News Kannada
Tuesday, January 31 2023

ಕರ್ನಾಟಕ

ಜಿಲ್ಲಾಡಳಿತಕ್ಕೆ ಕಗ್ಗಂಟಾದ ದಿಡ್ಡಳ್ಳಿ ಗೊಂದಲ: ಸರಕಾರಕ್ಕೆ ವರದಿ ಸಲ್ಲಿಕೆ

Photo Credit :

ಜಿಲ್ಲಾಡಳಿತಕ್ಕೆ ಕಗ್ಗಂಟಾದ ದಿಡ್ಡಳ್ಳಿ ಗೊಂದಲ: ಸರಕಾರಕ್ಕೆ ವರದಿ ಸಲ್ಲಿಕೆ

ಮಡಿಕೇರಿ: ದಿಡ್ಡಳ್ಳಿ ವ್ಯಾಪ್ತಿಯಲ್ಲಿ ನಿರಾಶ್ರಿತರೆಂದು ಹೇಳಿಕೊಂಡು ನೆಲೆ ನಿಂತವರಿಗೆ ಈಗಾಗಲೆ ಜಿಲ್ಲೆಯ ವಿವಿಧೆಡೆ ಗುರುತಿಸಿರುವ ಸುಮಾರು 30 ಏಕರೆ ಪ್ರದೇಶದಲ್ಲಿ ನಿವೇಶನ ಹಂಚಿಕೆ ಮಾಡಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಸರಕಾರಕ್ಕೆ ವರದಿ ಸಲ್ಲಿಸಿದ್ದು, ಸರಕಾರದ ಆದೇಶದ ಆಧಾರದಲ್ಲಿ ದಿಡ್ಡಳ್ಳಿಯಿಂದ ತೆರಳಲು ಒಪ್ಪದ ಕುಟುಂಬಗಳ ಭವಿಷ್ಯ ನಿರ್ಧಾರವಾಗಲಿದೆ.

ಕಳೆದ ಒಂದೂವರೆ ತಿಂಗಳಿನಿಂದ ದಿಡ್ಡಳ್ಳಿಯಲ್ಲಿ ಆಶ್ರಯ ಪಡೆದು ತೀವ್ರ ಪ್ರತಿಭಟನೆಯ ಮೂಲಕ ಸರ್ಕಾರದ ಗಮನ ಸೆಳೆದ 570ಕ್ಕೂ ಅಧಿಕ ಕುಟುಂಬಗಳು ಇದೀಗ ಅತಂತ್ರ ಸ್ಥಿತಿಯನ್ನು ಅನುಭವಿಸುತ್ತಿವೆ. ನಿವೇಶನ ರಹಿತರು ಎಂದು ಹೇಳಿಕೊಂಡು ನಿವೇಶನದ ಹಕ್ಕಿಗಾಗಿ ಹೋರಾಟ ನಡೆಸಿ ಇದೀಗ ಸರ್ಕಾರ ನಿವೇಶನ ಗುರುತಿಸಿ ಹಂಚಿಕೆ ಮಾಡುವ ಕಾರ್ಯಕ್ಕೆ ತ್ವರಿತವಾಗಿ ಕಾರ್ಯೋನ್ಮುಖವಾಗಿದ್ದರೂ ದಿಡ್ಡಳ್ಳಿಯಲ್ಲಿ ನೆಲೆ ನಿಂತಿರುವ ಕುಟುಂಬಗಳಿಗೆ ಬೆಂಬಲವಾಗಿ ಹೋರಾಟ ನಡೆಸುತ್ತಿರುವ ಕೆಲವು ಸಂಘಟನೆಗಳು ಈ ಹಿಂದೆ ಇದ್ದ ಪ್ರದೇಶದಲ್ಲೆ ಭೂಮಿಯ ಹಕ್ಕನ್ನು ನೀಡಬೇಕೆಂದು ಒತ್ತಡ ಹೇರುತ್ತಿವೆ. ಆದರೆ, ಸರ್ಕಾರದ ಆದೇಶದಂತೆ ಜಿಲ್ಲಾಡಳಿತ ವೀರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕಿನ ವಿವಿಧೆಡೆ ಸುಮಾರು 30 ಏಕರೆ ಜಾಗ ಗುರುತಿಸಿ 528 ಕುಟುಂಬಗಳಿಗೆ ನಿವೇಶನವನ್ನು ಹಂಚಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡು ಇತ್ತೀಚೆಗೆ ಲಾಟರಿ ಮೂಲಕ ಅರ್ಹ ಫಲಾನುಭವಿಗಳಿಗೆ ನಿವೇಶನದ ಹಕ್ಕುಪತ್ರ ನೀಡುವ ಕಾರ್ಯವನ್ನು ಕೂಡ ಮಾಡಿತ್ತು.

