News Kannada
Sunday, February 05 2023

ಕರ್ನಾಟಕ

ವೇತನಕ್ಕಾಗಿ ಪ್ರತ್ಯೇಕ ಅನುದಾನ ಮೀಸಲಿಡಲು ಗ್ರಾ.ಪಂ ನೌಕರರ ಒತ್ತಾಯ

Photo Credit :

ವೇತನಕ್ಕಾಗಿ ಪ್ರತ್ಯೇಕ ಅನುದಾನ ಮೀಸಲಿಡಲು ಗ್ರಾ.ಪಂ ನೌಕರರ ಒತ್ತಾಯ

ಮಡಿಕೇರಿ: ಪ್ರಸಕ್ತ ವರ್ಷ ರಾಜ್ಯ ಸರ್ಕಾರ ಮಂಡಿಸಲಿರುವ ಬಡ್ಜೆಟ್ ನಲ್ಲಿ ಗ್ರಾ.ಪಂ ನೌಕರರಿಗೆ ಪ್ರತ್ಯೇಕ ಅನುದಾನ ಮೀಸಲಿಡಬೇಕೆಂದು ಒತ್ತಾಯಿಸಿ ವಿಧಾನಸೌಧದ ಎದುರಿನಲ್ಲಿ ಅನಿರ್ದಿಷ್ಟಾವಧಿಯ ಹೋರಾಟ ಆರಂಭಗೊಂಡಿದೆ. ಮಾ.28 ರಂದು ಕೊಡಗು ಜಿಲ್ಲೆಯ ಗ್ರಾ.ಪಂ ನೌಕರರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಗ್ರಾಮ ಪಂಚಾಯ್ತಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಪಿ.ಆರ್.ಭರತ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 6022 ಗ್ರಾಮ ಪಂಚಾಯ್ತಿಗಳ ಸುಮಾರು 56 ಸಾವಿರ ನೌಕರರು ಕನಿಷ್ಠ ವೇತನಕ್ಕಾಗಿ ಒತ್ತಾಯಿಸಿ ಕಳೆದ ಅನೇಕ ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದರೂ ಯಾವುದೇ ಸರ್ಕಾರ ಬೇಡಿಕೆಗೆ ಸ್ಪಂದಿಸಿಲ್ಲವೆಂದು ಆರೋಪಿಸಿದರು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಲ್ಲಿ ಇಚ್ಛಾಶಕ್ತಿಯ ಕೊರತೆ ಇದ್ದು, ಗ್ರಾ.ಪಂ ಪಿಡಿಒಗಳು ಸರ್ಕಾರದ ಆದೇಶ ಪಾಲಿಸುತ್ತಿಲ್ಲವೆಂದು ಟೀಕಿಸಿದರು.

ಕಳೆದ ಅನೇಕ ತಿಂಗಳುಗಳಿಂದ ವೇತನ ಸಿಗದೆ ನೌಕರರು ಸಂಕಷ್ಟದಲ್ಲಿದ್ದಾರೆ. 2016 ಆ.14 ರಂದು ಕಾರ್ಮಿಕ ಇಲಾಖೆ ಕನಿಷ್ಠ ವೇತನ ನಿಗದಿಪಡಿಸಿ ಆದೇಶ ಹೊರಡಿಸಿದೆ. 3ನೇ ಹಣಕಾಸು ಆಯೋಗವು ಕನಿಷ್ಠ ವೇತನಕ್ಕೆ ಬೇಕಾಗುವ ಹಣವನ್ನು ಸರ್ಕಾರವೇ ಭರಿಸಬೇಕೆಂದು ಶಿಫಾರಸ್ಸು ಮಾಡಿದೆ. ಈಗಾಗಲೇ 2ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ನಗರಾಭಿವೃದ್ಧಿ ಇಲಾಖೆಯಲ್ಲಿ ವೇತನಕ್ಕೆ ಬೆೇಕಾಗುವ ಅನುದಾನವನ್ನು ಸರ್ಕಾರವೇ ಭರಿಸುತ್ತಿದೆ.

ಪುರಸಭೆ, ಪಟ್ಟಣ ಪಂಚಾಯ್ತಿ, ಬಿಬಿಎಂಪಿ ಮತ್ತು ಮಹಾನಗರ ಪಾಲಿಕೆಗಳ ಸಿಬ್ಬಂದಿಗಳಿಗೆ ಶೇ.75 ರಷ್ಟು ವೇತನವನ್ನು ಸರ್ಕಾರವೇ ನೀಡಲು ಮುಖ್ಯಮಂತ್ರಿಗಳ ನೇತೃತ್ವದ ಸಭೆ ನಿರ್ಧರಿಸಿದೆ. ಆದರೆ, ಗ್ರಾಮ ಪಂಚಾಯ್ತಿ ನೌಕರರನ್ನು ಮಾತ್ರ ಕಡೆಗಣಿಸಲಾಗಿದ್ದು, ವೇತನ ನೀಡುವುದಕ್ಕು ಮಾನದಂಡವನ್ನು ವಿಧಿಸಲಾಗುತ್ತಿದೆ ಎಂದು ಭರತ್ ಆರೋಪಿಸಿದರು.

ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಮಾ.15 ರ ನಂತರ ಮಂಡಿಸಲಿರುವ ಬಜೆಟ್ ನಲ್ಲಿ ಗ್ರಾಮ ಪಂಚಾಯ್ತಿ ನೌಕರರಿಗೆ ಕನಿಷ್ಠ ವೇತನ ನೀಡಲು ಪ್ರತ್ಯೇಕ ಅನುದಾನ ಮೀಸಲಿಡಬೇಕೆಂದು ಒತ್ತಾಯಿಸಿದರು. ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಮಾ.6 ರಿಂದ ರಾಜ್ಯ ವ್ಯಾಪಿ ಗ್ರಾಮ ಪಂಚಾಯ್ತಿಗಳ ನೌಕರರು ಪ್ರತಿಭಟನೆಯನ್ನು ಆರಂಭಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಸುಮಾರು 800ಕ್ಕೂ ಅಧಿಕ ನೌಕರರಿದ್ದು, ಇವರುಗಳು ಮಾ.28 ರಂದು ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರತ್ಯೇಕ ಅನುದಾನದ ಬಗ್ಗೆ ಅಧಿವೇಶನದಲ್ಲಿ ಅನುಮೋದನೆ ದೊರೆಯುವವರೆಗೆ ಮುಷ್ಕರ ಮುಂದುವರಿಯಲಿದೆ ಎಂದು ಪಿ.ಆರ್.ಭರತ್ ತಿಳಿಸಿದರು.

ಬಜೆಟ್ ಮಂಡನೆಗೂ ಮೊದಲು ಬಂಡವಾಳ ಶಾಹಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವಂತೆ ಗ್ರಾ.ಪಂ ನೌಕರರೊಂದಿಗೂ ಸರ್ಕಾರ ಸಭೆ ನಡೆಸಬೇಕೆಂದು ಅವರು ಒತ್ತಾಯಿಸಿದರು. ಉಪಾಧ್ಯಕ್ಷ ಕೆ.ಎಂ.ಚಿಣ್ಣಪ್ಪ ಮಾತನಾಡಿ, ಕೊಡ್ಲಿಪೇಟೆ ಗ್ರಾ.ಪಂ ವ್ಯಾಪ್ತಿಯಲ್ಲಿ 30 ದಿನಗಳ ದುಡಿಮೆಗೆ 26 ದಿನದ ಸಂಬಳ ನೀಡಲಾಗುತ್ತಿದೆ. ಅಲ್ಲದೆ ಕೆಲಸದ ಒತ್ತಡ ಹೇರಲಾಗುತ್ತಿದೆಯೆಂದು ಆರೋಪಿಸಿದರು.
ಫೋಟೋ :: ಗ್ರಾಮ ಪಂಚಾಯತ್

See also  ಅಕ್ರಮ ಮರಳು ಸಾಗಾಟಕ್ಕೆ ಪ್ರೋತ್ಸಾಹಿಸಿದವರು ಸರ್ಕಲ್ ಇನ್ಸ್ಪೆಕ್ಟರ್ ಪರಶಿವಮೂರ್ತಿ: ತೇಜು ಕುಮಾರ್ ಆರೋಪ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು