News Kannada
Monday, January 30 2023

ಕರ್ನಾಟಕ

ರಿಯಾಝ್ ಮುಸ್ಲಿಯಾರ್ ಹತ್ಯೆಗೆ ಕಾಂಗ್ರೆಸ್ ಖಂಡನೆ

Photo Credit :

ರಿಯಾಝ್ ಮುಸ್ಲಿಯಾರ್ ಹತ್ಯೆಗೆ ಕಾಂಗ್ರೆಸ್ ಖಂಡನೆ

ಮಡಿಕೇರಿ: ಕಾಸರಗೋಡಿನ ಚೂರಿ ಗ್ರಾಮದಲ್ಲಿ ನಡೆದ ಮದ್ರಸ ಅಧ್ಯಾಪಕರಾದ ರಿಯಾಝ್ ಮುಸ್ಲಿಯಾರ್ ಅವರ ಹತ್ಯೆ ಪ್ರಕರಣವನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ತೀವ್ರವಾಗಿ ಖಂಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಘಟಕದ ಜಿಲ್ಲಾಧ್ಯಕ್ಷ ಕೆ.ಎ.ಯಾಕೂಬ್ ಮಕ್ಕಳಿಗೆ ಶಿಕ್ಷಣದ ಮೌಲ್ಯವನ್ನು ತಿಳಿಸುತ್ತಾ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಮದ್ರಸ ಅಧ್ಯಾಪಕರ ಮೇಲಿನ ದಾಳಿ ಅತ್ಯಂತ ಅಮಾನವೀಯವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕೊಡಗು ಮೂಲದವರಾದ ಅಮಾಯಕ ಶಿಕ್ಷಕ ರಿಯಾಜ್ ಮುಸ್ಲಿಯಾರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಬೇಕು ಮತ್ತು ಈ ಕೃತ್ಯದ ಹಿಂದಿನ ಶಕ್ತಿಯನ್ನು ಬಯಲಿಗೆಳೆದು ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಅವರು ಒತ್ತಾಯಿಸಿದರು.

ಮದ್ರಸ ಅಧ್ಯಾಪಕರ ಹತ್ಯೆಯಿಂದಾಗಿ ದೇಶದಲ್ಲಿ ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ ಎನ್ನುವ ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಕಾನೂನನ್ನು ಕೈಗೆತ್ತಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಬೆಳವಣಿಗೆ ವಿರುದ್ಧ ಕೇಂದ್ರ ಸರಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ. ಆಯಾ ರಾಜ್ಯ ಸರಕಾರಗಳು ಅಲ್ಪಸಂಖ್ಯಾತರ ರಕ್ಷಣೆಗೆ ಮುಂದಾಬೇಕು ಮತ್ತು ರಾಜಕೀಯ ಲಾಭಕ್ಕಾಗಿ ಮುಸಲ್ಮಾನರನ್ನು ಕೆಣಕಿ ಅಮಾಯಕರ ಜೀವ ತೆಗೆಯುವ ಹುನ್ನಾರ ನಡೆಸುತ್ತಿರುವ ಕೋಮು ಶಕ್ತಿಗಳನ್ನು ಮಟ್ಟ ಹಾಕಲು ಮುಂದಾಗಬೇಕೆಂದು ಕೆ.ಎ.ಯಾಕೂಬ್ ಆಗ್ರಹಿಸಿದರು.

ಅಲ್ಪಸಂಖ್ಯಾತರು ಕೋಮು ಸೌಹಾರ್ದತೆಯನ್ನು ಬಯಸುವ ಸಂದರ್ಭಗಳಲ್ಲಿ ಕೋಮು ಗಲಭೆಯ ವಿಷ ಬೀಜವನ್ನು ಭಿತ್ತಿ ಸಮಾಜದಲ್ಲಿ ಅಶಾಂತಿಯನ್ನು ಮೂಡಿಸಲಾಗುತ್ತಿದೆ. ರಾಜಕೀಯ ಲಾಭಕ್ಕಾಗಿ ಯಾವುದೇ ರೀತಿಯ ಹೇಯ ಕೃತ್ಯಕ್ಕೂ ಸಿದ್ಧ ಎನ್ನುವುದನ್ನು ಕೆಲವು ದುಷ್ಟ ಸಂಘಟನೆಗಳು ಸಾಬೀತು ಪಡಿಸುತ್ತಲೇ ಬಂದಿವೆ. ಈ ಬೆಳವಣಿಗೆಯಿಂದ ನಿತ್ಯ ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ದಿನ ಕಳೆಯಬೇಕಾದ ಪರಿಸ್ಥಿತಿ ಇದೆ ಎಂದು ಅವರು ಆರೋಪಿಸಿದರು. ಪೊಲೀಸ್ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಧಾರ್ಮಿಕ ಕೇಂದ್ರಗಳು ಹಾಗೂ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಪ್ರದೇಶದಲ್ಲಿ ಸೂಕ್ತ ಬಂದೋಬಸ್ತ್ ಒದಗಿಸಬೇಕೆಂದು ಒತ್ತಾಯಿಸಿದರು.

ಕಾಸರಗೋಡಿನ ಚೂರಿ ಗ್ರಾಮದಲ್ಲಿ ನಡೆದಿರುವ ಹತ್ಯಾ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಪ್ಪಿಸಬೇಕೆಂದು ಕೇಂದ್ರ ಸರಕಾರ ಹಾಗೂ ಕೇರಳ ಸರಕಾರವನ್ನು ಆಗ್ರಹಿಸುವುದಾಗಿ ತಿಳಿಸಿದ ಯಾಕೂಬ್ ಮೃತರ ಕುಟುಂಬಕ್ಕೆ ಕೇರಳ ಸರಕಾರ ರೂ.25 ಲಕ್ಷ ಪರಿಹಾರ ನೀಡಬೇಕೆಂದರು. ಸುದ್ದಿಗೋಷ್ಠಿಯಲ್ಲಿ ಅಲ್ಪಸಂಖ್ಯಾತರ ಘಟಕದ ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಎಜಾಜ್ ಅಹ್ಮದ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಅಬ್ದುಲ್ (ಬಾಪು) ನಾಪೋಕ್ಲು ಬ್ಲಾಕ್ ಅಧ್ಯಕ್ಷ ಬಶೀರ್ ಎಡಪಾಲ, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಹಾಗೂ ಮಡಿಕೇರ ನಗರಸಭೆ ನಾಮನಿರ್ದೇಶಿತ ಸದಸ್ಯ ಎಂ.ಎ.ಉಸ್ಮಾನ್ ಹಾಜರಿದ್ದರು. ಫೋಟೋ :: ಕಾಂಗ್ರೆಸ್

See also  ಮಳವಳ್ಳಿಯಲ್ಲಿ ಎರಡು ಮಕ್ಕಳಿಗೆ ಕೊರೊನಾ ಸೋಂಕು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು