ಮದ್ದೂರು: 3ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಕೆ.ಎಂ.ದೊಡ್ಡಿ 3ನೇ ಬ್ಲಾಕ್ ನಲ್ಲಿ ನಡೆದಿದೆ.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾ ಸಮಿತಿ ಸದಸ್ಯ ಆರ್.ಗೋಪಾಲ್ ಪುತ್ರ, ಭಾರತಿ ಕಾಲೇಜಿನಲ್ಲಿ 3ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದ ಬಿ.ಪ್ರಸಾದ್ (22) ಮೃತ ಯುವಕ. ನೂತನವಾಗಿ ನಿರ್ಮಿಸುತ್ತಿದ್ದ 3ನೇ ಮಹಡಿಗೆ ನೀರು ಹಾಕಲೆಂದು ಪ್ರಸಾದ್ ಹೋಗಿದ್ದಾಗ ಕಾಲು ಜಾರಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದನು. ತಕ್ಷಣ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರಸಾದ್ ಮೃತಪಟ್ಟಿದ್ದಾನೆ.