ಹಾಸನ: ಜಮೀನಿಗೆ ಬಿದ್ದಿದ್ದ ಬೆಂಕಿ ನಂದಿಸಲು ಹೋಗಿ ರೈತರೊಬ್ಬರು ಸಜೀವ ದಹನವಾಗಿರೋ ಘಟನೆ ಜಿಲ್ಲೆಯ ಆಲೂರು ತಾಲೂಕು ಗಂಜಿಗೆರೆ ಗ್ರಾಮದಲ್ಲಿ ನಡೆದಿದೆ.
ಐವತೈದು ವರ್ಷದ ಪುಟ್ಟಸ್ವಾಮಿಗೌಡ ಸಜೀವ ದಹನವಾದ ರೈತ. ಇವರ ಜಮೀನಿಗೆ ಕಳೆದ ರಾತ್ರಿ ಬೆಂಕಿ ತಗುಲಿತ್ತು. ಬೆಂಕಿ ನಂದಿಸಲು ಹೋಗಿ ಪುಟ್ಟಸ್ವಾಮಿಗೌಡ ಅದರೊಳಗೆ ಸಿಲುಕಿ ಹೊರಬಾರಲಾರದೆ ಬೆಂದು ಹೋಗಿದ್ದಾರೆ. ಈ ಬಗ್ಗೆ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅತ್ತ ಬಳ್ಳಾರಿಯಲ್ಲಿನ ತೋರಣಗಲ್ನಲ್ಲಿ ಸಾಮಿಲ್ ಗೆ ಬೆಂಕಿ ಬಿದ್ದು ಕೋಟ್ಯಾಂತರ ರುಪಾಯಿ ಬೆಲೆ ಬಾಳುವ ಮರದ ದಿಮ್ಮಿಗಳು ಗುರುವಾರ ರಾತ್ರಿಯಿಡೀ ಹೊತ್ತಿ ಉರಿದಿವೆ. ಜಮಾಲುದ್ದಿನ್ ಅನ್ನೋರಿಗೆ ಸೇರಿದ್ದ ಸಾಮಿಲ್ ನಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಅಂದಾಜು ಒಂದೂವರೆ ಕೋಟಿ ರೂ. ಮೌಲ್ಯದ ಮರದ ದಿಮ್ಮಿಗಳು ಸುಟ್ಟು ಕರಕಲಾಗಿವೆ. ಇನ್ನು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ನಾಲ್ಕು ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟರು.