವಿಶೇಷ ಆಂದೋಲನವನ್ನು ಆಯೋಜಿಸಬೇಕು ಮತ್ತು ಮಾ.31 ರ ವರೆಗೆ ಅನ್ವಯವಾಗುವಂತೆ ಕನಿಷ್ಠ ವೇತನ ದರದಲ್ಲಿ ಪರಿಹಾರ ನೀಡಬೇಕು, ಸಣ್ಣವ್ಯಾಪಾರಿಗಳಿಗೆ ಶೇ.50 ರಷ್ಟು ಆದಾಯ ತೆರಿಗೆ ಮತ್ತು ಮಾರಾಟ ತೆರಿಗೆ ವಿನಾಯ್ತಿ ನೀಡಬೇಕು, ಈ ರೀತಿಯ ವಿನಾಯ್ತಿಯಿಂದ ರಾಜ್ಯ ಸರ್ಕಾರಗಳಿಗೆ ಉಂಟಾದ ಆದಾಯದ ನಷ್ಟವನ್ನು ಕೇಂದ್ರ ಸರ್ಕಾರವೆ ಭರಿಸಬೇಕೆಂದು ಕುಮುದಾ ಧರ್ಮಪ್ಪ ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಬಾರ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಈಗಾಗಲೆ ಕೇಂದ್ರ ಸರ್ಕಾರಕ್ಕೆ ಆರ್ಥಿಕ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ವಿರೋಧ ಪಕ್ಷವಾದ ಕಾಂಗ್ರೆಸ್ ಕೇಳಿದ್ದು, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಇದಕ್ಕೆ ಪ್ರಧಾನಿಗಳು ಉತ್ತರಿಸಬೇಕೆಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಹಿಳಾ ಕಾಂಗ್ರೆಸ್ ಪ್ರಮುಖರು, ತಮ್ಮ ಕೊರಳಿಗೆ ಬೆಂಡೆ, ತೊಂಡೆ, ಮೆಣಸಿನ ಹಾರವನ್ನು ಹಾಕಿಕೊಂಡು, ತಮಟೆಗಳನ್ನು ಬಡಿದು, ಘೋಷಣೆಗಳನ್ನು ಕೂಗಿದ್ದು ವಿಶೇಷವಾಗಿತ್ತು.    

See also  ಚೌಟಿ ಮಾರಿಯಮ್ಮ ದೇಗುಲದ ಪುರಾತನ ಆಯುಧಗಳಿಗೆ ಪೂಜೆ

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ನೂತನ ಅಧ್ಯಕ್ಷೆ ಪುಷ್ಪಲತಾ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಾಜಿ ಸಚಿವೆ ಸುಮಾವಸಂತ್, ಪ್ರಮುಖರಾದ ಕೆ.ಪಿ. ಚಂದ್ರಕಲಾ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ಟಿ. ಪ್ರದೀಪ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು. ಅಬ್ದುಲ್ ರಜಾಕ್, ಕೆ.ಎಂ. ಲೋಕೇಶ್, ನಾಪಂಡ ಮುತ್ತಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಮಡಿಕೆೇರಿ ಬ್ಲಾಕ್ ಅಧ್ಯಕ್ಷ ಕೆ.ಎಂ. ಗಣೇಶ್, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಜಯಂತಿ ಶೆಟ್ಟಿ, ಸುರಯ್ಯಾ ಅಬ್ರಾರ್, ತಾಹಿರಾ ಹಫೀಜ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು