News Kannada
Monday, January 30 2023

ಕರ್ನಾಟಕ

ಬಿಜೆಪಿಯಿಂದ ಕೊಡಗಿಗೆ ವಂಚನೆ: ಸಿಪಿಐಎಂ ಆರೋಪ

Photo Credit :

ಬಿಜೆಪಿಯಿಂದ ಕೊಡಗಿಗೆ ವಂಚನೆ: ಸಿಪಿಐಎಂ ಆರೋಪ

ಮಡಿಕೇರಿ: ಡಾ.ಕಸ್ತೂರಿ ರಂಗನ್ ವರದಿ ಸೇರಿದಂತೆ ಕೊಡಗಿಗೆ ಮಾರಕವಾಗಬಹುದಾದ ವಿವಾದಿತ ಯೋಜನೆಗಳು ಎದುರಾದಾಗಲೆಲ್ಲಾ ಸುಳ್ಳು ಭರವಸೆಗಳನ್ನೇ ನೀಡುತ್ತಾ ಬಂದಿರುವ ಬಿಜೆಪಿ ನಿರಂತರವಾಗಿ ಜಿಲ್ಲೆಯ ಜನತೆಯನ್ನು ವಂಚಿಸುತ್ತಾ ಬಂದಿದೆ ಎಂದು ಸಿಪಿಐಎಂ ನ ಜಿಲ್ಲಾ ಕಾರ್ಯದರ್ಶಿ ಡಾ.ಇ.ರಾ.ದುರ್ಗಾಪ್ರಸಾದ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೂಕ್ಷ್ಮ ಪರಿಸರ ವಲಯದ ವಿಚಾರದಲ್ಲಿ ಬಿಜೆಪಿ ಮುಖಂಡರು ಕರ್ನಾಟಕ ಸರಕಾರದ ವಿರುದ್ಧ ಆರೋಪ ಮಾಡುವ ಮೊದಲು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಸರಕಾರ ಜನಪರವಾಗಿ ಯಾವ ನಿರ್ಧಾರ ಕೈಗೊಂಡಿದೆ ಎನ್ನುವುದನ್ನು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು.

ಸೂಕ್ಷ್ಮ ಪರಿಸರ ವಲಯದ ವಿವಾದಕ್ಕೆ ಸಂಬಂಧಿಸಿದಂತೆ ಸೂಕ್ತ ರೀತಿಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಆಕ್ಷೇಪಣಾ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಿಲ್ಲವೆಂದು ರಾಜ್ಯದ ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಅರಣ್ಯ ಸಚಿವ ರಮಾನಾಥ ರೈ ಅವರು ವರದಿ ಸಲ್ಲಿಸಿರುವ ಬಗ್ಗೆ ದಾಖಲೆಗಳಿದ್ದು, ರಾಜ್ಯ ಸರಕಾರ ತನ್ನ ಜವಬ್ದಾರಿಯನ್ನು ನಿಭಾಯಿಸಿರುವುದಕ್ಕೆ ಸಾಕ್ಷ್ಯಗಳಿವೆ. ಬಿಜೆಪಿ ತನ್ನ ಜವಬ್ದಾರಿಯಿಂದ ನುಣುಚಿಕೊಳ್ಳುವುದಕ್ಕಾಗಿ ರಾಜ್ಯ ಸರಕಾರವನ್ನು ಟೀಕಿಸುತ್ತಿದೆ ಎಂದು ಡಾ.ದುರ್ಗಾಪ್ರಸಾದ್ ಆರೋಪಿಸಿದರು.    

ಜಿಲ್ಲೆಯನ್ನು ಪ್ರತಿನಿಧಿಸುವ ಸಂಸದರು ಸೇರಿದಂತೆ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಬಿಜೆಪಿ ಸಂಸದರು ಕೇಂದ್ರದಲ್ಲಿ ಅಧಿಕಾರದಲ್ಲಿರುವ ತಮ್ಮದೇ ಸರಕಾರದ ಮೇಲೆ ಒತ್ತಡ ಹೇರಿ ಯಾವ ರೀತಿಯಲ್ಲಿ ಜನಪರ ಕಾಳಜಿ ತೋರಿದ್ದಾರೆ ಎಂದು ಅವರು ಪ್ರಶ್ನಿಸಿದರು.

ಡಾ.ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರೂ ಆದ ಎಂ.ಪಿ.ಅಪ್ಪಚ್ಚು ರಂಜನ್ ಮತ್ತು ವಿರಾಜಪೇಟೆ ಶಾಸಕರಾದ ಕೆ.ಜಿ.ಬೋಪಯ್ಯ ಅವರುಗಳು ರಾಜ್ಯ ಸರಕಾರ ಮಂಡಿಸಿದ ಅಭಿಪ್ರಾಯ ಸರಿಯಿಲ್ಲ, ಸಮಿತಿಯ ಮೂಲಕವೇ 10 ಸಾವಿರಕ್ಕೂ ಅಧಿಕ ಆಕ್ಷೇಪಣಾ ಪತ್ರಗಳನ್ನು ಕೇಂದ್ರಕ್ಕೆ ಕಳುಹಿಸಲಾಗುವುದೆಂದು ಈ ಹಿಂದೆ ಭರವಸೆ ನೀಡಿದ್ದರು. ಇವರುಗಳು ಭರವಸೆಯಂತೆ ನಡೆದುಕೊಂಡಿದ್ದರೆ ಮತ್ತು ಕೇಂದ್ರದ ಮೇಲೆ ಒತ್ತಡ ಹೇರಿದ್ದರೆ ಇದೇ ಫೆಬ್ರವರಿ ತಿಂಗಳಿನಲ್ಲಿ ಮತ್ತೆ ಸೂಕ್ಷ್ಮ ಪರಿಸರ ವಲಯದ ಕುರಿತು ಮತ್ತೊಂದು ಕರಡು ಅಧಿಸೂಚನೆಯನ್ನು ಕೇಂದ್ರ ಸರಕಾರ ಹೇಗೆ ಹೊರಡಿಸಿತು ಎಂದು ಡಾ.ದುರ್ಗಾಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಸರಕಾರ ಈ ಹಿಂದೆಯೇ ಸಲ್ಲಿಸಿದ್ದ ಆಕ್ಷೇಪಣಾ ವರದಿಯನ್ನು ಕೇಂದ್ರ ಸರಕಾರ ಕಡೆಗಣಿಸಿದ್ದು, ಇದನ್ನು ಮರೆ ಮಾಚುವ ಉದ್ದೇಶದಿಂದ ಬಿಜೆಪಿ ಮಂದಿ ಕಾಂಗ್ರೆಸ್ ಸರಕಾರದ ವಿರುದ್ಧ ಟೀಕೆ ಮಾಡುವ ಮೂಲಕ ಜಿಲ್ಲೆಯ ಜನರ ಹಾದಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.  

ಲೋಕಸಭಾ ಚುನಾವಣೆಯ ಸಂದರ್ಭ ಜಿಲ್ಲಾ ಬಿಜೆಪಿ ವಕ್ತಾರರಾಗಿದ್ದ ಅಡ್ಡಂಡ ಸಿ.ಕಾರ್ಯಪ್ಪ ಅವರು ಕೇಂದ್ರದಲ್ಲಿ ಎನ್ಡಿಎ ಸರಕಾರ ಅಧಿಕಾರಕ್ಕೆ ಬಂದರೆ ಸೂಕ್ಷ್ಮ ಪರಿಸರ ವಲಯದ ವಿವಾದ ಬಗೆ ಹರಿಯಲಿದೆ ಎಂದು ಭರವಸೆ ನೀಡಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದು ಇಷ್ಟು ವರ್ಷವಾದರೂ ಜನಪರ ಕಾಳಜಿ ತೋರದೆ ಮತ್ತೆ ಕರಡು ಅಧಿಸೂಚನೆ ಹೊರಡಿಸಲಾಗಿದ್ದು, ಇದು ಬಿಜೆಪಿಯ ಹುಸಿ ಭರವಸೆಗಳಿಗೆ ಸಾಕ್ಷಿಯಾಗಿದೆ ಎಂದು ಟೀಕಿಸಿದರು.

See also  ಗ್ರಾಮ ಪಂಚಾಯ್ತಿಗೆ ಅವಿರೋಧ ಆಯ್ಕೆ

ಕೊಡಗಿನ ಮಟ್ಟಿಗೆ ಬಿಜೆಪಿಯ ಹುಸಿ ಭರವಸೆಯ ವಂಚನೆ ಹೊಸತೇನಲ್ಲ. ಡಾ.ಕಸ್ತೂರಿ ರಂಗನ್ ವರದಿ, ಬಾಣೆ ಸಮಸ್ಯೆ, ಕಾಫಿ ಬೆಳೆಗಾರರ ಸಂಕಷ್ಟ, ಕಾಡಾನೆ ಹಾವಳಿ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಬಿಜೆಪಿಯಿಂದ ಜಿಲ್ಲೆಯ ಜನತೆಗೆ ಯಾವುದೇ ರೀತಿಯಲ್ಲಿ ಪರಿಹಾರ ದೊರೆತ್ತಿಲ್ಲ. ಬಿಜೆಪಿ ಹಿಡಿತದಿಂದ ಜನ ಹೊರ ಬಾರದಿದ್ದಲ್ಲಿ ಮುಂದಿನ ದಿನಗಳಲ್ಲಿ ಕೊಡಗಿಗೆ ಭವಿಷ್ಯವಿಲ್ಲವೆಂದು ಟೀಕಿಸಿದ ಡಾ.ಇ.ರಾ.ದುರ್ಗಾಪ್ರಸಾದ್ ಬಿಜೆಪಿಯನ್ನು ತಿರಸ್ಕರಿಸುವಂತೆ ಕರೆ ನೀಡಿದರು.

ರಾಜ್ಯದ ಬಿಜೆಪಿ ಸಂಸದರು ಒಗ್ಗೂಡಿ ಕೇಂದ್ರದ ಮೇಲೆ ಒತ್ತಡ ಹೇರದ ಹೊರತು ಸೂಕ್ಷ್ಮ ಪರಿಸರ ವಲಯದ ವಿವಾದವನ್ನು ಬಗೆಹರಿಸಲು ಸಾಧ್ಯವಿಲ್ಲವೆಂದು ಅವರು ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಪ್ರಮುಖರಾದ ಎ.ಸಿ.ಸಾಬು ಉಪಸ್ಥಿತರಿದ್ದರು.
ಫೋಟೋ :: ಸಿಪಿಐಎಂ
===================================  
 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು