ಗುಂಡ್ಲುಪೇಟೆ: ಅಕ್ರಮವಾಗಿ ಕಲ್ಲು ಹಾಗೂ ಮರಳು ಸಾಗಾಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ಹಾಗೂ ಲಾರಿಯನ್ನು ವಶಕ್ಕೆ ಪಡೆದ ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಚಾಮರಾಜನಗರದಿಂದ ತಾಲೂಕಿನ ಕಬ್ಬಹಳ್ಳಿ ಮಾರ್ಗವಾಗಿ ಬೃಹತ್ ಗಾತ್ರದ ಕರಿಕಲ್ಲನ್ನು ಸಾಗಾಣೆ ಮಾಡುತ್ತಿದ್ದ ಲಾರಿ ಹಾಗೂ ಮರಳು ಸಾಗಾಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ಅನ್ನು ಜಿಲ್ಲಾ ಅಪರಾಧ ದಳದ ಪೊಲೀಸರು ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದ ಬಳಿ ದಾಳಿ ಮಾಡಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆ ನಡೆಸಲು ಬಂದ ಪೊಲೀಸರನ್ನು ಕಾಣುತ್ತಿದ್ದಂತೆಯೇ ಚಾಲಕರು ಲಾರಿಯನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಲಾರಿಗಳನ್ನು ವಶಕ್ಕೆ ಪಡೆದು ಪಟ್ಟಣ ಪೊಲೀಸ್ ಠಾಣೆಯ ಆವರಣದಲ್ಲಿ ನಿಲ್ಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.