ಗುಂಡ್ಲುಪೇಟೆ: ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಹುಚ್ಚ ಎನ್ನುವ ಭಾವನೆ ಬರುವಂತಹ ಪದಗಳನ್ನು ಬಳಕೆ ಮಾಡಿರುವುದನ್ನು ಪ್ರಶ್ನಿಸಿ ಬಿಜೆಪಿ ಯುವಮೋರ್ಚಾ ಘಟಕ ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಭಾನುವಾರ ಗುಂಡ್ಲುಪೇಟೆ ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಸಮ್ಮುಖದಲ್ಲೇ ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುತ್ತಾ, ಹುಚ್ಚನ ಕೈಯಲ್ಲಿ ಕತ್ತಿ ಕೊಟ್ಟು ಕ್ಷೌರ ಮಾಡಿಸಿಕೊಳ್ಳುವ ಸ್ಥಿತಿಗೆ ಬಂದಿದ್ದೇವೆ ಎನ್ನುವ ಮಾತನಾಡಿ, ಪ್ರಧಾನಿ ಆಡಳಿತದ ಬಗ್ಗೆ ವ್ಯಂಗ್ಯವಾಡಿದ್ದನ್ನು ಖಂಡಿಸಿರುವ ಯುವ ಮೋರ್ಚಾ ಗುಂಡ್ಲುಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಭಾನುವಾರ ರಾತ್ರಿ ದೂರು ದಾಖಲಿಸಿ ಸಿ.ಎಂ.ಇಬ್ರಾಹಿಂರವರು ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಒತ್ತಾಯಿಸಿದ್ದಲ್ಲದೇ, ಸವಿತಾ ಸಮಾಜಕ್ಕೂ ಅವರು ಕ್ಷಮೆ ಯಾಚಿಸಬೇಕು ಎಂದು ಯುವ ಮೋರ್ಚಾ ಅಧ್ಯಕ್ಷ ಹಂಗಳದ ಪ್ರಣವ್ ದೂರಿನಲ್ಲಿ ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಗುಂಡ್ಲುಪೇಟೆ ಠಾಣೆ ಸಬ್ಇನ್ಸ್ಪೆಕ್ಟರ್ ಸಂದೀಪ್ ಕುಮಾರ್ ಮುಂದಿನ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.