ಮಲೆಮಹದೇಶ್ವರಬೆಟ್ಟ: ಮಾಜಿ ಶಾಸಕಿ ಪರಿಮಳನಾಗಪ್ಪ ಭಾರತೀಯ ಜನತಾ ಪಾಟರ್ಿಗೆ ವಿಧ್ಯುಕ್ತವಾಗಿ ಸೇರ್ಪಡೆಗೊಂಡಿದ್ದಾರೆ. ಶ್ರೀ ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಕಾಲೇಜಿನ ಆವರಣದಲ್ಲಿ ನಡೆದ ಪರಿಮಳನಾಗಪ್ಪನವರ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು ಪರಿಮಳನಾಗಪ್ಪ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ನಮ್ಮ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದರು. ಉತ್ತರಪ್ರದೇಶದಲ್ಲಿ ಬಿಜೆಪಿಯು ಅತ್ಯಧಿಕ ಸ್ಥಾನಗಳನ್ನು ಗೆಲ್ಲುವುದರ ಮೂಲಕ ದೇಶದಲ್ಲಿಯೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ, ಕಾಂಗ್ರೆಸ್ ಪಕ್ಷ ಕೇವಲ ಏಳು ಸ್ಥಾನಗಳನ್ನು ಗೆಲ್ಲಿಸಿಕೊಳ್ಳುವುದರ ಮೂಲಕ ಕುಸಿದಿದೆ. ಈ ಗೆಲುವು ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳು ಬಿಜೆಪಿ ಪಕ್ಷದ ಮೇಲೆ ಇಟ್ಟಿರುವ ಭರವಸೆಯನ್ನು ಎತ್ತಿ ತೋರುತ್ತದೆ. ನನ್ನ ಅವಧಿಯಲ್ಲಿ ಚಾಮರಾಜನಗರ ಜಿಲ್ಲೆಗೆ 730 ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿ ನೀರಿಗಾಗಿ 230 ಕೋಟಿಯನ್ನು, ಶ್ರೀ ಮಲೆಮಹದೇಶ್ವರ ಸ್ವಾಮಿ ಪ್ರಾಧಿಕಾರಕ್ಕಾಗಿ 30 ಕೋಟಿಗಳನ್ನು ಮೀಸಲಿರಿಸಿದ್ದೆ. ರಾಜ್ಯವು 30 ವರ್ಷಗಳಲ್ಲಿ ಹಿಂದೆಂದೂ ಕಂಡು ಕೇಳರಿಯದ ಬರಗಾಲದಿಂದ ತತ್ತರಿಸಿದ್ದು ರೈತರು ಹೀನಾಯವಾದ ಬದುಕನ್ನು ಸಾಗಿಸುತ್ತಿದ್ದರೂ ಸಹ ರೈತರ ಸಾಲ ಮನ್ನಾ ಮಾಡಬೇಕಾದ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೇಂದ್ರದ ಕಡೆ ಬೊಟ್ಟು ಮಾಡಿ ತೋರಿಸುತ್ತಿರುವುದು ದುರದೃಷ್ಟಕರ ಎಂದರು.
ಪರಿಮಳನಾಗಪ್ಪನವರಿಗೆ ಸೂಕ್ತ ಸ್ಥಾನಮಾನ, ಗೌರವಗಳನ್ನು ನೀಡಲು ನಾವು ಬದ್ಧರಾಗಿದ್ದು, ಕಾರ್ಯಕರ್ತರು ಪಕ್ಷಕ್ಕೆ ಬೆಂಬಲ ಸೂಚಿಸುವುದರ ಮೂಲಕ ಬಿಜೆಪಿ ಅಭ್ಯಥರ್ಿಯನ್ನು ಗೆಲ್ಲಿಸಿಕೊಡಬೇಕು ಎಂದರು. ಪ್ರಸ್ತುತ ರಾಜ್ಯದಲ್ಲಿ ಬರ ಆವರಿಸಿದ್ದು ಜನಜಾನುವಾರುಗಳು ಸಾವನ್ನಪ್ಪುತ್ತಿದ್ದು ರೈತರು ಪಟ್ಟಣ ಪ್ರದೇಶಗಳಿಗೆ ಗುಳೆ ಹೋಗುತ್ತಿದ್ದಾರೆ ಹಾಗೂ ರೈತರ ಆತ್ಮಹತ್ಯೆ ಸಂಖ್ಯೆ ಹೆಚ್ಚಾಗಿದೆ ಆದರೆ ಸಿದ್ದರಾಮಯ್ಯನವರು ರೈತರ ಸಾಲ ಮನ್ನಾ ಮಾಡದೆ ಈ ರಾಜ್ಯದ ರೈತರಿಗೆ ಅನ್ಯಾಯವೆಸಗುತ್ತಿದ್ದಾರೆ ಎಂದು ದೂರಿದರು.
ಪಕ್ಷಕ್ಕೆ ಸೇರ್ಪಡೆಗೊಂಡ ಮಾಜಿ ಶಾಸಕಿ ಪರಿಮಳನಾಗಪ್ಪ ಮಾತನಾಡಿ ಪಕ್ಷ ಸೇರ್ಪಡೆಯ ಈ ಕಾರ್ಯಕ್ರಮವು ವರ್ಷಗಳ ಹಿಂದೆಯೇ ನಡೆಯಬೇಕಾಗಿತ್ತು ಆದರೆ ಮಹದೇಶ್ವರನ ಕೃಪೆ ಹಾಗೂ ಪತಿ ನಾಗಪ್ಪ ಅಭಿಮಾನಿಗಳ ಆಸೆಯ ಫಲವಾಗಿ ಶ್ರೀ ಮಲೆಮಹದೇಶ್ವರಸ್ವಾಮಿಯ ಸನ್ನಿಧಿಯಲ್ಲಿ ಯಡಿಯೂರಪ್ಪನವರ ಸಮ್ಮುಖದಲ್ಲಿ ನೆರವೇರುತ್ತಿರುವುದು ನನಗೆ ತುಂಬಾ ಸಂತಸ ತಂದಿದೆ ಎಂದರು.
ಬಿಜೆಪಿ ಮುಖಂಡ ಎ.ಆರ್.ಕೃಷ್ಣಮೂರ್ತಿ, ಪೊನ್ನಾಚಿ ಮಹದೇವಸ್ವಾಮಿ, ಮಾಜಿ ಸಚಿವ ರೇಣುಕಾಚಾರ್ಯ, ರಾಜ್ಯ ರೈತಮೋಚರ್ಾ ಅಧ್ಯಕ್ಷ ವಿಜಯಶಂಕರ್, ಜಿಲ್ಲಾಧ್ಯಕ್ಷ ಪ್ರೊ.ಮಲ್ಲಿಕಾಜರ್ುನಪ್ಪ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.