ಮೂಡಿಗೆರೆ: ಕಳ್ಳಬಟ್ಟಿ ತಯಾರಿಸುತ್ತಿದ್ದ ಎರಡು ಮನೆಗಳ ಮೇಲೆ ದಾಳಿ ನಡೆಸಿದ ಅಬಕಾರಿ ಪೊಲೀಸರು ಓರ್ವನನ್ನು ಬಂಧಿಸಿದ್ದು, ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ.
ಬಣಕಲ್ ಹೋಬಳಿ ತ್ರಿಪುರ ಗ್ರಾಮದಲ್ಲಿ ಕಳ್ಳಬಟ್ಟಿ ತಯಾರಿಸುತ್ತಿದ್ದ ಮನೆಗಳ ಮೇಲೆ ಧಾಳಿ ನಡೆಸಿದಾಗ 4 ಲೀಟರ್ ಕಳ್ಳಬಟ್ಟಿ, 90 ಲೀಟರ್ ಬೆಲ್ಲದ ಕೊಳೆ ಹಾಗೂ ಕಳ್ಳಬಟ್ಟಿ ತಯಾರಿಕಾ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ತ್ರಿಪುರ ಗ್ರಾಮದ ಮಹೇಶ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಇನ್ನೋರ್ವ ಆರೋಪಿ ಕೃಷ್ಣಪ್ಪ ತಲೆಮರೆಸಿಕೊಂಡಿದ್ದಾನೆ. ಈತನ ಬಂಧನಕ್ಕೆ ಅಬಕಾರಿ ಪೊಲೀಸರು ಬಲೆ ಬೀಸಿದ್ದಾರೆ.