ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿಯಲ್ಲಿ ನಿನ್ನೆ ವಿದ್ಯಾರ್ಥಿ ಅಭಿಷೇಕ್ ಆತ್ಮಹತ್ಯೆಗೆ ಕಾಂಗ್ರೇಸ್ ಮುಖಂಡರು, ರಾಜ್ಯ ಸರ್ಕಾರವೇ ಕಾರಣವೆಂದು ಆರೋಪಿಸಿ ಎಬಿವಿಪಿ ವಿದ್ಯಾರ್ಥಿ ಸಂಘಟನೆಯಿಂದ ಜಿಲ್ಲಾದ್ಯಾಂತ ಪ್ರತಿಭಟನೆ ನಡೆಯಿತು.
ಶೃಂಗೇರಿಯಲ್ಲಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಅಡಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನೆಗೆ ಎಬಿವಿಪಿ ಯ ರಾಷ್ಟ್ರೀಯ ಕಾರ್ಯದರ್ಶಿ ವಿನಯ ಬಿದಿರೆ ಸಾಥ್ ನೀಡಿದರು.
ಪ್ರತಿಭಟನಾ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಸಿ ಸರ್ಕಾರ ಮತ್ತು ಕಾಂಗ್ರೇಸ್ ಮುಖಂಡರ ವಿರುದ್ದ ಧಿಕ್ಕಾರವನ್ನು ಕೂಗಿದರು. ನಗರದಲ್ಲೂ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಧರಣಿ ನಡೆಸಿದರು.
ಅಭಿಷೇಕ್ ಆತ್ಮಹತ್ಯೆಗೆ ಸ್ಥಳೀಯ ಕಾಂಗ್ರೇಸ್ ಮುಖಂಡರು, ರಾಜ್ಯ ಸರ್ಕಾರವೇ ಕಾರಣವಾಗಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ನಂತರ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿ ಅಭಿಷೇಕ್ ಸಾವಿಗೆ ನ್ಯಾಯ ಓದಗಿಸಬೇಕು ಎಂದು ಆಗ್ರಹಿಸಿದರು.