ಸರಕಾರದ ಪ್ರಯತ್ನಕ್ಕೆ ಹಿನ್ನಡೆ:
ಆದರೆ, ಯಾರೊಬ್ಬರು ಜಿಲ್ಲಾಡಳಿತದ ಈ ಕ್ರಮವನ್ನು ಸ್ವಾಗತಿಸದೆ ಇರುವುದರಿಂದ ಮತ್ತು ಜಿಲ್ಲಾಡಳಿತ ಗುರುತಿಸಿದ ಪ್ರದೇಶಕ್ಕೆ ತೆರಳಲು ಒಪ್ಪದೆ ಇರುವುದರಿಂದ ಸರ್ಕಾರ ಮತ್ತು ಜಿಲ್ಲಾಡಳಿತದ ಪ್ರಯತ್ನಗಳಿಗೆ ತೀವ್ರ ಹಿನ್ನಡೆಯಾಗಿದೆ. ಇತ್ತೀಚೆಗೆ ಇಲ್ಲಿ ನಡೆದಿರುವ ಎಲ್ಲಾ ಬೆಳವಣಿಗೆಗಳ ಬಗ್ಗೆ ಮತ್ತು ತಾನು ತೆಗೆದುಕೊಂಡಿರುವ ಕ್ರಮಗಳ ಕುರಿತು ಜಿಲ್ಲಾಡಳಿತ ಈಗಾಗಲೆ ಸರ್ಕಾರಕ್ಕೆ ವರದಿಯನ್ನು ಸಲ್ಲಿದೆ.

ಸರ್ಕಾರ ಈ ವರದಿಯನ್ನು ಆಧರಿಸಿ ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಹೊರಡಿಸಬಹುದಾದ ಆದೇಶವನ್ನು ಜಿಲ್ಲಾಡಳಿತ ಎದುರು ನೋಡುತ್ತಿದೆ. ಸೋಮವಾರಪೇಟೆ ಮತ್ತು ವೀರಾಜಪೇಟೆ ತಾಲ್ಲೂಕಿನಲ್ಲಿ ಗುರುತಿಸಿರುವ ನಿವೇಶನಗಳನ್ನು ಆಯಾ ಪ್ರದೇಶದ ನಿವೇಶನ ರಹಿತರಿಗೆ ಹಂಚಬೇಕೆನ್ನುವ ಒತ್ತಡವಿದೆ. ಆದರೆ, ಆಯಾ ಪ್ರದೇಶದ ನಿರಾಶ್ರಿತರಿಗೆಂದು ಗುರುತಿಸಿರುವ ಜಾಗವನ್ನು ಹೊರತು ಪಡಿಸಿದಂತೆ ಹೆಚ್ಚುವರಿ ಜಾಗವನ್ನು ದಿಡ್ಡಳ್ಳಿ ನಿರಾಶ್ರಿತರಿಗೆ ಗುರುತಿಸಿರುವುದಾಗಿ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ಇಕ್ಕಟ್ಟಿಗೆ ಸಿಲುಕಿದ ಜಿಲ್ಲಾಡಳಿತ:
ಮತ್ತೊಂದೆಡೆ ಈ ಹಿಂದೆ ಇದ್ದ ದಿಡ್ಡಳ್ಳಿಯ ಪ್ರದೇಶದಲ್ಲೆ 570ಕ್ಕೂ ಹೆಚ್ಚಿನ ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಬೇಕೆಂದು ಒತ್ತಾಯಿಸಿ ಫೆ.14 ರಿಂದ ಹೋರಾಟವನ್ನು ತೀವ್ರಗೊಳಿಸುವ ಕುರಿತು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಎಚ್ಚರಿಕೆಯನ್ನು ನೀಡಿದೆ. ಒಟ್ಟಿನಲ್ಲಿ ನಿವೇಶನ ರಹಿತರಿಗೆ ನಿವೇಶನ ನೀಡಲು ಸರ್ಕಾರ ತ್ವರಿತವಾಗಿ ಕ್ರಮಗಳನ್ನು ಕೈಗೊಂಡಿದ್ದರೂ ದಿಡ್ಡಳ್ಳಿಯಲ್ಲೆ ನಿವೇಶನ ಹಂಚಿಕೆ ಮಾಡಬೇಕೆನ್ನುವ ಒತ್ತಡ ಸರ್ಕಾರ ಮತ್ತು ಜಿಲ್ಲಾಡಳಿತವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

See also  ಅಂಬೇಡ್ಕರ್ ಭವನಕ್ಕೆ ಜಮೀನು ಹಸ್ತಾಂತರ ವಿಫಲ: ಸ್ವಾತಂತ್ರ್ಯ ದಿನಾಚರಣೆಯಂದು ಕರಾಳ ದಿನಾಚರಣೆಗೆ ನಿರ್ಧಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು