ನಂಜನಗೂಡು: ಚುನಾವಣಾ ಪ್ರಚಾರಕ್ಕೂ ಬಾರದೆ ಪಕ್ಷದ ವೇದಿಕೆಗಳಲ್ಲೂ ಕಾಣಿಸಿಕೊಳ್ಳದೆ ಕಾಂಗ್ರೆಸ್ ನಿಂದ ದೂರವಿದ್ದ ನಟಿ, ಮಾಜಿ ಸಂಸದೆ ರಮ್ಯ ಅವರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಗುಸುಗುಸು ಕೇಳಿ ಬರುತ್ತಿದೆ.
ಆದರೆ ಅವರ ತಾಯಿ ರಂಜಿತ ಅವರು ಮಾತ್ರ ನನ್ನ ಮಗಳು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ ಎಂಬ ಸ್ಪಷ್ಟನೆಯನ್ನು ನೀಡಿದ್ದಾರೆ. ನಂಜನಗೂಡಿಗೆ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆಗೆ ಬಂದಿರುವ ರಂಜನ ಅವರು ಮತಯಾಚನೆ ಮಾಡಿ ಮತನಾಡಿ ನನ್ನ ಮಗಳಿಗೆ ಅನಾರೋಗ್ಯದ ಕಾರಣ ಪಕ್ಷದ ಚುನಾವಣಾ ಪ್ರಚಾರಕ್ಕೆ ಬರಲು ಸಾಧ್ಯವಾಗಿಲ್ಲ, ಆದರೆ ತಮಗಾಗದ ಕೆಲವರು ಬಿಜೆಪಿ, ಜೆಡಿಎಸ್ ಪಕ್ಷಗಳಿಗೆ ಸೇರಲಿದ್ದಾರೆ ಎಂಬ ಗಾಳಿಸುದ್ದಿಯನ್ನು ಹರಡುತ್ತಿದ್ದಾರೆ. ಇದು ಶುದ್ದ ಸುಳ್ಳು. ಇದನ್ನು ಯಾರು ನಂಬಬಾರದು.
ಮಗಳು ರಮ್ಯ ಗುಣಮುಖಳಾದ ತಕ್ಷಣವೇ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಲಿದ್ದಾರೆ ಎಂದರು. ನಂಜನಗೂಡು ವ್ಯಾಪ್ತಿಯಲ್ಲಿ ಮಹಿಳೆಯರು ಕಾಂಗ್ರೆಸ್ ನತ್ತ ಒಲವು ತೋರುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಅವರ ಗೆಲುವು ಖಚಿತ ಎಂದು ಹೇಳಿದರು.