News Kannada
Saturday, February 04 2023

ಕರ್ನಾಟಕ

ರೈತರ ಸಾಲ ಮನ್ನಾ ಮಾಡಲು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಒತ್ತಾಯ

Photo Credit :

ರೈತರ ಸಾಲ ಮನ್ನಾ ಮಾಡಲು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಒತ್ತಾಯ

ಮಡಿಕೇರಿ: ತೀವ್ರ ಬರ ಪರಿಸ್ಥಿತಿಯಿಂದಾಗಿ ರಾಜ್ಯದ 140 ತಾಲ್ಲೂಕುಗಳು ಸಂಕಷ್ಟದಲ್ಲಿರುವುದರಿಂದ ಸರಕಾರ ರೈತರ ಸಾಲ ಮನ್ನಾ ಮಾಡಬೇಕೆಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಒತ್ತಾಯಿಸಿದೆ.

ಕಲ್ಬುರ್ಗಿಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಆರಂಭಗೊಂಡ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಎರಡು ದಿನಗಳ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡಿರುವ ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಮನುಮುತ್ತಪ್ಪ ತಿಳಿಸಿದ್ದಾರೆ.  ರಾಜ್ಯವನ್ನು ಕಾಡುತ್ತಿರುವ ತೀವ್ರ ಬರದಿಂದಾಗಿ ಎಲ್ಲಾ ಕೃಷಿ ಬೆಳೆಗಳು ನಾಶವಾಗಿರುವುದರಿಂದ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು ಮತ್ತು ರೈತ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕೆಂದು ಕಾರ್ಯಕಾರಿಣಿ ಒತ್ತಾಯಿಸಿದೆ.

ರಾಜ್ಯದ ವಿವಿಧ ಜಿಲ್ಲೆಗಳ ಬಿಜೆಪಿ ಅಧ್ಯಕ್ಷರು ಸಭೆಯಲ್ಲಿ ಪಾಲ್ಗೊಂಡಿದ್ದು, ಕೊಡಗು ಜಿಲ್ಲೆಯ ಬರ ಪರಿಸ್ಥಿತಿಯ ವರದಿಯನ್ನು ಮನುಮುತ್ತಪ್ಪ ಮಂಡಿಸಿದರು. ಜಿ.ಪಂ ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಸ್.ಜಿ.ಮೇದಪ್ಪ ಹಾಗೂ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದಶರ್ಿ ಕಾಂತಿ ಸತೀಶ್ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರುಳೀಧರನ್, ರಾಜ್ಯಾಧ್ಯಕ್ಷರಾದ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದ ಗೌಡ, ರಮೇಶ್ ಜಿಗಜಿಣಗಿ, ವಿಧಾನಸಭೆಯ ಪ್ರತಿ ಪಕ್ಷದ ನಾಯಕರಾದ ಜಗದೀಶ್ ಶೆಟ್ಟರ್, ವಿಧಾನಪರಿಷತ್ನ ವಿರೋಧ ಪಕ್ಷದ ನಾಯಕರಾದ ಈಶ್ವರಪ್ಪ, ಶಾಸಕರಾದ ಆರ್.ಅಶೋಕ್, ಸಿ.ಟಿ.ರವಿ, ಅರವಿಂದ್ ಲಿಂಬಾವಳಿ ಉಪಸ್ಥಿತಿಯಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿ ಜ.22 ರಂದು ಸಮಾರೋಪಗೊಳ್ಳಲಿದೆ ಎಂದು ಮನುಮುತ್ತಪ್ಪ ತಿಳಿಸಿದ್ದಾರೆ.  

See also  ಬೆಳ್ತಂಗಡಿ ತ್ರೈಮಾಸಿಕ ಸಭೆಯಲ್ಲಿ ಮಹತ್ವದ ಚರ್ಚೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು