News Kannada
Sunday, January 29 2023

ಕರ್ನಾಟಕ

ರಿಯಾಜ್ ಮುಸ್ಲಿಯಾರ್ ಹತ್ಯೆಗೆ ಖಂಡನೆ: ಪಿಎಫ್ಐ ಪ್ರತಿಭಟನೆ

Photo Credit :

ರಿಯಾಜ್ ಮುಸ್ಲಿಯಾರ್ ಹತ್ಯೆಗೆ ಖಂಡನೆ: ಪಿಎಫ್ಐ ಪ್ರತಿಭಟನೆ

ಮಡಿಕೇರಿ: ಕಾಸರಗೋಡಿನ ಚೂರಿ ಎಂಬಲ್ಲಿ ಕೊಡಗಿನ ಕೊಟ್ಟಮುಡಿಯ ಮೂಲದವರಾದ ರಿಯಾಜ್ ಮುಸ್ಲಿಯಾರ್ ಎಂಬುವವರನ್ನು ಹತ್ಯೆ ಮಾಡಿದ ಪ್ರಕರಣವನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ) ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರಮುಖರು ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಮತ್ತು ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಜಿಲ್ಲಾಡಳಿತದ ಭವನಕ್ಕೆ ತೆರಳಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಕೊಟ್ಟಮುಡಿ ನಿವಾಸಿಯಾಗಿರುವ ರಿಯಾಜ್ ಮುಸ್ಲಿಯಾರ್(28) ಅವರು ಕಾಸರಗೋಡು ಜಿಲ್ಲೆಯ ಚೂರಿ ಎಂಬಲ್ಲಿನ ಮಸೀದಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಮಾ.20ರ ರಾತ್ರಿ ಮಸೀದಿಗೆ ನುಗ್ಗಿ ಅವರನ್ನು ಅಮಾನುಷವಾಗಿ ಕೊಲೆ ಮಾಡಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಈ ಹಿಂದೆಯೂ ಅಲ್ಲಿನ ಮತಾಂಧ ಶಕ್ತಿಗಳ ಕೃತ್ಯಕ್ಕೆ ಹಲವಾರು ಮಂದಿ ಮುಸ್ಲಿಂ ಯುವಕರು ಬಲಿಯಾಗಿದ್ದು, ಇದು ಅಲ್ಲಿನ ಫ್ಯಾಸಿಸ್ಟ್ ಶಕ್ತಿಗಳ ಅಟ್ಟಹಾಸಕ್ಕೆ ಉದಾಹರಣೆಯಾಗಿದೆ ಎಂದು ಪ್ರಮುಖರು ಆರೋಪಿಸಿದರು.

ಕೇರಳದ ವಿವಿಧ ಮದರಸಗಳಲ್ಲಿ ಕೊಡಗು ಜಿಲ್ಲೆಯ ಹಲವಾರು ಮಂದಿ ಕಾರ್ಯನಿರ್ವಹಿಸುತ್ತಿದ್ದು, ಮಾ.20ರಂದು ನಡೆದ ಘಟನೆಯಯಿಂದ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಸ್ಲಿಯಾರ್ ವರ್ಗದವರು ಭಯಭೀತರಾಗಿದ್ದಾರೆ. ಆದುದರಿಂದ ರಿಯಾಜ್ ಮುಸ್ಲಿಯಾರ್ ಅವರನ್ನು ಕೊಲೆ ಮಾಡಿದ ಮತಾಂಧ ಶಕ್ತಿಗಳನ್ನು ಕೂಡಲೇ ಬಂಧಿಸಿ, ಅತ್ಯಂತ ಬಡತನದಿಂದ ಜೀವನ ಸಾಗಿಸುತ್ತಿರುವ ಮುಸ್ಲಿಯಾರ್ ಕುಟುಂಬಕ್ಕೆ 25 ಲಕ್ಷ ರೂ.ಗಳ ಪರಿಹಾರ ನೀಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕೇರಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗಿನ ಮುಸ್ಲಿಂ ಜನಾಂಗಕ್ಕೆ ಸೂಕ್ತ ರಕ್ಷಣೆಯ ಅಗತ್ಯವಿದೆ ಎಂದರು. ಸಂಘಟನೆಯ ಜಿಲ್ಲಾಧ್ಯಕ್ಷ ಟಿ.ಎ.ಹಾರಿಸ್, ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹ್ಸಿನ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಡ್ಕಾರ್, ನಗರಾಧ್ಯಕ್ಷ ನೂರುದ್ದೀನ್, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಡಿ.ಎಸ್. ನಿರ್ವಾಣಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಫೋಟೋ :: ಪ್ರೊಟೆಸ್ಟ್

See also  ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ ಮೂವರಿಗೆ ಕೋವಿಡ್ 19 ಪಾಸಿಟಿವ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು