News Kannada
Monday, January 30 2023

ಕರ್ನಾಟಕ

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ: ಒಬ್ಬನ ಬಂಧನ

Photo Credit :

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ: ಒಬ್ಬನ ಬಂಧನ

ಮಡಿಕೇರಿ: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಮಡಿಕೇರಿ ನಗರದ ಕನ್ನಂಡ ಬಾಣೆ ಬಡಾವಣೆಯಲ್ಲಿ ನಡೆದಿದೆ. ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಆಟೋರಿಕ್ಷಾದಲ್ಲಿ ಬಂದ ದುಷ್ಕರ್ಮಿಗಳು ಈ ದುಷ್ಕೃತ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

                                                                                                                                                              ಆರೋಪಿ: ಕಾರ್ತಿಕ್

ಕನ್ನಂಡಬಾಣೆ ನಿವಾಸಿ ಗೋಕುಲ್ ಎಂಬಾತನೇ ಮೃತ ಯುವಕನಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮುಂಡೇಶ್ವರಿ ನಗರದ ನಿವಾಸಿ ಕಾರ್ತಿಕ್ ಎಂಬಾತನನ್ನು ಬಂಧಿಸಲಾಗಿದೆ.

ರಾತ್ರಿ ತನ್ನ ಮನೆಯತ್ತ ಬೈಕ್ ನಲ್ಲಿ ತೆರಳುತ್ತಿದ್ದ ಗೋಕುಲ್ ಮೇಲೆ ಆಟೋರಿಕ್ಷಾದಲ್ಲಿ ಬಂದಿದ್ದ ಹಂತಕರ ತಂಡ ಏಕಾಏಕಿ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಹಲ್ಲೆಯಿಂದ ಗೋಕುಲ್ ಕುತ್ತಿಗೆ ಹಾಗೂ ಎದೆ ಭಾಗಕ್ಕೆ ತೀವ್ರ ಗಾಯಗಳಾಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಸಂದರ್ಭ ಕಾರ್ತಿಕ್ ಚಾಮುಂಡೇಶ್ವರಿ ನಗರದ ಗಿಡಗಳ ನಡುವೆ ಬಚ್ಚಿಟ್ಟುಕೊಂಡಿರುವುದು ಕಂಡು ಬಂತು. ಗುರುವಾರ ನಸುಕು 4 ಗಂಟೆ ವೇಳೆಗೆ ಪೊಲೀಸರು ಈತನನ್ನು ಬಂಧಿಸುವಲ್ಲಿ ಯಶಸ್ವಿಯಾದರು.

ಕೆಲವು ದಿನಗಳ ಹಿಂದೆ ಯುವಕರ ಎರಡು ಗುಂಪುಗಳ ನಡುವೆ ನಡೆದಿದ್ದ ಕಲಹದ ವೈಷಮ್ಯವೇ ಕೊಲೆಗೆ ಕಾರಣವೆಂದು ಹೇಳಲಾಗಿದೆ. ಕೊಲೆಯಾದ 50 ಮೀಟರ್ ದೂರದಲ್ಲಿ ಕೆ.ಎ.12 ಎ.6526 ಸಂಖ್ಯೆಯ ಆಟೋರಿಕ್ಷಾವೊಂದು ಪತ್ತೆಯಾಗಿದೆ. ಇದರಲ್ಲಿ ರಕ್ತದ ಕಲೆಗಳು ಗೋಚರಿಸಿದ್ದು, ಹಂತಕರು ಕೊಲೆಗೆ ಇದೇ ಆಟೋವನ್ನು ಬಳಸಿರಬಹುದು ಎಂದು ಶಂಕಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಘಟನೆ ಸ್ಥಳಕ್ಕೆ ಭೇಟಿ ನೀಡಿದರು. ಬೆರಳಚ್ಚು ತಜ್ಞರು ಹಾಗೂ ಶ್ವಾನದಳದ ಸಿಬ್ಬಂದಿ ಪರಿಶೀಲನೆ ನಡೆಸಿದರು.

ಮಡಿಕೇರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕೃತ್ಯದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ನಗರದಲ್ಲಿ ನೈಟ್ ಬೀಟ್ ಕೊರತೆ:
ಮಡಿಕೇರಿ ನಗರದಲ್ಲಿ ಪೊಲೀಸರು ನೈಟ್ ಬೀಟ್ ಮಾಡುತ್ತಿಲ್ಲವೆಂದು ಆರೋಪಿಸಿರುವ ಸಾರ್ವಜನಿಕರು, ಮುಖ್ಯ ರಸ್ತೆಗಳಲ್ಲಿ ಮಾತ್ರ ಕಾಣಿಸಿಕೊಳ್ಳುವ ಸಿಬ್ಬಂದಿಗಳು ನಿರ್ಜನ ಪ್ರದೇಶದಲ್ಲಿ ಸಂಚರಿಸದೆ ಇರುವುದೇ ಈ ರೀತಿಯ ಘಟನೆಗಳಿಗೆ ಕಾರಣವೆಂದು ಅಭಿಪ್ರಾಯಪಟ್ಟಿದ್ದಾರೆ. ಇತ್ತೀಚೆಗೆ ಯುವಕರ ಗುಂಪುಗಳು ರಾತ್ರಿ ವೇಳೆಯಲ್ಲಿ ಮದ್ಯಪಾನ ಹಾಗೂ ಮಾದಕ ವಸ್ತುಗಳನ್ನು ಸೇವಿಸಿ ಪ್ರಚೋದನಾಕಾರಿಯಾಗಿ ನಡೆದುಕೊಳ್ಳುತ್ತಿರುವುದಲ್ಲದೆ ಗುಂಪು ಘರ್ಷಣೆಯಲ್ಲೂ ತೊಡಗುತ್ತಿರುವ ಬೆಳವಣಿಗೆ ಕಂಡು ಬಂದಿದೆ. ಪೊಲೀಸರು ನಿರ್ಜನ ಬಡಾವಣೆಗಳಲ್ಲೂ ರಾತ್ರಿ ಭೇಟಿ ಮಾಡಿ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

See also  ಬೈಕ್ ಗೆ ಟ್ಯಾಂಕರ್ ಡಿಕ್ಕಿ: ಅಣ್ಣ-ತಂಗಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು